ಜೂನ್‌ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

By Kannadaprabha News  |  First Published May 28, 2020, 9:12 AM IST

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್‌ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸರ್ಕಾರದ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ ಕ್ಷೇತ್ರದ ವತಿಯಿಂದ ಅತ್ಯಂತ ಕಾಳಜಿ ವಹಿಸಲಾಗುತ್ತಿದ್ದು ಕರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ.


ಬೆಳ್ತಂಗಡಿ(ಮೇ 28): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್‌ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸರ್ಕಾರದ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ ಕ್ಷೇತ್ರದ ವತಿಯಿಂದ ಅತ್ಯಂತ ಕಾಳಜಿ ವಹಿಸಲಾಗುತ್ತಿದ್ದು ಕರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ.

ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಬಳಕೆ, ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಅಂತರ ಕಾಯ್ದುಕೊಳ್ಳಲು ಪೂರ್ವ ತಯಾರಿ ಮಾಡಲಾಗುವುದು. ವಸತಿ ವ್ಯವಸ್ಥೆ ಬಗ್ಗೆ ಯಾವುದೇ ತೀರ್ಮಾನ ಸದ್ಯಕ್ಕೆ ಇಲ್ಲ ಎಂದು ಡಾ. ವೀರೇಂದ್ರ ಹೆಗ್ಗಡೆ ಅವರ ಆಪ್ತಕಾರ್ಯದರ್ಶಿ ವೀರು ವಿ. ಶೆಟ್ಟಿತಿಳಿಸಿದ್ದಾರೆ.

Tap to resize

Latest Videos

undefined

ಕೊರೋನಾ ನಡುವೆ ಮಂಡ್ಯದಲ್ಲಿ ಜೋರಾಯ್ತು ರಾಜಕೀಯ..! ಸಚಿವ- ಶಾಸಕರ ಜಗಳ ಸಿಎಂ ಅಂಗಳಕ್ಕೆ

ಲಾಕ್‌ಡೌನ್‌ ಸಡಿಲಿಕೆಯಾದರೂ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಂಗಡಿ ಮಾಲೀಕರು ಅಂಗಡಿ ತೆರೆಯದೆ, ಗ್ರಾಮಸ್ಥರು ಒಡಾಡದೆ ಕೊರೋನಾ ಜಾಗೃತಿ ಮೂಡಿಸಿದ್ದಾರೆ. ವಾಹನ ಮಾಲೀಕರು, ಚಾಲಕರ ಸಹಿತ ಎಲ್ಲರೂ ಸ್ವಯಂ ಪ್ರೇರಿತ ಜಾಗೃತಿ ಮೂಡಿಸಿದ್ದಾರೆ. ಇದು ಇದುವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಧರ್ಮಜಾಗೃತಿಗೆ ಮಾದರಿಯಾಗಿದೆ ಎಂದು ಕಾರ್ಯದರ್ಶಿಗಳು ತಿಳಿಸಿದ್ದಾರೆ.

ದೇವರ ದರ್ಶನ ಸಮಯ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ. ಬಳಿಕ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಾರುಪತ್ಯಗಾರರಾದ ಲಕ್ಷ್ಮೇನಾರಾಯಣ (9448252508) ಇವರನ್ನು ಸಂಪರ್ಕಿಸಬಹುದಾಗಿದೆ.

ಕ್ವಾರೆಂಟೈನ್‌ ಮುಗಿದರೂ ಮನೆಗೆ ಬಿಟ್ಟಿಲ್ಲ: ಡಿಸಿ ವಿರುದ್ಧ ಕ್ರಮಕ್ಕೆ ಸಿಎಂಗೆ ದೂರು

ಲಾಕ್‌ಡೌನ್‌ನಿಂದ ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ಬಂದ್‌ ಮಾಡಲಾಗಿದ್ದು ಇದರಂತೆ ಶ್ರೀ æೕತ್ರ ಧರ್ಮಸ್ಥಳದಲ್ಲಿಯೂ ಪ್ರವೇಶ ಬಂದ್‌ ಮಾಡಲಾಗಿತ್ತು. ಇದೀಗ ಮುಜರಾಯಿ ಇಲಾಖೆ ಜೂನ್‌ 1 ರಿಂದ ಧಾರ್ಮಿಕ ಕೇಂದ್ರಗಳಿಗೆ ನಿಯಮಾವಳಿಗಳನ್ನು ಅನುಸರಿಸಿ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಿದೆ.

click me!