ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಬೇಡಿ: ಸಚಿವ ಈಶ್ವರ ಖಂಡ್ರೆ

By Kannadaprabha News  |  First Published Nov 8, 2023, 12:05 PM IST

ಪ್ರತಿ ವರ್ಷ ರೈತರು ಅತಿವೃಷ್ಟಿ - ಅನಾವೃಷ್ಟಿ ಹೊಡೆತಕ್ಕೆ ಸಿಲುಕಿ ಸಂಕಷ್ಟ ಅನುಭಸುತ್ತಾರೆ. ಬೆಳೆ ಸರಿಯಾಗಿ ಬೆಳೆದರೆ ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಬಿತ್ತನೆ, ಉಳಿಮೆಗೆ ರೈತರು ಸಾಕಷ್ಟು ಹಣ ಖರ್ಚು ಮಾಡಿ ಸಾಲದ ಹೊರೆ ತಾಳದೇ ಆತ್ಮಹತ್ಯೆ ದಾರಿ ತುಳಿಯುತ್ತಿರುವುದು ಆತಂಕ ತರಿಸಿದೆ. ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ ಸಚಿವ ಈಶ್ವರ ಖಂಡ್ರೆ 
 


ಭಾಲ್ಕಿ(ನ.08):  ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ರೈತರು ಆತ್ಮಹತ್ಯೆಗೆ ಶರಣಾಗಬಾರದು. ರೈತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಸರ್ಕಾರ ನಿಮ್ಮೊಂದಿಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಭಯ ನೀಡಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆಯಿಂದ ಮಂಜೂರಾದ 75 ಲಕ್ಷ ರು.ಪರಿಹಾರ ಧನದ ಚೆಕ್ ಅನ್ನು ಆತ್ಮಹತ್ಯೆ ಮಾಡಿಕೊಂಡ ಮತ್ತು ಆಕಸ್ಮಿಕವಾಗಿ ಮರಣ ಹೊಂದಿದ 18 ಸಂತ್ರಸ್ತರ ಕುಟುಂಬದವರಿಗೆ ವಿತರಿಸಿ ಮಾತನಾಡಿದರು.

Latest Videos

undefined

ಬಿಜೆಪಿ ಅಧಿಕಾರಕ್ಕೆ ಯಾವ ಮಟ್ಟಕ್ಕಾದ್ರೂ ಇಳಿಬೋದು: ಸಚಿವ ಸಂತೋಷ ಲಾಡ್‌

ಪ್ರತಿ ವರ್ಷ ರೈತರು ಅತಿವೃಷ್ಟಿ - ಅನಾವೃಷ್ಟಿ ಹೊಡೆತಕ್ಕೆ ಸಿಲುಕಿ ಸಂಕಷ್ಟ ಅನುಭಸುತ್ತಾರೆ. ಬೆಳೆ ಸರಿಯಾಗಿ ಬೆಳೆದರೆ ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಬಿತ್ತನೆ, ಉಳಿಮೆಗೆ ರೈತರು ಸಾಕಷ್ಟು ಹಣ ಖರ್ಚು ಮಾಡಿ ಸಾಲದ ಹೊರೆ ತಾಳದೇ ಆತ್ಮಹತ್ಯೆ ದಾರಿ ತುಳಿಯುತ್ತಿರುವುದು ಆತಂಕ ತರಿಸಿದೆ. ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ಜಿಪಂ ಮಾಜಿ ಅಧ್ಯಕ್ಷ ಶಿವರಾಜ ಹಾಸನಕರ್, ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ, ರೇವಣಸಿದ್ದಯ್ಯ ಸ್ವಾಮಿ, ಸಂಜೀವ ಮೇತ್ರೆ ಇದ್ದರು.

click me!