Mandya : ಕೋವಿಡ್‌ಗೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜು

By Kannadaprabha NewsFirst Published Dec 28, 2022, 6:08 AM IST
Highlights

ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್‌ನ ಒಂದು ಪ್ರಕರಣವೂ ಇಲ್ಲ. ಮುಂದಿನ ದಿನಗಳಲ್ಲಿ ಕೋವಿಡ್‌ ಪ್ರಕರಣಗಳು ಕಂಡುಬಂದಲ್ಲಿ ಪೂರಕವಾಗಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ ಹೇಳಿದರು.

 ಮಂಡ್ಯ (ಡಿ. 28):  ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್‌ನ ಒಂದು ಪ್ರಕರಣವೂ ಇಲ್ಲ. ಮುಂದಿನ ದಿನಗಳಲ್ಲಿ ಕೋವಿಡ್‌ ಪ್ರಕರಣಗಳು ಕಂಡುಬಂದಲ್ಲಿ ಪೂರಕವಾಗಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ(Covid)  ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಕೋವಿಡ್‌ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಮತ್ತು ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಐಎಲ್‌ಐ, ಎಸ್‌ಎಆರ್‌ಐ ಲಕ್ಷಣಗಳುಳ್ಳವರಿಗೆ ಆರ್‌ಎಟಿ ಮತ್ತು (RTPCR)  ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕೋವಿಡ್‌ ಸಂದರ್ಭದಲ್ಲಿ ಹಿಂದೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಇರುವುದರಿಂದ ಮಂಡ್ಯ ಮೆಡಿಕಲ್‌ ಕಾಲೇಜು, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್‌ ಬಗ್ಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಯಲ್ಲಿ ಬೆಡ್‌, ಆಕ್ಸಿಜನ್‌ ಹಾಗೂ ಇನ್ನಿತರ ಮೂಲಸೌಕರ್ಯ ಪರಿಶೀಲನೆ ಮಾಡಿಕೊಳ್ಳುವುದು. ಪ್ರತಿ ತಾಲೂಕಿನಲ್ಲಿ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಾರ್ವಜನಿಕರು ಸಹ ಸರ್ಕಾರದಿಂದ ಹೊರಡಿಸಲಾಗುವ ಕೋವಿಡ್‌ ನಿಯಮ ಪಾಲಿಸಿ, ಮಾಸ್‌್ಕ ಧರಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಾಗೃತಿ ಮೂಡಿಸುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್‌.ಧನಂಜಯ ಮಾತನಾಡಿ, ಕೋವಿಡ್‌ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ತಲುಪಿಸಲಾಗುವುದು. ಕನಿಷ್ಠ 4000 ಮಾದರಿಗಳನ್ನು ಪ್ರಯೋಗ ಶಾಲೆಯ ಪರೀಕ್ಷೆಗೆ ಒಳಪಡಿಸಬಹುದು. 4000ಕ್ಕಿಂತ ಹೆಚ್ಚುವರಿ ಮಾದರಿಗಳು ಸಂಗ್ರಹವಾದಲ್ಲಿ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ನೀಡಿ ಪ್ರಯೋಗಶಾಲಾ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರ್‌ಸಿಎಚ್‌ಅಧಿಕಾರಿ ಡಾ.ಅನಿಲ್‌ಕುಮಾರ್‌, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಆಶಾಲತಾ, ಆರೋಗ್ಯ ಇಲಾಖೆಯ ಡಾ.ರವೀಂದ್ರ, ಡಾ.ಮರಿಗೌಡ, ಡಾ.ಜವರೇಗೌಡ, ಡಾ.ಶಶಿಧರ್‌, ಡಾ.ಭವಾನಿ ಶಂಕರ್‌, ಡಾ.ಕೆ.ಪಿ ಅಶ್ವಥ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಸ್‌.ಎಚ್‌.ನಿರ್ಮಲ ಇತರರಿದ್ದರು

ಮುನ್ನೆಚ್ಚರಿಕೆಗೆ ಸೂಚನೆ

ಶಿವಮೊಗ್ಗ (ಡಿ.27) : ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಪೂರ್ವ ಸಿದ್ಧತೆ ಜೊತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳು, ಕೋವಿಡ್‌ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್‌. ಸೆಲ್ವಕುಮಾರ್‌ ಸೂಚನೆ ನೀಡಿದರು.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಕೋವಿಡ್‌ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದೆ. ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆ, ಆಕ್ಸಿಜನ್‌ ಪೂರೈಕೆ, ವೆಂಟಿಲೇಟರ್‌ ಸೇರಿದಂತೆ ಎಲ್ಲಾ ವ್ಯವಸ್ಥೆ ಗಳನ್ನು ಸಜ್ಜುಗೊಳಿಸಬೇಕು. ತಾಂತ್ರಿಕ ಸಿಬ್ಬಂದಿಯಿಂದ ಎಲ್ಲಾ ವ್ಯವಸ್ಥೆ ಮರುಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

 

ಮಂತ್ರಿಗಿರಿ ಲಾಬಿ ಬಿಟ್ಟು ಈಶ್ವರಪ್ಪ ಸದನಕ್ಕೆ ಹೋಗಲಿ: ಕೆ.ಬಿ.ಪ್ರಸನ್ನಕುಮಾರ್‌

ಕೇಂದ್ರಿತ ಪ್ರದೇಶಗಳಲ್ಲಿ ಐಎಲ್‌ಐ, ಸಾರಿ (ಎಸ್‌ಎಆರ್‌ಐ) ಪ್ರಕರಣಗಳನ್ನು ಕೋವಿಡ್‌ ಪರೀಕ್ಷೆ ಒಳಪಡಿಸಬೇಕು. ಎಲ್ಲರೂ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಅಳವಡಿಸಿ ಕೊಳ್ಳಬೇಕೆಂದು ತಿಳಿಸಿದರು.

ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಗೋವುಗಳ ಚರ್ಮಗಂಟು ರೋಗದ ಲಸಿಕಾಕರಣ ನಡೆಯುತ್ತಿದೆ. ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯಡಿ 5829 ಜಾನುವಾರುಗಳಿಗೆ ವಿಮೆ ಮಾಡಿಸಲಾಗಿದೆ. ಶೇ.84 ಕೃತಕ ಗರ್ಭಧಾರಣೆ, ಶೇ.101 ಕೋಳಿಗಳ ಕೊಕ್ಕರೆ ರೋಗದ ವಿರುದ್ಧ ಲಸಿಕೆ ಹಾಕಲಾಗಿದೆ. 1,64,889 ರಾಸುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕಲಾಗಿದೆ. 486601 ಮೆಟ್ರಿಕ್‌ ಟನ್‌ ಮೇವು ಲಭ್ಯವಿದ್ದು, 18 ವಾರಗಳಿಗೆ ಆಗುವಷ್ಟುಲಭ್ಯವಿದೆ ಎಂದು ಮಾಹಿತಿ ನೀಡಿದರು.

ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಜಿಲ್ಲೆಯಲ್ಲಿ ಜನವರಿ 1ರಿಂದ ನವೆಂಬರ್‌ 30ವರೆಗೆ ಜಿಲ್ಲೆಯಲ್ಲಿ ಸರಾಸರಿ 2410 ಮಿ.ಮೀ. ಮಳೆಯಾಗಿದೆ. 2022ರ ಮುಂಗಾರು ಹಂಗಾಮಿನಲ್ಲಿ 79,602 ಹೆ. ಭತ್ತದ ಗುರಿ ಇದ್ದು 79131 ಹೆಕ್ಟೇರ್‌ ಭೂಮಿಯಲ್ಲಿ ಭತ್ತ ಬೆಳೆಯಲಾಗಿದೆ. 46877 ಹೆ. ಮುಸುಕಿನ ಜೋಳ, 742 ಹೆ.ನಲ್ಲಿ ಏಕದಳ (ರಾಗಿ-ಜೋಳ), 353 ಹೆ. ಪ್ರದೇಶದಲ್ಲಿ ದ್ವಿದಳ ಧಾನ್ಯ ಮತ್ತು 1127 ಹೆ.ನಲ್ಲಿ ವಾಣಿಜ್ಯ ಬೆಳೆ ಬೆಳೆಯಲಾಗಿದೆ. ಏಪ್ರಿಲ್‌ನಿಂದ ನವೆಂಬರ್‌ವರೆಗೆ 121390 ಮೆಟ್ರಿಕ್‌ ಟನ್‌ ರಸ ಗೊಬ್ಬರದ ಬೇಡಿಕೆ ಇದ್ದು, 132662 ಮೆ.ಟನ್‌ ಗೊಬ್ಬರ ವಿತರಣೆಯಾಗಿದ್ದು, 25165 ಮೆ.ಟನ್‌ ದಾಸ್ತಾನಿದೆ. ಶೇ.81 ರಷ್ಟುಬೀಜ ವಿತರಣೆ ಹಾಗೂ ಶೇ.80.09ರಷ್ಟುಔಷಧ ವಿತರಣೆಯಾಗಿದೆ ಎಂದು ವಿವರಿಸಿದರು

.

click me!