ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ: ಶಿಕ್ಷಕಿ, ಪೋಷಕಿಗೆ ಬೇಲ್‌

By Kannadaprabha NewsFirst Published Feb 15, 2020, 10:48 AM IST
Highlights

ಬೀದರ್‌ ನಗರದ ಪ್ರತಿಷ್ಠಿತ ಶಾಹೀನ್‌ ಶಿಕ್ಷಣ ಸಂಸ್ಥೆ| ಸಿಎಎ ವಿರುದ್ಧ ಮಕ್ಕಳಿಂದ ನಾಟಕ ಪ್ರದರ್ಶನ ಪ್ರಕರಣ| ಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಷರತ್ತುಬದ್ಧ ಜಾಮೀನು ಮಂಜೂರು|

ಬೀದರ್‌[ಫೆ.15]: ಶಾಹೀನ್‌ ಶಿಕ್ಷಣ ಸಂಸ್ಥೆಯ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಶಾಹೀನ್‌ ಶಿಕ್ಷಣ ವಿರುದ್ಧ ಜನಾಕ್ರೋಶ

ಶಿಕ್ಷಣ ಸಂಸ್ಥೆಯಲ್ಲಿ ಜ.21ರಂದು ಮಕ್ಕಳ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಮಕ್ಕಳಿಂದ ಡೈಲಾಗ್‌ಗಳನ್ನು ಹೇಳಿಸಲಾಗಿತ್ತು ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರೊಬ್ಬರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೇಶದ್ರೋಹದ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ನಾಟಕದಲ್ಲಿ ಡೈಲಾಗ್‌ ಹೇಳಿದ್ದ ವಿದ್ಯಾರ್ಥಿನಿಯ ತಾಯಿಯನ್ನು ಬಂಧಿಸಿದ್ದರು. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆ.11ರಂದು ನಡೆಸಿದ್ದ ನ್ಯಾಯಾಲಯ ಫೆ.14ರಂದು ತೀರ್ಪು ಕಾಯ್ದಿರಿಸಿತ್ತು.

ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ದೇಶದ್ರೋಹದ ಕೇಸ್‌ ವಾಪಸ್ ಪಡೆಯಲು ಸಿದ್ದು ಆಗ್ರಹ

ಆರೋಪಿಗಳ ಪರ ನ್ಯಾಯವಾದಿ ನಾರಾಯಣ ಗಣೇಶ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ತಲಾ ಒಂದು ಲಕ್ಷ ರು. ಇಬ್ಬರ ಸಾಲವೆಂಟ್‌ ಶ್ಯೂರಿಟಿ, ಜಿಲ್ಲೆಯಿಂದ ಹೊರ ಹೋಗುವುದಿದ್ದಲ್ಲಿ ನ್ಯಾಯಾಲಯದ ಕಡ್ಡಾಯ ಅನುಮತಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮುಚ್ಚಳಿಕೆ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಬೀದರ್‌ಗೆ ಅಸಾದುದ್ದಿನ್ ಓವೈಸಿ ಭೇಟಿ

click me!