ಕಳೆದ 3 ವರ್ಷಗಳಿಂದ ಜಿಲ್ಲಾದ್ಯಂತ ಯಾವುದೇ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಜಿಲ್ಲೆಯ ಜನ 7 ಮಂದಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಿದ ಫಲವನ್ನು ಅನುಭವಿಸಿದ್ದಾರೆ ಎಂದು ಮಾಜಿ ಶಾಸಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.
ಮದ್ದೂರು : ಕಳೆದ 3 ವರ್ಷಗಳಿಂದ ಜಿಲ್ಲಾದ್ಯಂತ ಯಾವುದೇ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಜಿಲ್ಲೆಯ ಜನ 7 ಮಂದಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಿದ ಫಲವನ್ನು ಅನುಭವಿಸಿದ್ದಾರೆ ಎಂದು ಮಾಜಿ ಶಾಸಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಂತರ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದೆ. ಮಳೆಗೆ ರಸ್ತೆಗಳು ಹಾಳಾಗುವ ಸಾಧ್ಯತೆ ಇದ್ದು, ಅವುಗಳನ್ನು ಕಾಲಕಾಲಕ್ಕೆ ದುರಸ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
undefined
ಮಳೆ ಸಮರ್ಪಕವಾಗಿ ಆಗದಿದ್ದರೆ ಈಗಾಗಲೇ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೀರು ಹರಿಸುವಂತೆ ಸೂಚಿಸಿದ್ದೇನೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ನೀರನ್ನು ಹರಿಸುವಂತೆ ತಿಳಿಸಲಾಗಿದೆ. ರಾಜ್ಯಾದ್ಯಂತ ಗುಣಮಟ್ಟದ ಬಿತ್ತನೆ ಬೀಜಗಳನ್ನ ನೀಡುವಂತೆ ಸೂಚಿಸಿ ಅನುಷ್ಠಾನ ಮಾಡಲಾಗಿದೆ ಎಂದರು.
ಮದ್ದೂರಿನಲ್ಲಿ ಚೆಸ್ಕಾಂನ ಉಪ ಕಚೇರಿ ಮಾಡಲು ಸ್ಥಳ ಒದಗಿಸಿ ಕೊಡದೆ ಮೀನಮೇಷ ಎಣಿಸಿದ್ದಾರೆ ಎಂದು ಹೆಸರನ್ನು ಹೇಳದೆ ಮಾಜಿ ಸಚಿವ ಡಿಸಿ ತಮ್ಮಣ್ಣ ವಿರುದ್ಧ ಕಿಡಿಕಾರಿದರು. ಬಜೆಟ್‌ನಲ್ಲಿ ಅದನ್ನು ಸೇರಿಸಿ ಅನುಷ್ಠಾನ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಟೀ ಅಂಗಡಿ ಹಾಗೂ ಪೆಟ್ಟಿಅಂಗಡಿಗಳಲ್ಲಿ ಪರವನಾಗಿ ಪಡೆಯದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದ್ದು, ಈಗಾಗಲೇ ಅಧಿಕಾರಿಗಳಿಗೆ ಅವುಗಳನ್ನು ಪತ್ತೆ ಹಚ್ಚಿ ದೂರು ಪ್ರಕರಣದ ಕಲಿಸಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ ಎಂದರು.
ಶಾಸಕ ಕೆ.ಎಂ.ಉದಯ… ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಗಳು ರೈತರ ಹಾಗೂ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಬೇಕು. ಅನಗತ್ಯವಾಗಿ ವಿಳಂಬ ಮಾಡಬಾರದು. ಸರ್ಕಾರ ನಮ್ಮದೆ ಇರುವುದರಿಂದ ತಾಲೂಕಿನಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ರಮ ಮಾಡಲು ವಿಶೇಷ ಅನುದಾನ ತರಲಾಗುವುದು. ಅಧಿಕಾರಿಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಸಿದ್ಧರಿರಬೇಕು ಎಂದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತಹಸೀಲ್ದಾರ್ ನರಸಿಂಹಮೂರ್ತಿ, ತಾಲೂಕು ಮಟ್ಟದ ಅಧಿಕಾರಿಗಳಾದ ಪರಮೇಶ್, ಪ್ರವೀಣ್, ಪ್ರಕಾಶ್, ಸಿ.ನಾಗಲಕ್ಷ್ಮಿ, ಕಾಳೀರಯ್ಯ ಸೇರಿದಂತೆ ಇತರ ಇದ್ದರು.
ಕೊಟ್ಟ ಭರವಸೆ ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ
ನಾಗಮಂಗಲ (ಅ.13): ಕಳೆದ ಐದು ವರ್ಷದಲ್ಲಿ ಅಧಿಕಾರಕ್ಕೆ ಬಂದ ಮೂವರು ಮುಖ್ಯಮಂತ್ರಿಗಳು ಜನರಿಗೋಸ್ಕರ ಏನು ಮಾಡಿದರು. ಜನಪರವಾದ ಒಂದು ಕಾರ್ಯಕ್ರಮವನ್ನೂ ಕೊಡಲಿಲ್ಲ. ಕಾಂಗ್ರೆಸ್ ಜನರಿಗೆ ಕೊಟ್ಟಿದ್ದ ಭರವಸೆ ಈಡೇರಿಸಿದೆ. ಒಂದು ಕುಟುಂಬಕ್ಕೆ ಸರ್ಕಾರದಿಂದ ಎಷ್ಟು ಸಿಕ್ತಿದೆ ಲೆಕ್ಕ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾರನ್ನ ಬೆಂಬಲಿಸಬೇಕು ಎಂಬ ಬಗ್ಗೆ ತೀರ್ಮಾನಿಸಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಬೆಳ್ಳೂರಿನಲ್ಲಿ ಎಂಡಿಸಿಸಿ ಬ್ಯಾಂಕ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಂಪುಗಳಿಗೆ ಸಾಲ ವಿತರಿಸಿ ಮಾತನಾಡಿ, ಚಿನ್ನ ಇಟ್ಟು ಸಾಲ ತೆಗೆದುಕೊಳ್ಳಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ ಸಾಲವನ್ನು ಮನ್ನಾ ಮಾಡುತೇವೆ ಎಂದು ಕಳೆದ 2018 ರ ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಭರವಸೆ ಕೊಟ್ಟಿದ್ದರು. ಆ ಭರವಸೆ ಈಡೇರಿಸಿದ್ದಾರಾ ಎಂದು ಪ್ರಶ್ನಿಸಿದರು. ಕಳೆದ 5 ವರ್ಷ ಹಿಂದೆ ಆಡಳಿತಕ್ಕೆಬಂದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಜನರಿಗೆ ಎಲ್ಲ ಬಗೆಯ ಸೌಲಭ್ಯಗಳನ್ನು ಕಲ್ಪಿಸಿ ಪೂರ್ಣ ಪ್ರಮಾಣದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೊಡುತ್ತೇವೆಂದು ಹೇಳಿದ್ದರು.
ರೈತರ ಅನುದಾನಕ್ಕೆ ಸಿದ್ದರಾಮಯ್ಯ ಕತ್ತರಿ: ಜಿ.ಟಿ.ದೇವೆಗೌಡ ಆರೋಪ
ಅವರು ಕೊಟ್ಟ ಕೊಡುಗೆಯಾದರೂ ಏನು. ಆದರೆ, ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಿಂದ 5 ವರ್ಷಕ್ಕೆ ಪ್ರತಿ ಕುಟುಂಬಕ್ಕೆ ಎಷ್ಟು ಸಿಗುತ್ತದೆ ಅಂತ ಲೆಕ್ಕ ಮಾಡಿ. ಈ ಯೋಜನೆಗಳಿಂದಾದರೂ ಜನರು ಬದಲಾವಣೆ ಆಗುವರೇ ನೋಡಬೇಕು ಎಂದರು. 2018ರ ಚುನಾವಣೆಯಲ್ಲಿ ಸುರೇಶ್ ಗೌಡನನ್ನು 50 ಸಾವಿರ ಮತಗಳ ಅಂತರದಿಂದ ಕ್ಷೇತ್ರದ ಮತದಾರರು ಗೆಲ್ಲಿಸಿದರು. ಈಗಲೂ ಅದನ್ನೇ ಹೇಳಿಕೊಂಡು ತಿರುಗುತ್ತಿದ್ದಾನೆ. ನಾನು 50 ಸಾವಿರ ಮತಗಳಿಂದ ಗೆದ್ದೀದ್ದೀನಿ, ಚಲುವರಾಯಸ್ವಾಮಿ 4 ಸಾವಿರ ಅಂತರದಲ್ಲಿ ಗೆದ್ದಿದ್ದು, ನಾನೇ ಶಾಸಕ ಎನ್ನುತ್ತಿದ್ದಾನೆ. ನನ್ನನ್ನು ಟೀಕಿಸಿಸುವುದನ್ನೇ ಕೆಲಸ ಮಾಡಿಕೊಂಡಿದ್ದಾನೆ. ಜನರು ಅಂದು 50 ಸಾವಿರ ಮತಗಳಿಂದ ಗೆಲ್ಲಿಸದಿದ್ದರೆ ಅವನು ಹೀಗೆ ಮಾತನಾಡುತ್ತಿರಲಿಲ್ಲ ಎಂದು ಹೇಳಿದರು.