ಧಾರವಾಡ ಡಿಸಿ ದಿವ್ಯ ಪ್ರಭು ಅವರಿಗೆ ಕಂದಾಯ ಇಲಾಖೆಯಿಂದ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ!

By Suvarna News  |  First Published Sep 25, 2024, 11:22 PM IST

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಮತ್ತು ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ  ಜಿಲ್ಲಾಧಿಕಾರಿಗಳಾಗಿ ಉತ್ತಮವಾದ ಜನಸ್ನೇಹಿ, ನಾಗರಿಕಸ್ನೇಹಿ ಆಡಳಿತ ನೀಡಿರುವ ದಿವ್ಯ ಪ್ರಭು  ಜಿ.ಆರ್.ಜೆ ಅವರಿಗೆ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ.


ಧಾರವಾಡ (ಸೆ.25): ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಮತ್ತು ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ  ಜಿಲ್ಲಾಧಿಕಾರಿಗಳಾಗಿ ಉತ್ತಮವಾದ ಜನಸ್ನೇಹಿ, ನಾಗರಿಕಸ್ನೇಹಿ ಆಡಳಿತ ನೀಡಿರುವ ದಿವ್ಯ ಪ್ರಭು  ಜಿ.ಆರ್.ಜೆ ಅವರಿಗೆ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ. ಹಾಗೆಯೇ, ಧಾರವಾಡ ತಹಶಿಲ್ದಾರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ರಾಕೇಶ ತಂಗಡಗಿ ಅವರಿಗೆ 2023-24 ನೇ ಸಾಲಿಗೆ ವರ್ಷದ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ. 

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮತ್ತು ಗ್ರಾಮ ಆಡಳಿತಾಧಿಕಾರಿ ರಾಕೇಶ ತಂಗಡಗಿ ಅವರು ಪ್ರಸಕ್ತ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಗಳಾಗಿ ರಾಜ್ಯ ಸರಕಾರದಿಂದ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಬರುವ ಸೆಪ್ಟೆಂಬರ್ 27 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಂದಾಯ ಇಲಾಖೆ ಪ್ರಕಟಣೆ ತಿಳಿಸಿದೆ.
 

Tap to resize

Latest Videos

undefined


ಸರ್ಕಾರಿ ಮಹಿಳಾ ಕಾಲೇಜಿಗೆ ಡಿಸಿ ಭೇಟಿ: ಇಲ್ಲಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಶುಕ್ರವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ ಸೋರುತ್ತಿದ್ದ ಕಟ್ಟಡ ಪರಿಶೀಲಿಸಿ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿದರು.ಮಳೆಗಾಲದಲ್ಲಿ ಸೋರಿಕೆಯಿಂದಾಗಿ ವಿದ್ಯಾರ್ಥಿನಿಯರಿಗೆ ತರಗತಿ ತೆಗೆದುಕೊಳ್ಳುವುದು ಕಷ್ಟವಾಗಿದೆ. ಮೂಲ ಸೌಕರ್ಯಗಳ ಕೊರತೆ ಇದೆ ಎಂಬ ದೂರಿನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ಕ್ಲಾಸ್ ರೂಮ್, ಕಚೇರಿಗೆ ಹೋಗಿ ಪರಿಶೀಲಿಸಿದ ಅವರು, ತರಗತಿಯಲ್ಲಿದ್ದ ವಿದ್ಯಾರ್ಥಿನಿಯರಿಗೆ ಅಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. 

ವಿದ್ಯಾರ್ಥಿನಿಯರ ಹಾಜರಾತಿ ಪರಿಶೀಲಿಸಿ, ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು. ಅವರ ವೈಯಕ್ತಿಕ ಕಾಳಜಿ ಮಾಡಬೇಕೆಂದು ಸೂಚಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ ಅವರು, ಇದು ಶತಮಾನದಷ್ಟು ಹಳೆಯ ಕಟ್ಟಡ ಇರುವುದರಿಂದ ದುರಸ್ತಿಗಿಂತ ಬೇರೆ ಕಟ್ಟಡದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ, ಬೋಧನೆ ಕಲಿಕೆಗೆ ಅವಕಾಶ ಮಾಡುವುದು ಉತ್ತಮವೆನಿಸುತ್ತದೆ ಎಂದು ಸಲಹೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸ್ಥಳೀಯ ಶಾಸಕರ ಪ್ರಯತ್ನದಿಂದಾಗಿ ಮಹಿಳಾ ಕಾಲೇಜಿಗೆ ನೂತನ ಕಟ್ಟಡ ಮತ್ತು ಕಟ್ಟಡ ನಿರ್ಮಾಣಕ್ಕೆ ಈಗ ಕಾಲೇಜಿರುವ ಸ್ಥಳದಲ್ಲಿ ಒಂದು ಎಕರೆ ಜಮೀನು ಸಹ ಮಂಜೂರು ಆಗಿದೆ. 

ನ್ಯಾಯ ಸಾಮಾನ್ಯ ವ್ಯಕ್ತಿಗೂ ಒಂದೇ, ರಾಜಕೀಯ ವ್ಯಕ್ತಿಗೂ ಒಂದೇ: ಸಿದ್ದು ವಿರುದ್ಧ ರಾಘವೇಂದ್ರ ಕಿಡಿ

ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ₹ 3.5 ಕೋಟಿ ಅನುದಾನ ಮಂಜೂರಾಗಿದೆ. ಈಗಾಗಲೇ ₹ 1.16 ಕೋಟಿ ಬಿಡುಗಡೆಗೆ ಆದೇಶವೂ ಆಗಿದೆ. ಕಾಲೇಜು ಕಟ್ಟಡ ನಿರ್ಮಾಣ ಏಜನ್ಸಿಯವರ ಸಮನ್ವಯ ಕೊರತೆ, ನಿಧಾನಗತಿಯಿಂದ ಕಾಮಗಾರಿ ಆರಂಭವಾಗಿಲ್ಲ. ಈಗಾಗಲೇ ಕಾಲೇಜು ಪ್ರಾಚಾರ್ಯರಿಗೆ ಮತ್ತು ಕರ್ನಾಟಕ ಗೃಹ ಮಂಡಳಿ ಎಇಇ ಅವರಿಗೆ ಸೂಚನೆ ನೀಡಿ, ಆದಷ್ಟು ಶೀಘ್ರ ಟೆಂಡರ್ ಮಾಡಿ, ಕಾಮಗಾರಿ ಆರಂಭಿಸಲು ಸೂಚನೆ ನೀಡಲಾಗಿದೆ ಎಂದರು. ಅತೀ ಶೀಘ್ರದಲ್ಲಿ ವಿದ್ಯಾರ್ಥಿನಿಯರಿಗೆ ಬೋಧನಾ ಕೊಠಡಿ ಬೇರೆ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿನೀಯರಿಗೆ, ಭಯ ಬೇಡ. ಸಮಸ್ಯೆಗಳಿದ್ದಲ್ಲಿ ನೇರವಾಗಿ ತಮ್ಮಗೆ ಭೇಟಿ ಆಗಿ ಗಮನಕ್ಕೆ ತರುವಂತೆ ಕಾಲೇಜು ಪ್ರಾಚಾರ್ಯರಿಗೆ ಸೂಚನೆ ನೀಡಿದ್ದೇನೆ. ಮುಂದಿನ ಎರಡ್ಮೂರು ದಿನದಲ್ಲಿ ಈ ಸಮಸ್ಯೆ ಪರಿಹರಿಸಲು ಪ್ರಯತ್ನಸುವುದಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

click me!