BJP ನೋಟು, ಕಾಂಗ್ರೆಸ್‌ಗೆ ಓಟು: ಡಿಕೆಶಿ ಭರ್ಜರಿ ಪ್ರಚಾರ

Published : Nov 29, 2019, 12:44 PM IST
BJP ನೋಟು, ಕಾಂಗ್ರೆಸ್‌ಗೆ ಓಟು: ಡಿಕೆಶಿ ಭರ್ಜರಿ ಪ್ರಚಾರ

ಸಾರಾಂಶ

ಹಲವು ಶಾಸಕರು ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಡಿ.9ರ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯುವ ಜೊತೆಗೆ ನೂತನ ಶಕೆ ಆರಂಭವಾಗಲಿದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.  

ಚಿಕ್ಕಬಳ್ಳಾಪುರ(ನ.29): ಹಲವು ಶಾಸಕರು ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಡಿ.9ರ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯುವ ಜೊತೆಗೆ ನೂತನ ಶಕೆ ಆರಂಭವಾಗಲಿದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಆಂಜಿನಪ್ಪ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ನಮ್ಮ ಜತೆ ಸಂಪರ್ಕದಲ್ಲಿರುವ ಅನ್ಯ ಪಕ್ಷದ ಶಾಸಕರು ಯಾರು ಎಂಬುದನ್ನು ಪ್ರಸ್ತುತ ಬಹಿರಂಗಪಡಿಸಲು ಸಾಧ್ಯವಿಲ್ಲ. ಡಿ.9ರ ಫಲಿತಾಂಶದ ನಂತರ ರಾಜ್ಯದಲ್ಲಿ ಅಧಿಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ನೋಟು ಕಾಂಗ್ರೆಸ್‌ಗೆ ವೋಟು:

ಪ್ರಸ್ತುತ ಅನರ್ಹರಾಗಿರುವ ಎಲ್ಲ ಶಾಸಕರಿಗೆ ಕಾಂಗ್ರೆಸ್‌ನಲ್ಲಿ ಅವಕಾಶ ಕಲ್ಪಿಸಿದ್ದೇ ತಪ್ಪಾಗಿದೆ. ಪಕ್ಷ ಮತ್ತು ಸಿದ್ದರಾಮಯ್ಯ ಅವರ ನಂಬಿಕೆಗೆ ದ್ರೋಹ ಬಗೆದು ಹೋದ ವ್ಯಕ್ತಿಗೆ ಮತ್ತೆ ಮತ ಹಾಕಬಾರದು. ಹಾಗಾಗಿ ಬಿಜೆಪಿ ನೋಟು ಪಡೆದು ಕಾಂಗ್ರೆಸ್‌ಗೆ ಮತ ಹಾಕಿ ಎಂದು ತಿಳಿಸಿದ್ದಾರೆ.

ಶಿವಶಂಕರ್‌ ರೆಡ್ಡಿ ಐದಾರು ಬಾರಿ ಶಾಸಕರಾದ ನಂತರ ಸಚಿವರಾಗಿದ್ದಾರೆ. ಜಾತ್ಯತೀತ ವ್ಯವಸ್ಥೆ ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಿ ಸಮ್ಮಿಶ್ರ ಸರ್ಕಾರ ರಚಿಸಲಾಗಿತ್ತು. ಯಡಿಯೂರಪ್ಪ ಏಳು ಬಾರಿ ಸಂಚು ರೂಪಿಸಿ ಕೊನೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಷ್ಠೆಯ ಕಣವಾದ ಚಿಕ್ಕಬಳ್ಳಾಪುರ ಉಪಚುನಾವಣೆ

ಕುಮಾರಸ್ವಾಮಿ ಅವರು ಈಗಾಗಲೇ 15 ಕ್ಷೇತ್ರಗಳಲ್ಲಿ ಅನರ್ಹರನ್ನು ಸೋಲಿಸುವುದೇ ಗುರಿ ಎಂದು ಹೇಳಿದ್ದಾರೆ. ಹಾಗಾಗಿ ಜೆಡಿಎಸ್‌ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಈಡಾಗದೇ ಕಾಂಗ್ರೆಸ್‌ ಬೆಂಬಲಿಸುವ ಮೂಲಕ ಸುಧಾಕರ್‌ ಅವರನ್ನು ಮನೆಗೆ ಕಳುಹಿಸಿ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ನೀಡಲು ನನ್ನ ವಿರೋಧ ಇಲ್ಲ. ಆದರೆ, ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜು ಕಿತ್ತುಕೊಂಡಿರುವುದನ್ನು ನಾನು ವಿರೋಧಿಸುತ್ತೇನೆ. ಫಲಿತಾಂಶದ ನಂತರ ಕನಕಪುರಕ್ಕೆ ವೈದ್ಯಕೀಯ ಕಾಲೇಜಿಗಾಗಿ ಹೋರಾಟ ಆರಂಭಿಸುತ್ತೇನೆ ಎಂದು ತಿಳಿಸಿದ್ದಾರೆ.

'ಅಳುವಂತಹದ್ದು ಏನೂ ಆಗಿಲ್ಲ' ಎಚ್‌ಡಿಕೆಗೆ ಚಲುವರಾಯಸ್ವಾಮಿ ಟಾಂಗ್

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!