ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಶಿರಾ : ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪಟ್ಟನಾಯಕನಹಳ್ಳಿಯ ಕ್ಷೇತ್ರ ಪಾಲಕ ಶ್ರೀ ಓಂಕಾರೇಶ್ವರ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಪಟ್ಟನಾಯಕನಹಳ್ಳಿಯ ಶ್ರೀಮಠಕ್ಕೆ ಚುನಾವಣೆಯ ನಂತರ ಭೇಟಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇನೆ. ಶ್ರೀ ನಂಜಾವಧೂತ ಸ್ವಾಮೀಜಿಯವರ ಆರ್ಶೀವಾದ ಪಡೆದಿದ್ದೇನೆ ಎಂದರು.
ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪಟ್ಟನಾಯಕನಹಳ್ಳಿ ಮಠದಲ್ಲಿ ಒತ್ತಾಯಿಸಿದರು.
ಹಿರಿಯ ರಾಜಕಾರಣಿಯಾಗಿರುವ ಟಿ.ಬಿ.ಜಯಚಂದ್ರ ಅವರ ಅನುಭವ ರಾಜ್ಯದ ಅಭಿವೃದ್ಧಿಗೆ ಅತ್ಯವಶ್ಯವಾಗಿದೆ. ಜೊತೆಗೆ ಕುಂಚಿಟಿಗ ಜನಾಂಗದಿಂದ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದು ಅವರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿದರು. ಕುಂಚಿಟಿಗರ ಸಂಘದ ಕಾರ್ಯದರ್ಶಿ ಗುಳಿಗೇನಹಳ್ಳಿ ನಾಗರಾಜ್, ನಿರ್ದೇಶಕರಾದ ಶಶಿಧರ್ ಗೌಡ, ಸುಧಾಕರ್ ಗೌಡ, ಡಿ.ಸಿ.ಅಶೋಕ್, ಮುಖಂಡರಾದ ಮನುಪಾಟೀಲ್, ಸಂಕಾಪುರ ಚಿದಾನಂದ್, ಗುರುಮೂರ್ತಿ ಗೌಡ ಕುಂಚಿಟಿಗ ಸಮುದಾಯದ ಏಕೈಕ ಶಾಸಕರಾದ ಟಿ.ಬಿ.ಜಯಚಂದ್ರ ಅವರನ್ನು ಮಂತ್ರಿ ಮಾಡುವಂತೆ ಮನವಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಟಿ.ಬಿ.ಜಯಚಂದ್ರ, ಎಚ್.ಡಿ.ರಂಗನಾಥ್, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಮಾಜಿ ಜಿ.ಪಂ. ಸದಸ್ಯ ಸಿ.ಅರ್.ಉಮೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಅರ್.ಮಂಜುನಾಥ್, ಮುಖಂಡರಾದ ಅಡಿಟರ್ ನಾಗರಾಜ್, ರಾಜಣ್ಣ ,ದೇವರಾಜ್, ಭೂತೇಶ್, ಹಾರೋಗೆರೆ ಮಹೇಶ್, ಸೀಗಲಹಳ್ಳಿ ವೀರೇಂದ್ರ ಸೇರಿದಂತೆ ಹಲವರು ಹಾಜರಿದ್ದರು.
ಎಲ್ಲಾ ಗ್ಯಾರಂಟಿ ಈಡೇರಿಕೆ
ಬೆಂಗಳೂರು (ಜೂ.12): ಕೇಂದ್ರ ಮತ್ತು ರಾಜ್ಯದಲ್ಲಿ ನಾವೇ ಬಲಿಷ್ಠರು, ಡಬಲ್ ಎಂಜಿನ್ ಸರ್ಕಾರ ಎಂದವರನ್ನು ಕಿತ್ತೆಸೆದು ಮತ್ತೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದೀರಿ. ಯಾವುದೇ ಕಾರಣಕ್ಕೂ ಮಾತು ತಪ್ಪದೇ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಭಾನುವಾರ ವಿಧಾನಸೌಧದ ಪೂರ್ವದ್ವಾರದ ಮುಂಭಾಗ ಆಯೋಜಿಸಿದ್ದ ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಕ್ತಿ ಯೋಜನೆ ಮಹಿಳೆಯರಿಗೆ ಶಕ್ತಿ ತುಂಬುವ ಯೋಜನೆ ಹೆಣ್ಣು ಶಕ್ತಿಯ ಪ್ರತಿರೂಪ ಎಂದು ಈ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರು ರಾಜ್ಯದ ಎಲ್ಲಿಗೆ ಬೇಕಾದರೂ ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣಿಸಬಹುದು ಎಂದರು.
‘ದೀಪಂಜ್ಯೋತಿ ಕರಂಜ್ಯೋತಿ ಆರೋಗ್ಯ ಧನ ಸಂಪದಂ’ ಎಂದು ಹೇಳಿ ದೀಪವನ್ನು ಬೆಳಗಿಸುವುದರ ಮೂಲಕ ಈ ರಾಜ್ಯದ ಅಂಧಕಾರವನ್ನು ತೊಲಗಿಸುವ ಕೆಲಸಕ್ಕೆ ಮುನ್ನುಡಿ ಬರೆದಿದ್ದೇವೆ. ಪರಿಶುದ್ಧವಾದ ಆಡಳಿತ ನೀಡಲು ನಾವು ಸನ್ನದ್ದರಾಗಿದ್ದೇವೆ. ವಿರೋಧ ಪಕ್ಷಗಳು ನಾನಾ ರೀತಿಯಲ್ಲಿ ಟೀಕೆ ಮಾಡುತ್ತಿವೆ. ನಮಗೆ ಆ ಟೀಕೆಗಳಿಗೆಲ್ಲ ಉತ್ತರ ಕೊಡುವುದಕ್ಕೆ ಸಮಯವಿಲ್ಲ, ನಮ್ಮ ಕೈಲಿ ಆಗೋದು ಇಲ್ಲ. ಏಕೆಂದರೆ ಉತ್ತಮ ಆಡಳಿತದ ಭವಿಷ್ಯ ನಮ್ಮ ಮುಂದಿದೆ, ಉತ್ತರ ಕೊಡುತ್ತಾ ಹೋದರೆ ಕೆಲಸ ಮಾಡೋಕೆ ಸಮಯವೇ ಇರುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತನ್ನು ವಿರೋಧಪಕ್ಷಗಳು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
10 ವರ್ಷ ಮಹಿಳೆಯರಿಗೆ ಉಚಿತ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಮ.ಪ್ರ. ಸ್ಕೀಂ ನಮ್ಮ ಕಾಪಿ: ಬಿಜೆಪಿಯವರು ಕಾಂಗ್ರೆಸ್ ನಾಯಕರಿಗೆ ಕಣ್ಣಿಲ್ಲ, ಕಿವಿಯಿಲ್ಲ ಎಂದುಕೊಂಡಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕಿಯಾದ ಪ್ರಿಯಾಂಕ ಗಾಂಧಿ ಅವರು ಜನವರಿ 15ನೇ ತಾರೀಖಿನಂದು ನಾ ನಾಯಕಿ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆ ಘೋಷಣೆ ಮಾಡಿದ್ದರು. ಇದೇ ಯೋಜನೆಯನ್ನು ಮಧ್ಯಪ್ರದೇಶದಲ್ಲಿ ಬಿಜೆಪಿಯವರು ಕಾಪಿ ಮಾಡಿ ಮಹಿಳೆಯರಿಗೆ 1 ಸಾವಿರ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಇಲ್ಲಿ 2 ಸಾವಿರ ಕೊಟ್ಟರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಕೂಗಾಡುತ್ತಿದ್ದಾರೆ. ಡಬಲ್ ಎಂಜಿನ್ ಅಲ್ಲ. ಡಬಲ್ ನಿಲುವಿನ ಪಕ್ಷ ಎಂದರೆ ಬಿಜೆಪಿ ಎಂದರು.
ಶಕ್ತಿ ಇಲ್ಲದ ಅಶಕ್ತ ಜನರಿಗೆ ಶಕ್ತಿ ಕೊಡಬೇಕು ಎನ್ನುವುದು ನಮ್ಮ ಧ್ಯೇಯ: ಸಿದ್ದರಾಮಯ್ಯ