ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ 4ನೇಯ ಜನತಾದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 111 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಜ.29): ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ 4ನೇಯ ಜನತಾದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 111 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು. ಜನತಾ ದರ್ಶನದ ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ಚೀಕರಿಸಿ, ಸಮಾಲೋಚಿಸಿ ಶೀಘ್ರವಾಗಿ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದರು.
ಕನ್ನಡ ಸಿನಿಮಾ ನಿರ್ದೇಶಕನ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್, ಪೊಲೀಸರಿಂದ ನೋಟಿಸ್!
ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ಸುಮಾರು 111 ಅಹವಾಲುಗಳನ್ನು ಸಲ್ಲಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನಿಗಮ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರು, ತಹಶಿಲ್ದಾರರು ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
Gadag : ಕೊಲೆಯೋ? ಅಘಾತವೋ? ಮಗನ ಸಾವಿನ ರಹಸ್ಯ ಬಯಲು ಮಾಡುವಂತೆ ತಾಯಿಯ ಒತ್ತಾಯ
ಇಲಾಖೆವಾರು ಸಲ್ಲಿಕೆಯಾದ ಅಹವಾಲುಗಳ ವಿವರ: ಇವುಗಳಲ್ಲಿ ಹೆಸ್ಕಾಂ 02, ಗೃಹ ಇಲಾಖೆ 03, ಅರಣ್ಯ ಇಲಾಖೆ 01, ಸಮಾಜ ಕಲ್ಯಾಣ ಇಲಾಖೆ 02, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 05, ಕಾರ್ಮಿಕ ಇಲಾಖೆ 12, ಶಾಲಾ ಶಿಕ್ಷಣ ಇಲಾಖೆ 04, ಆರೋಗ್ಯ ಇಲಾಖೆ 03, ಸಾರಿಗೆ ಇಲಾಖೆ 01, ಮಹಿಳಾ ಮತ್ತು ಮಕ್ಜಳ ಅಭಿವೃದ್ದಿ ಇಲಾಖೆ 02, ಕಂದಾಯ ಇಲಾಖೆ 26, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ 31, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ 17 ಸೇರಿದಂತೆ ಒಟ್ಟು 111 ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು. ಅಹವಾಲುಗಳನ್ನು ಪರಿಶೀಲಿಸಿ ಕಾಲ ಮಿತಿಯಲ್ಲಿ ಪರಿಹರಿಸುವಂತೆ ಸಚಿವರು ಸೂಚಿಸಿದರು.