ಶಾಸಕ ಸಿಟಿ ರವಿ ಹೇಳಿಕೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ
ನಗರದ ಆಜಾದ್ ವೃತ್ತದಲ್ಲಿ ಕಾರ್ಯಕರ್ತರು ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ
ಸಿ ಟಿ ರವಿ, ಲೂಟಿ ರವಿ, ಓಟಿ ರವಿ ಎಂಬ ಬಿತ್ತಿ ಪತ್ರ ಪ್ರದರ್ಶನ
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಡಿ.24): ಕಾಂಗ್ರೆಸ್ ಪಕ್ಷ ಮತ್ತು ನಾಯಕರ ವಿರುದ್ಧ ಶಾಸಕ ಸಿ.ಟಿ.ರವಿ ಟೀಕೆ ಮಾಡಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕರ ವಿರುದ್ಧ ಘೋಷಣೆ ಕೂಗಿ, ಸಿ ಟಿ ರವಿ, ಲೂಟಿ ರವಿ, ಓಟಿ ರವಿ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾನಿರತರು. ಕಾಂಗ್ರೆಸ್ ಪಕ್ಷ ಮತ್ತು ಮುಖಂಡರ ವಿರುದ್ಧ ಟೀಕೆ ಮುಂದುವರಿಸಿದರೆ, ಮುಂದಿನ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
undefined
ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ : ಅಜಾದ್ ಪಾರ್ಕ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿಎಐಸಿಸಿ ಕಾರ್ಯದರ್ಶಿ ಸಂದೀಪ್ ಮಾತನಾಡಿ, ಅಭಿವೃದ್ಧಿ ಕಾರ್ಯಗಳಿಂದ ಶಾಸಕ ಸಿ.ಟಿ.ರವಿ ಗೆಲುವು ಸಾಧಿಸುತ್ತಿಲ್ಲ, ಯಡಿಯೂರಪ್ಪ ಮತ್ತು ದತ್ತಾತ್ರೇಯರ ಹೆಸರಿನಲ್ಲಿ ಗೆಲುವು ಸಾಧಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ಶಾಸಕರಿಗೆ ತಕ್ಕಪಾಠ ಕಲಿಸಲಿದ್ದಾರೆಂದು ಹೇಳಿದರು.ಶಾಸಕರು ಕಾಂಗ್ರೆಸ್ ಪಕ್ಷ ಸೇರಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದು, ಇದನ್ನೆ ಮುಂದುವರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಟಲಿ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರವಿಲ್ಲ, ಖರ್ಗೆಗೆ ಸಿಟಿ ರವಿ ಟಾಂಗ್!
ಶಾಸಕರ ನಾಲಿಗೆ ಅವರ ವ್ಯಕ್ತಿತ್ವವನ್ನು ಸಾರಿಹೇಳುತ್ತಿದೆ. ಹಿರಿಯರ ಬಗ್ಗೆ ಹೇಗೆ ಮಾತನಾಡಬೇಕೆಂಬ ವಿವೇಚನೆ ಅವರಿಗೆ ಇಲ್ಲವಾಗಿದೆ. ಕಾಂಗ್ರೆಸ್ ಈ ದೇಶದ ಜನರ ನೋವು,ನಲಿವಿಗೆ ಸ್ಪಂದಿಸಿದೆ. ಬೆಳಗಾವಿ ಅಧಿವೇಶನದ ಸಭಾಂಗಣದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ಅವರ ಭಾವಚಿತ್ರವನ್ನಿಡುವ ಬದಲು ಸಾವರ್ಕರ್ ಭಾವಚಿತ್ರವನ್ನಿಟ್ಟಿರುವುದು ಸರಿಯಲ್ಲವೆಂದರು.ಈ ಕ್ಷೇತ್ರದ ಶಾಸಕರು ತಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಲಘುವಾಗಿ ಮಾತಾಡುವುದು ನಿಲ್ಲಿಸುವಂತೆ ಒತ್ತಾಯ: ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಡಾ ಅಂಶುಮಂತ್ ಮಾತಾಡಿ ಸಿಟಿ ರವಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ, ಲೂಟಿ ಮಾಡುವ ಬಾಯಲ್ಲಿ ಮನ ಬಂದಂತೆ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ರು. ತಮ್ಮ ಹೇಳಿಕೆ ವಾಪಸ್ ಪಡೆಯದಿದ್ದರೆ ಮತ್ತೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ ಅವರು ಕಾಂಗ್ರೆಸ್ ಮುಖಂಡರ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಹಿರೇಮಗಳೂರು ಪುಟ್ಟಸ್ವಾಮಿ,ಮುಖಂಡರಾದ ಎಂ.ಸಿ.ಶಿವಾನಂದಸ್ವಾಮಿ, ಬಿ.ಎಚ್.ಹರೀಶ್,ಹಂಪಾಪುರ ಮಂಜೇಗೌಡ ಇದ್ದರು.