ಕೊಪ್ಪಳ: ಉದ್ಯೋಗ ಖಾತ್ರಿಯಲ್ಲಿ ಶೇ. 105ರಷ್ಟು ಪ್ರಗತಿ ಸಾಧಿಸಿದ್ದೇವೆ : ಸಚಿವ ಆನಂದ ಸಿಂಗ್

By Kannadaprabha News  |  First Published Jan 27, 2023, 8:12 AM IST

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2022- 23ನೇ ಸಾಲಿನಲ್ಲಿ ಇಲ್ಲಿಯವರೆಗೆ 73.44 ಲಕ್ಷ ಮಾನವ ದಿನಗಳನ್ನು ಸೃಜಿಸಿ ಶೇ. 105ರಷ್ಟುಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ತಿಳಿಸಿದರು.


ಕೊಪ್ಪಳ (ಜ.27) : ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2022- 23ನೇ ಸಾಲಿನಲ್ಲಿ ಇಲ್ಲಿಯವರೆಗೆ 73.44 ಲಕ್ಷ ಮಾನವ ದಿನಗಳನ್ನು ಸೃಜಿಸಿ ಶೇ. 105ರಷ್ಟುಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ತಿಳಿಸಿದರು.

ಗುರುವಾರ 74ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದಿಂದ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Latest Videos

undefined

ಅಪ್ಪಟ ಹಿಂದು ಎನ್ನುವ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಆರ್ಭಟಿಸಿದ್ದೇಕೆ: ಕೋಟ

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳಾಗಿವೆ. 1.70 ಲಕ್ಷ ಕುಟುಂಬಗಳಿಗೆ ಹಾಗೂ 3.58 ಲಕ್ಷ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ. ಮುಖ್ಯಮಂತ್ರಿಯವರ ಬಹು ನಿರೀಕ್ಷೆಯ ಕಾರ್ಯಕ್ರಮವಾದ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಜಿಲ್ಲೆಯಲ್ಲಿ 1,575 ಮಹಿಳಾ ಉದ್ಯಮಿಗಳಿಗೆ ಬ್ಯಾಂಕ್‌ ಮೂಲಕ ಸಾಲ ಸೌಕರ್ಯ ಒದಗಿಸಲಾಗುವುದು.

ಜಿಲ್ಲೆಯ ಡಿಜಿಪೇ ಸಖಿಯಾದ ಶ್ರುತಿ ಚವ್ಹಾಣ್‌ ಅವರು ಹಣಕಾಸಿನ ವಹಿವಾಟಿನಲ್ಲಿ ಮುಖ್ಯಮಂತ್ರಿ ಅವರಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಜತೆಗೆ ರಾಷ್ಟ್ರಮಟ್ಟದಲ್ಲಿ ಸಹ ಎರಡನೇ ಸ್ಥಾನ ಪಡೆದಿದ್ದಾರೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022- 23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಬೃಹತ್‌ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕನಕಗಿರಿ ತಾಲೂಕುಗಳಿಗೆ ಪೌಷ್ಟಿಕ ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರತಿ ಘಟಕಕ್ಕೆ .1 ಕೋಟಿ ಅನುದಾನದಂತೆ .2 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 2022- 23ನೇ ಸಾಲಿನಲ್ಲಿ ಜಿಲ್ಲೆಗೆ ಮೈಕ್ರೋ ವಲಯದಲ್ಲಿ .100.48 ಕೋಟಿ ಹಾಗೂ ಮ್ಯಾಕ್ರೊ ವಲಯದಲ್ಲಿ .43.06 ಕೋಟಿ, ಒಟ್ಟು .143.54 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದರು.

ಕೆಕೆಆರ್‌ಡಿಬಿ ಮ್ಯಾಕ್ರೋ ಅಡಿಯಲ್ಲಿ ಜಿಲ್ಲಾ ರಂಗಮಂದಿರಕ್ಕೆ ಪೀಠೋಪಕರಣ, ವಿದ್ಯುದ್ದೀಕರಣ, ಧ್ವನಿವರ್ಧಕ, ಸ್ಟೇಜ್‌ ಅಲಂಕಾರ ಕಾಮಗಾರಿಗಳಿಗೆ .6 ಕೋಟಿ ಅನುದಾನ ನೀಡಲಾಗಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಕೆಕೆಆರ್‌ಡಿಬಿ ಮೆಗಾ ಅಡಿಯಲ್ಲಿ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿನಿಲಯ ಕುಷ್ಟಗಿಗೆ .5 ಕೋಟಿ ಅನುದಾನ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, ಶ್ರೀರಾಮನಗರಕ್ಕೆ .8.92 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್‌. ಪಾಟೀಲ್‌, ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಪಂ ಸಿಇಒ ಬಿ. ¶ೌಜಿಯಾ ತರನ್ನುಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ತ್ರಿವೇದಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ್‌ ಅಮರೇಶ ಬಿರಾದರ್‌ ಇತರರು ಇದ್ದರು.

ಬಹುಮಾನ ವಿತರಣೆ:

ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಪೊಲೀಸ್‌ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್‌ ಆ್ಯಂಡ್‌ ಗೈಡ್‌್ಸ ಹಾಗೂ ವಿವಿಧ ಶಾಲಾ- ಕಾಲೇಜುಗಳ ಮಕ್ಕಳಿಂದ ಪಥಸಂಚಲನ ಹಾಗೂ ಸಚಿವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉತ್ತಮ ಪರೇಡ್‌ ಪ್ರದರ್ಶಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

Karnataka Tourism: ಪ್ರವಾಸಿ ಗೈಡ್‌ಗಳಿಗೆ ಸರ್ಕಾರದ ಭಾರಿ ಬಂಪರ್‌!

ಸಾಧಕರಿಗೆ ಸನ್ಮಾನ:

ರಾಷ್ಟ್ರಪತಿಗಳಿಂದ ಪೊಲೀಸ್‌ ಶ್ಲಾಘನೀಯ ಸೇವಾ ಪದಕ ಪಡೆದ ಮುನಿರಾಬಾದ್‌ ಐಆರ್‌ಬಿ ಕಮಾಂಡೆಂಟ್‌ ಕೆ.ಎಂ. ಮಹಾದೇವ ಪ್ರಸಾದ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ನಿರ್ದೇಶನಾಲಯ ವತಿಯಿಂದ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿರುವ ಕೊಪ್ಪಳ ಅಗ್ನಿಶಾಮಕ ಠಾಣಾಧಿಕಾರಿ ಜಿ. ಕೃಷ್ಣೋಜಿ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

click me!