ಸರ್ಕಾರದ ಸಹಾಯಧನ, ಸಾಲ ಸೌಲಭ್ಯಗಳನ್ನು ಫಲಾನುಭವಿಗಳ ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡರೆ ಸೂಕ್ತ ಕಾನೂನು ಕ್ರಮ ಜರುಗಿಸಲು ಕ್ರಮಕೈಗೊಳ್ಳಲು ಶಿಪಾರಸ್ಸು ಮಾಡಲಾಗುವುದು.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಮಾ.15): ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಇಲಾಖೆಗಳೊಂದಿಗೆ ಬ್ಯಾಂಕ್ ಅಧಿಕಾರಿಗಳು ಸಹಕಾರ ನೀಡಬೇಕು. ಸಹಾಯಧನ, ಸಾಲ ಸೌಲಭ್ಯಗಳನ್ನು ಫಲಾನುಭವಿಗಳ ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡರೆ ಸೂಕ್ತ ಕಾನೂನು ಕ್ರಮ ಜರುಗಿಸಲು ಕ್ರಮಕೈಗೊಳ್ಳಲು ಶಿಪಾರಸ್ಸು ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನದಬಮೂರನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿ ಬರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಮೀಸಲಿರುವ ಅನುದಾನವನ್ನು ಇಲಾಖೆ ಅಧಿಕಾರಿಗಳು ನಿಗದಿತ ಕಾಲಮಿತಿಯಲ್ಲಿ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.
ಬಂದಿದ್ದು ಸೈಕಲ್ ಮೇಲೆ; ಹೋಗಿದ್ದು ಬೈಕ್ ಮೇಲೆ! ಧಾರವಾಡದೊಲ್ಲೊಬ್ಬ ಖತರ್ನಾಕ್ ಕಳ್ಳ!
ಮದ್ಯವರ್ತಿಗಳ ಹಾವಳಿ ತಡೆಗೆ ಅಧಿಕಾರಿಗಳು ಎಚ್ಚರವಹಿಸಿ: ಇನ್ನು ಫಲಾನುಭವಿಗಳ ಆಯ್ಕೆಯಿಂದ ಅವರಿಗೆ ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಸರ್ಕಾರದ ಸಹಾಯಧನ ತಲುಪುವವರೆಗೆ ಗಮನಿಸಬೇಕು. ಯಾವುದೇ ರೀತಿಯಿಂದ ಮದ್ಯವರ್ತಿಗಳ ಹಾವಳಿ ಆಗದಂತೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು. ವಿವಿಧ ಇಲಾಖೆಗಳು ಮೀಸಲಿಟ್ಟಿರುವ ಅನುದಾನ ಬಳಕೆ ತೃಪ್ತಿಕರವಾಗಿದ್ದು, ಬ್ಯಾಂಕ್ ಸೌಲಭ್ಯ ಬೇಗನೆ ಸಿಗುವಂತೆ ಮತ್ತು ಬ್ಯಾಂಕಿನವರು ಸಕಾರಾತ್ಮಕವಾಗಿ ಸ್ಪಂದಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಇಲಾಖೆಯ ಯೋಜನೆಗಳು ಮತ್ತು ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗೆ ಪಾರದರ್ಶಕವಾಗಿ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಕುಂಬಿ, ಎನ್‍ಜಿಓ ಸಂಸ್ಥೆ ಹುಬ್ಬಳ್ಳಿಯ ಕ್ರಿಶ್ಚಿಯನ್ ಫೆಲೊಶಿಪ್ ಚರ್ಚ್ ಪ್ರತಿನಿಧಿ ಸೇರಿದಂತೆ ಉಳಿದ ಸದಸ್ಯರು ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಇದ್ದರು.
ಕಲ್ಯಾಣನಗರ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆಗೆ ಸಿದ್ಧ: ಧಾರವಾಡಕ್ಕೆ ಮತ್ತೊಮ್ಮೆ ಮೋದಿ ಬರ್ತಾರಾ?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಗೆಜೆಟೆಡ್ ಮಾನ್ಯೇಜರ ಲಲಿತಾ ಹಾವೇರಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಸುಧೀರ ಸಾಹುಕಾರ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು