ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿ ಸುಳ್ಳು: ಎಸ್ಪಿ ಲೋಕೇಶ ಜಗಲಾಸರ್

By Govindaraj S  |  First Published Sep 15, 2022, 8:08 AM IST

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಇದರೊಂದಿಗೆ ಸಂಬಂಧಿಸಿದಂತೆ ಬೇರೆ ದೇಶದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ. 


ಧಾರವಾಡ (ಸೆ.15): ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಇದರೊಂದಿಗೆ ಸಂಬಂಧಿಸಿದಂತೆ ಬೇರೆ ದೇಶದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ. ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತವೆ. ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಡುವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಾಸರ್ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ತಮ್ಮ ಗ್ರಾಮ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಮಾಡಬೇಕಾದಷ್ಟು ಇಷ್ಟು, 112 ಸಹಾಯವಾಣಿಗೆ ಕರೆ ಮಾಡಬೇಕು. ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕೂಲಕುಂಶವಾಗಿ ವಿಚಾರಣೆ ನಡೆಸುತ್ತಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ  ಅಮಾಯಕ ವ್ಯಕ್ತಿಗಳಿಗೆ ತಡೆ ಒಡ್ಡುವುದಾಗಲಿ, ಹಲ್ಲೆ ಮಾಡುವದಾಗಲಿ ಮಾಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಡುವರ ಮೇಲೆ ಕಾನೂನು ರೀತಿಯ ಕ್ರಮವನ್ನ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಗಲಾಸರ್ ಅವರು ಖಡಕ್ ಸಂದೇಶವನ್ನ ಹೊರ ಬಿಟ್ಟಿದ್ದಾರೆ.

Tap to resize

Latest Videos

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ನಿಷೇಧ; ಜಿಲ್ಲೆಯಾದ್ಯಂತ ಆಂದೋಲನ ಗುರುದತ್ತ ಹೆಗಡೆ

ಸಾರ್ವಜನಿಕರು ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸಹಾಯವಾಣಿ-112, ಜಿಲ್ಲಾ ನಿಸ್ತಂತು ಕೇಂದ್ರ-0836-2233201 ಸಂಪರ್ಕಿಸಬಹುದು ಎಂದು ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಾಸರ್ ಅವರು ತಿಳಿಸಿದ್ದಾರೆ. ಇನ್ನು ಕಳೆದ ಒಂದು ವಾರದಿಂದ ಧಾರವಾಡ ಕಮಿಷನರ್ ರೇಟ್ ವ್ಯಾಪ್ತಿ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಇಗಾಗಲೆ ಅನುಮಾನಾಸ್ಪದವಾದ ವ್ಯಕ್ತಿಗಳನ್ನ ಪತ್ತೆ ಹಚ್ಚಲಾಗುತ್ತಿದೆ. ಅಂತವರನ್ನ ಠಾಣೆಗೆ ಕರೆಸಿ ವಿಚಾರಣೆ ಮಾಡಿ ಕಳುಹಿಸಲಾಗುತ್ತಿದೆ.

ಧಾರವಾಡದಲ್ಲಿ ಮಳೆಗೆ ಮನೆಗೋಡೆ ಕುಸಿತ: ಗಾಯಾಳುಗಳನ್ನ ವಿಚಾರಿಸಿದ ತಹಶೀಲ್ದಾರ್

ಇನ್ನು ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸಲು ಭಯ ಪಡುತ್ತಿದ್ದಾರೆ ಎಂದು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ಇಗಾಗಲೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಾಹಿತಿಗಳನ್ನ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಯಾವುದೇ ಮಿಸ್ಸಿಂಗ್ ಪ್ರಕರಣಗಳು ಕೂಡಾ ಆಗಿಲ್ಲ. ಜೊತೆಗೆ‌ ಶಾಲೆಗಳಿಗೆ ಮಕ್ಕಳನ್ನ ಕಳುಹಿಸಲು ಭಯ ಪಡುತ್ತಿದ್ದು, ಇತ್ತು ಪೋಷಕರಿಗೆ ಒಂದು ಕಡೆ ಭಯದ ವಾತಾವರಣ ನಿರ್ಮಾಣವಾಗಿದೆ. ಇನ್ನೊಂದೆಡೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಮೆಲೆ ಪೋಲಿಸರು ಕಣ್ಗಾವಲನ್ನ ಇಟ್ಟಿದ್ದಾರೆ.

click me!