ಬೆಂಗಳೂರಿಗೆ ಹೊಸ ರೂಪ ನೀಡಲು ಪೂರಕವಾಗಿ ಬಿಬಿಎಂಪಿ ಬಜೆಟ್ ಮಂಡನೆ: ಡಿಕೆ ಶಿವಕುಮಾರ್

By Sathish Kumar KH  |  First Published Feb 18, 2024, 7:15 PM IST

ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


ಬೆಂಗಳೂರು (ಫೆ.18): ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ ಎಂದು ಸನ್ಮಾನ್ಯ ಬೆಂಗಳೂರು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್  ತಿಳಿಸಿದರು.

ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ಭಾನುವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ.ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಕಡೆಗಳಲ್ಲಿ ಈ ಯೋಜನೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ ಎಂದರು.

Tap to resize

Latest Videos

ನರೇಂದ್ರಸ್ವಾಮಿಯನ್ನ ಮಂತ್ರಿ ಮಾಡಿ ಎಂದ ಜನತೆ, ಸೀಟು ಖಾಲಿಯಿಲ್ಲ ಕೂತ್ಕೊಳ್ಳಿ ಎಂದ ಸಿಎಂ ಸಿದ್ದರಾಮಯ್ಯ

ಇದುವರೆಗೂ 12 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದು, 20 ಸಾವಿರ ಅಹವಾಲುಗಳನ್ನು ದಾಖಲಾಗಿವೆ. ಮುಖ್ಯಮಂತ್ರಿಗಳು ಕೂಡ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಅರ್ಜಿಗಳ ವಿಲೇವಾರಿಗೆ ಪ್ರತ್ಯೇಕವಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ.ನೀವು ನಿಮ್ಮ ಸಮಸ್ಯೆ ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಸುತ್ತ ಬಾರದು ಎಂದು ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತಿದ್ದೇನೆ. ನಮ್ಮ ಸರ್ಕಾರ ಸದಾ ನಿಮ್ಮ ಜತೆ ಇರಲಿದೆ. ನಿಮ್ಮ ಎಲ್ಲಾ ಸಮಸ್ಯೆ ಒಂದೇ ದಿನದಲ್ಲಿ ಬಾಗೆ ಹರಿಸಲು ಆಗುವುದಿಲ್ಲ. ಆದರೆ ಹಂತ ಹಂತವಾಗಿ ಬಾಗೆಹರಿಸುತ್ತೇವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಯೋಜನೆ ನಿಮಗೆ ಸಿಗದಿದ್ದರೆ ಅವುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಜತೆಗೆ ನಿಮ್ಮ ಖಾತಾ ಸಮಸ್ಯೆ, ಪಿಂಚಣಿ ಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಆಸ್ತಿಗಳನ್ನು ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೆ ಉಚಿತವಾಗಿ ದಾಖಲೆಗಳನ್ನು ತಲುಪಿಸುವ "ನಮ್ಮ ಸ್ವತ್ತು" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಇತ್ತೀಚೆಗೆ ಆಸ್ತಿ ದಾಖಲೆ ಪರಿಶೀಲನೆಯ ಪ್ರಾಯೋಗಿಕ ಕಾರ್ಯಕ್ರಮವನ್ನು ನಿಮ್ಮದೇ ಕ್ಷೇತ್ರದಲ್ಲಿ ಮಾಡಲಾಗಿದೆ. ಈ ವೇಳೆ ಕೆಲವು ಅಧಿಕಾರಿಗಳು ದಾಖಲೆ ತಿದ್ದಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ಎಫ್ ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಟ್ಟಡ ಕಾರ್ಮಿಕರು, ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಸಬೇಕು. ಆಗ ಸರ್ಕಾರಿ ಸೌಲಭ್ಯಗಳು ಸಿಗಲಿವೆ. ಬೀದಿ ವ್ಯಾಪಾರಿಗಳು ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕದೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು.ಇನ್ನು ತೆರಿಗೆ ಪಾವತಿ ವಿಚಾರವಾಗಿ ಕಳೆದ ಸರ್ಕಾರ ತಿದ್ದುಪಡಿ ಮಾಡಿದ ಕಾನೂನಿನಲ್ಲಿ ದುಬಾರಿ ದಂಡ ವಿಧಿಸಲಾಗಿದೆ. ಇದನ್ನು ಸರಿಪಡಿಸಲು ಮತ್ತೆ ಕಾನೂನಿಗೆ ತಿದ್ದುಪಡಿ ತರಲಾಗುವುದು. ಇದರಿಂದ ಸರಳವಾದ ತೆರಿಗೆ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು.

ಸರ್ಕಾರಿ ಶಾಲಾ ಮಕ್ಕಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯ ಶಿಕ್ಷಕ; ಏನು ಶಿಕ್ಷೆ ಕೊಡ್ತೀರಾ ಸಚಿವರೇ ಎಂದ ಪಾಲಕರು

ಶಾಸಕರಾದ ಸೋಮಶೇಖರ್ ಅವರು ಬಿಡಿಎ ಸಮಸ್ಯೆ,110 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಈ ಎರಡು ಕ್ಷೇತ್ರ ನಮಗೆ ಎರಡು ಕಣ್ಣುಗಳಂತೆ.ಶಾಸಕ ಮುನಿರತ್ನ ಅವರು ಹೇಳಿರುವಂತೆ ಕೊಳವೆ ಬಾವಿಯನ್ನು ಇನ್ನೂ 500 ಅಡಿ ಕೊರೆಸುವ ಬಗ್ಗೆ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ.ಇನ್ನು ಬೆಂಗಳೂರು ನಗರಕ್ಕೆ 6 ಟಿಎಂಸಿ ನೀರು ಬಳಕೆಗೆ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಜನರಿಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡಿದೆ. ಮೇ ತಿಂಗಳ ಒಳಗಾಗಿ ಈ ಕಾವೇರಿ ನೀರು ನಿಮಗೆ ತಲುಪುವಂತೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.

ಈ ವೇಳೆ ಸ್ಥಳೀಯ ಶಾಸಕರಾದ ಮುನಿರತ್ನ, ಎಸ್.ಟಿ ಸೋಮಶೇಖರ್, ಸಂಸದರಾದ ಡಿ.ಕೆ ಸುರೇಶ್, ಮಾಜಿ ರಾಜ್ಯಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಬಿಡಿಎ ಆಯುಕ್ತರಾದ ಜಯರಾಮ್, ಜಲಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

click me!