ಮೋದಿ ವಿರುದ್ಧ ಅವಹೇಳನಕಾರಿ ವಾಟ್ಸಾಪ್‌ ಸ್ಟೇಟಸ್, ದೂರು ದಾಖಲು

By Kannadaprabha News  |  First Published Jan 5, 2020, 12:56 PM IST

ವಾಟ್ಸಾಪ್ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದ ಆರೋಪಿಯ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.


ಮಡಿಕೇರಿ(ಜ.05): ವಾಟ್ಸಾಪ್ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದ ಆರೋಪಿಯ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.

ಸೋಮವಾರಪೇಟೆ ತಾಲೂಕಿನ ಮಾದಾಪಟ್ಟಣ ಬಳಿ ಜ್ಯೂಸ್‌ ಸೆಂಟರ್‌ ನಡೆಸುತ್ತಿರುವ ಹ್ಯಾರಿಸ್‌ ವಿರುದ್ಧ ದೂರು ದಾಖಲಾಗಿದೆ. ಹ್ಯಾರಿಸ್‌ ತನ್ನ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ ಕಾರ್ಯಕರ್ತರ ತರಬೇತಿ ಚಿತ್ರಗಳ ಅಡಿಯಲ್ಲಿ ಅವಹೇಳನಕಾರಿ ಚಿತ್ರಸುದ್ದಿ ಅಳವಡಿಸಿದ್ದ. ಇದನ್ನು ಗಮನಿಸಿದ ಸ್ಥಳೀಯ ಮಾದಾಪಟ್ಟಣದ ಹಿಂದೂಪರ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಹ್ಯಾರಿಸ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Tap to resize

Latest Videos

ಮಡಿಕೇರಿ: ಇಬ್ಬರು ಪತ್ನಿಯರ ಜಗಳ ಕೊಲೆಯಲ್ಲಿ ಅಂತ್ಯ

ಈ ಪ್ರಕರಣವನ್ನು ಬಜರಂಗ ದಳ, ಹಿಂದೂ ಜಾಗರಣಾ ವೇದಿಕೆ, ದುರ್ಗಾವಾಹಿನಿ, ನಗರ ಬಿಜೆಪಿ ಘಟಕ, ಯುವಮೋರ್ಚಾ ಪ್ರಮುಖರು ಖಂಡಿಸಿದ್ದು, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲನಗರ ಪೊಲೀಸ್‌ ವೃತ್ತ ನಿರೀಕ್ಷಕ ಮಹೇಶ್‌ ಅವರಿಗೆ ದೂರು ನೀಡಿದ್ದಾರೆ.

ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್‌ರಾಜ್‌, ಜಪಂ ಸದಸ್ಯೆ ಮಂಜುಳಾ, ಹಿಂದೂಪರ ಸಂಘಟನೆಯ ವಿನೀತ್‌, ವಿವಿಧ ಸಂಘಟನೆಗಳ ಪ್ರಮುಖರಾದ ಅನೀಶ್‌, ಕೆ.ಜಿ. ಮನು, ಕೃಷ್ಣಪ್ಪ ಸೇರಿದಂತೆ ಹಲವರು ದೂರು ನೀಡಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಹೂತಿಟ್ಟಿದ್ದ ಮಾಟದ ವಸ್ತು ಪತ್ತೆಹಚ್ಚಿದ ಬಸವ..! ಪವಾಡದ ಮೇಲೊಂದು ಪವಾಡ.

click me!