ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟ ಜಿಲ್ಲಾಧಿಕಾರಿ

Published : Aug 19, 2025, 08:31 PM IST
Dharwad School Holiday Declare

ಸಾರಾಂಶ

ಭಾರೀ ಮಳೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಆ. 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಧಾರವಾಡ (ಆ.19): ಶಿಕ್ಷಣ ಕಾಶಿ ಧಾರವಾಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯ ಕಾರಣ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ, ಆಗಸ್ಟ್ 20ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆಯ ಮುನ್ಸೂಚನೆ ಇತ್ತು. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದ್ದರಿಂದ, ನಾಳೆ (ಬುಧವಾರ) ಒಂದು ದಿನದ ಮಟ್ಟಿಗೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ರಜೆಯನ್ನು ಸರಿದೂಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಯಾವುದೇ ನದಿ ಪಾತ್ರಗಳು, ಹಳ್ಳ-ಕೊಳ್ಳಗಳ ಬಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಇದೇ ವೇಳೆ ತಿಳಿಸಲಾಗಿದೆ.

ಹಾವೇರಿ, ಬೆಳಗಾವಿ ಜಿಲ್ಲೆಯಲ್ಲಿಯೂ ಶಾಲಾ, ಕಾಲೇಜುಗಳಿಗೆ ರಜೆ:

ನಾಳೆಯೂ ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಹಿನ್ನೆಲೆಯುಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ನಾಳೆ (ಆ.20ರ ಬುಧವಾರ) ಬೆಳಗಾವಿ ಹಾಗೂ ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

PREV
Read more Articles on
click me!

Recommended Stories

ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!
ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!