ಚುನಾವಣಾ ಪ್ರಚಾರದಲ್ಲಿ ಭಾಗಿ, ವಾರ್ಡನ್ ಅಮಾನತ್ತು ಮಾಡಿ ಡಿ.ಸಿ. ಆದೇಶ

By Ravi Janekal  |  First Published Apr 6, 2023, 10:10 AM IST

 ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್  ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.


ಕಲಬುರಗಿ (ಏ.6):  ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್  ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.

ಸೇಡಂ ತಾಲೂಕಿನ ಮಳಖೇಡ್ ಆದಿತ್ಯಾ ಕಾಲೋನಿಯಲ್ಲಿ ಕಳೆದ ಮಾರ್ಚ್ 21 ರಂದು ರಾಜಕೀಯ ಪಕ್ಷದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸರಕಾರಿ ನೌಕರರ ತರವಲ್ಲದ ರೀತಿಯಲ್ಲಿ ನಡೆದುಕೊಂಡು, ಸರಕಾರಿ ಆದೇಶವನ್ನು ಉಲ್ಲಂಘಿಸಿ ಕೆಲಸದಲ್ಲಿ ನಿರ್ಲಕ್ಷತನ ಹಾಗೂ ಬೇಜವಾಬ್ದಾರಿತನ ತೋರಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ.

Tap to resize

Latest Videos

undefined

ಇಂದಿನಿಂದ ರಾಜ್ಯದಲ್ಲಿ ಐಟಿ ದಾಳಿಗೆ ಸಿದ್ಧತೆ: ಸುರ್ಜೇವಾಲಾ ಆರೋಪ

ಚುನಾವಣಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿದೆ ಎಂದು ಸೇಡಂ ವಿಧಾನಸಭಾ ಮತಕ್ಷೇತ್ರ(Sedam Assembly Constituency)ದ‌ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ವರದಿ ಹಿನ್ನೆಲೆಯಲ್ಲಿ ಯಶೋದಮ್ಮ(Yashodhamma) ಅವರನ್ನು ಪ್ರಜಾಪ್ರತಿನಿಧಿ ಕಾಯ್ದೆ-1951, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957 ಹಾಗೂ ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮಗಳು-2021 ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸದರಿಯವರನ್ನು ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. 

ರಾಜಕೀಯದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ:

ಸರ್ಕಾರಿ ನೌಕರರು(Government employees) ಜಿಲ್ಲೆಯಲ್ಲಿ ಈ ರೀತಿಯಾಗಿ ಸರ್ಕಾರಿ ಕೆಲಸವಲ್ಲದ ರಾಜಕೀಯ ಪಕ್ಷಗಳ ಚುನಾವಣಾ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಯಶವಂತ ವಿ. ಗುರುಕರ್(DC Yashwant V. Gurukar) ಅವರು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ಸಿಗೆ 60 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು: ಆಕಾಂಕ್ಷಿ ಸಂಖ್ಯೆ 2ಕ್ಕೆ ಇಳಿಸಲು ರಾಹುಲ್‌ ತಾಕೀತು

click me!