ಮಂಗಳೂರು (ಜು.04): ರಾಜ್ಯದಲ್ಲಿ ನಾಳೆಯಿಂದಲೇ ಧಾರ್ಮಿಕ ಕೇಂದ್ರಗಳು ಓಪನ್ ಆಗಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಯೂ ನಾಳೆ (ಜು.05)ಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ನಾಳೆಯಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ: 3 ತಿಂಗಳು ಜೈಲು ಶಿಕ್ಷೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು 10 ಗಂಟೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂದು ಸಭೆ ನಡೆಯಲಿದೆ.
ಸಭೆ ನಡೆದ ಬಳಿಕ ನಾಳೆಯ ದರ್ಶನಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಭೆಯಲ್ಲಿ ದರ್ಶನದ ಸಮಯ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಇಂದಿನ ಸಭೆ ಬಳಿಕ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ದರ್ಶನದ ನಿಯಾಮಾವಳಿಗಳ ಬಗ್ಗೆ ಭಕ್ತರಿಗೆ ಮಾಹಿತಿ ನೀಡಲಾಗುತ್ತದೆ.