* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್
* ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಿಂದ ಆಗಿರುವ ಹಾನಿ ಕುರಿತು ಸಿಎಂ ಗಮನಕ್ಕೆ ತಂದ ನಾರಾಯಣ ಗೌಡ
* ವಿಡಿಯೋ ಕಾನ್ಫರೆನ್ಸ್‌ನಲ್ಲಿ ತೀರ್ಥಹಳ್ಳಿ ತಾಲ್ಲೂಕು ಕಚೇರಿಯಿಂದ ಭಾಗವಹಿಸಿದ ಆರಗ ಜ್ಞಾನೇಂದ್ರ
ಶಿವಮೊಗ್ಗ(ಜು.09): ಮಳೆಹಾನಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನಾರಾಯಣ ಗೌಡ ಭಾಗಿಯಾಗಿದ್ದರು.
ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ನಾರಾಯಣ ಗೌಡ ಮಂಡ್ಯದಿಂದ ಸಚಿವ ಕೆ.ಗೋಪಾಲಯ್ಯ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಿಂದ ಆಗಿರುವ ಹಾನಿ ಕುರಿತು ಸಿಎಂ ಗಮನಕ್ಕೆ ಸಚಿವರು ತಂದರು.
ಉಕ್ಕಿ ಹರಿಯುತ್ತಿರುವ ನೇತ್ರಾವತಿಯಲ್ಲಿ ಮೀನು ಹಿಡಿಯುವ ಸಾಹಸ..!
ತೀರ್ಥಹಳ್ಳಿ ಯಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿಯಾಗಿದ್ದರು. ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತೀರ್ಥಹಳ್ಳಿ ತಾಲ್ಲೂಕು ಕಚೇರಿಯಿಂದ ಭಾಗವಹಿಸಿ ಚರ್ಚಿಸಿದರು. ತುಮಕೂರು ಜಿಲ್ಲೆಯಾದ್ಯಂತ ಆಗಿರುವ ಮಳೆಹಾನಿಯ ವಿವರ ನೀಡಿದರು.