ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯ| ಹಾವೇರಿಯ ಬಸವೇಶ್ವರ ನಗರದಲ್ಲಿ ನಡೆದ ಘಟನೆ| ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ| ಗೌರಮ್ಮ ಸ್ಮಾರಕ ಮೊಮೊರಿಯಲ್ ಆಸ್ಪತ್ರೆಯ ವೈದ್ಯರಾಗಿದ್ದ ವೈದ್ಯ|
ಹಾವೇರಿ(ಆ.23): ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂತಹ ಘಟನೆ ನಡೆದಿದೆ. ಹೌದು, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಸವೇಶ್ವರ ನಗರದಲ್ಲಿ ಇಂದು(ಭಾನುವಾರ) ನಡೆದಿದೆ.
ಡಾ. ಜಗದೀಶ್ ಗೊಡ್ಡೆಮ್ಮಿ (47) ಎಂಬುವರೇ ಆತ್ಮಹತ್ಯೆಗೆ ಶರಣಾದ ವೈದ್ಯರಾಗಿದ್ದಾರೆ. ಮೃತ ಜಗದೀಶ್ ನಗರದ ಗೌರಮ್ಮ ಸ್ಮಾರಕ ಮೊಮೊರಿಯಲ್ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೈಸೂರು: 'ಕೊರೋನಾ ವಾರಿಯರ್ ಆತ್ಮಹತ್ಯೆ, ನಾಗೇಂದ್ರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ'
ಡಾ. ಜಗದೀಶ್ ಗೊಡ್ಡೆಮ್ಮಿ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.