ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published : Dec 05, 2025, 10:18 PM ISTUpdated : Dec 05, 2025, 11:16 PM IST
Dharavad Car Fire

ಸಾರಾಂಶ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಅವರು ಕಾರಿನೊಳಗೆ ಸಿಲುಕಿ ಸಜೀವ ದಹನವಾಗಿದ್ದಾರೆ.

ಧಾರವಾಡ (ಡಿ.5): ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ  ಪ್ರಯಾಣ ಮಾಡುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ಕೆಲವೇ ಕ್ಷಣದಲ್ಲಿ ಬೆಂಕಿ ಆವರಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಾರು ಸುಟ್ಟುಹೋಗಿದೆ.  ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಳಿಯ (ಗದಗ-ಹುಬ್ಬಳ್ಳಿ ಹೆದ್ದಾರಿ) ಅರೆರಾ ಸೇತುವೆ ಸಮೀಪ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

ಸಂಜೆ 7.30ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ವೇಳೆ  ಹಾವೇರಿಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಸಾಲಿಮಠ ಅವರೇ ಡ್ರೈವ್‌ ಮಾಡುತ್ತಿದ್ದರು.  ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಂಚಾಕ್ಷರಿ ಸಾಲಿಮಠ ಗುರುತು ಪತ್ತೆ ಹಚ್ಚಿದ ಕುಟುಂಬ

ಮೃತದೇಹ ಸುಟ್ಟು ಕರಕಲಾಗಿದ್ದರಿಂದ ಪತ್ತೆ ಹಚ್ಚುವುದು ಕಷ್ಟವಾಗಿತ್ತು. ಈ ವೇಳೆ ಅವರ ಕುಟುಂಬ ಪಂಚಾಕ್ಷರಿ ಸಾಲಿಮಠ ಅವರ ಗುರುತು ಪತ್ತೆ ಮಾಡಿದೆ. ಕೈಯಲ್ಲಿದ್ದ ಬ್ರೆಸ್ಲೆಟ್ ನೋಡಿ ಪತ್ತೆ ಮಾಡಲಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಾಗ ಏಕಾಎಕಿ ಬೆಂಕಿ‌ ಹತ್ತಿದೆ. ಪೆಟ್ರೋಲ್ ಲಿಕ್ ಆದ ಕಾರಣ ಸ್ಪಾರ್ಕ್ ಆಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್.ಪಿ ಗುಂಜನ್ ಆರ್ಯ ಕೂಡಾ ಭೇಟಿ ನೀಡಿದ್ದಾರೆ.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ