ಧಾರವಾಡ ಜಿಲ್ಲಾ ಮಟ್ಟದ 5ನೇ ಜನತಾ ದರ್ಶನ: ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್ ಹೇಳಿದ್ದೇನು?

By Govindaraj S  |  First Published Jun 26, 2024, 5:35 PM IST

ಸಾರ್ವಜನಿಕರಿಂದ ಒಟ್ಟು 175 ಅಹವಾಲುಗಳನ್ನು ಸ್ವೀಕರಿಸಲಾಯಿತು ಎಲ್ಲವನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಅಹವಾಲುಗಳನ್ನು ಪರಿಹರಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.  


ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ

ಧಾರವಾಡ (ಜೂ.26): ಜಿಲ್ಲಾಡಳಿತವತಿಯಿಂದ ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ 5ನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 175 ಅಹವಾಲುಗಳನ್ನು ಸ್ವೀಕರಿಸಲಾಯಿತು ಎಲ್ಲವನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಅಹವಾಲುಗಳನ್ನು ಪರಿಹರಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.  

Tap to resize

Latest Videos

ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರು, ಸಂಘ ಸಂಸ್ಥೆ ಪ್ರತಿನಿಧಿಗಳು ತಮ್ಮ ಸಮಸ್ಯೆಗಳ ಬಗ್ಗೆ ಸಹಾಯ ಸೌಲಭ್ಯಗಳ ಬಗ್ಗೆ ಸುಮಾರು 175 ಅರ್ಜಿ ಅಹವಾಲುಗಳನ್ನು ಸಲ್ಲಿಸಿದರು. ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಸತತ 4 ಗಂಟೆ ವೇದಿಕೆಯಲ್ಲಿ ನಿಂತು ಸರದಿಯಲ್ಲಿ ಬರುವ ಸಾರ್ವಜನಿಕರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿದರು. 

ಮೋದಿಯವರ ಸುಳ್ಳಾಟ ಬಯಲಿಗೆಳೆಯಲು ರಾಹುಲ್‌ಗೆ ಒಳ್ಳೆಯ ಅವಕಾಶವಿದೆ: ಸಚಿವ ಸಂತೋಷ್ ಲಾಡ್

ಕಂದಾಯ ಇಲಾಖೆ-47, ನಗರಾಭಿವೃದ್ಧಿ ಇಲಾಖೆ-27, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆ-30, ಶಿಕ್ಷಣ ಇಲಾಖೆ-16, ಲೋಕೋಪಯೋಗಿ ಇಲಾಖೆ-8, ಸಮಾಜ ಕಲ್ಯಾಣ ಇಲಾಖೆ-6, ಗೃಹ ಇಲಾಖೆ-5, ಕೃಷಿ ಇಲಾಖೆ-4, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-3, ಸಾರಿಗೆ ಇಲಾಖೆ-3, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-3, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ-3, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ-2, ಡಿಪಿಎಆರ್-2, ಉನ್ನತ ಶಿಕ್ಷಣ ಇಲಾಖೆ-2, ವಸತಿ ಇಲಾಖೆ-2, ಕಾರ್ಮಿಕ ಇಲಾಖೆ-3, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ-2, ಎಚ್‍ಡಿಎಮ್‍ಸಿ-1, ಹಣಕಾಸು ಇಲಾಖೆ-1, ಜಲಸಂಪನ್ಮೂಲ ಇಲಾಖೆ-1, ಶಕ್ತಿ ಇಲಾಖೆ-2, ಅರಣ್ಯ ಇಲಾಖೆ-2 ಸೇರಿ ಒಟ್ಟಾರೆಯಾಗಿ 175 ಅಹವಾಲುಗಳು ಸಲ್ಲಿಸಿದ್ದಾರೆ.

ಜನತಾ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕಾನೂನಾತ್ಮಕವಾಗಿ, ಸ್ಥಳೀಯವಾಗಿ ಬಗೆಹರಿಸಬಹುದಾದ ಅಹವಾಲುಗಳನ್ನು ಜಿಲ್ಲಾಡಳಿತದ ಮಟ್ಟದಲ್ಲಿ ಬಗೆಹರಿಸಲಾಗುವುದು ಉಳಿದವುಗಳನ್ನು ಹಿಂಬರಹ ನೀಡಲಾಗುವುದು ಎಂದು ಹೇಳಿದರು. ಅವಳಿನಗರಗಳಲ್ಲಿ ವಿವಿದೆಡೆ ಕಾನೂನುಬಾಹಿರ ಅನಧೀಕೃತ ಬಡಾವಣೆಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆಗಳಾಗಿವೆ ಹೊಸ ಕಾನೂನುಗಳನ್ವಯ ಅನಧೀಕೃತ ಬಡಾವಣೆಗಳ ಸಮಸ್ಯೆ ಬಗೆಹರಿಸಲು ಸರಕಾರದ ಗಮನಕ್ಕೆ ತರಲಾಗುವುದು ಜಿಲ್ಲೆಯಲ್ಲಿ ಕಳೆದೊಂದು ವರ್ಷದಿಂದ ಕೈಗೊಂಡ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸ್ವಂತ ತಾವೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದೆಂದು ಸಚಿವರು ತಿಳಿಸಿದರು. 

ಬೆಲೆ ಏರಿಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ: ಸಿ.ಟಿ.ರವಿ

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕರಿಗೆ ಸಚಿವರು ಸ್ಮಾರ್ಟ ಫೋನ್ ವಿತರಿಸಿದರು ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯತ್ ಸಿಇಓ ಸ್ವರೂಪ ಟಿ.ಕೆ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡಾ ಆಯುಕ್ತ ಸಂತೋಷ ಬಿರಾದಾರ ವೇದಿಕೆಯಲ್ಲಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಜನತಾದರ್ಶನದಲ್ಲಿ ಭಾಗವಹಿಸಿದ್ದರು.

click me!