‘ಡಿಕೆಶಿ ನೇತೃತ್ವದಲ್ಲಿ ಕರುನಾಡಲ್ಲಿ ಕಾಂಗ್ರೆಸ್ ಸರ್ಕಾರ’

By Kannadaprabha News  |  First Published Mar 12, 2020, 2:05 PM IST

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತು ಬಲ ಸಿಗುವುದು ಖಚಿತ ಎಂದು ನಾಯಕರು ಹೇಳಿದ್ದಾರೆ. 


ನರಸಿಂಹರಾಜಪುರ [ಮಾ.12] : ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾರತ ಕಂಡ ಮಹಾನ್ ನಾಯಕರಾಗಿದ್ದು, ಕೆಪಿಸಿಸಿಗೆ ಅವರು ಅಧ್ಯಕ್ಷರಾಗಿರುವುದು ಸೂಕ್ತವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ. ಎಸ್. ಸುಬ್ರಮಣ್ಯ ಹೇಳಿದರು. 

ಪಟ್ಟಣದ ವಾಟರ್ ಟ್ಯಾಂಕ್ ಸರ್ಕ ಲ್ ಸಮೀಪದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಸಂಭ್ರಮಾಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟಾ ಕಾಂಗ್ರೆಸ್ ಪಕ್ಷದವರಾದ ಡಿ. ಕೆ.ಶಿವಕುಮಾರ್ ವಿದ್ಯಾರ್ಥಿ ಜೀವನ ದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ರಾಗಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದರು.

Tap to resize

Latest Videos

ಟ್ರಬಲ್ ಶೂಟರ್ ಆಗಿದ್ದ ಡಿಕೆಶಿ ನಿದ್ದೆಗೆಡಿಸುತ್ತಿದ್ದದ್ದು ಮಾತ್ರ ಡಿಎಂವಿ!..

ಪಟ್ಟಣ ಪಂಚಾಯ್ತಿ ಸದಸ್ಯ ಪ್ರಶಾಂತ ಶೆಟ್ಟಿ ಮಾತನಾಡಿ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮ ಪಾಲು ಎಂಬಂತೆ ಎಲ್ಲಾ ಸಮುದಾಯದವರ ಮೇಲೆ ನಂಬಿಕೆ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯ ಧ್ಯಕ್ಷರ ನ್ನಾಗಿ ಹೈಕಮಾಂಡ್ ನೇಮಕ ಮಾಡಿರು ವುದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಸಂತಸ ತಂದಿದೆ. ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ
ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಇ.ಸಿ. ಜೋಯಿ ಮಾತನಾಡಿ, ಸಿದ್ದರಾಮಯ್ಯ ಅವರ ರಾಜಿನಾಮೆ ಅಂಗೀಕರಿಸಿದೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಪಕ್ಷ ನಾಯಕನಾಗಿ ಹೈಕಮಾಂಡ್ ಮುಂದುವರಿಯುತ್ತಿರುವುದು ಸಂತಸ ತಂದಿದೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತುಗಳಾಗಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು. 

click me!