ಕೊರೋನಾ ಮಹಾಮಾರಿ : ತಜ್ಞ ವೈದ್ಯ ಸಾವು

Kannadaprabha News   | Asianet News
Published : Apr 20, 2021, 08:28 AM IST
ಕೊರೋನಾ ಮಹಾಮಾರಿ : ತಜ್ಞ ವೈದ್ಯ ಸಾವು

ಸಾರಾಂಶ

ಕೊರೋನಾದಿಂದ ತಜ್ಞ ವೈದ್ಯರೋರ್ವರು ನಿಧನರಾಗಿದ್ದಾರೆ. ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ವೈದ್ಯರು ಮೃತಪಟ್ಟಿದ್ದಾರೆ. 

ಚನ್ನಪಟ್ಟಣ (ಏ.20): ಕೊರೋನಾದಿಂದಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಹೇಶ್‌ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಭಾನುವಾರ ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಚಿಕಿತ್ಸೆ ವಿಫಲಗೊಂಡು ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. 

ಈ ಹಿಂದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಮಂಜುನಾಥ್‌ ಕೋವಿಡ್‌ನಿಂದಾಗಿ ಕೊನೆಯುಸಿ ರೆಳೆದಿದ್ದರು. ಅವರ ನಿಧನದಿಂದ ಖಾಲಿಯಾಗಿದ್ದ ಸ್ಥಾನಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಇದೀಗ ಇವರು ಸಹ ಕೊರೋನಾದಿಂದ ಸಾವಿಗೀಡಾಗಿರುವುದು ದುರ್ದೈವ.

ಬೀದರ್‌, ರಾಮನಗರದ 2 ಗ್ರಾಮ ಸ್ವಯಂ ಲಾಕ್‌ಡೌನ್‌! ...

ಸಚಿವರ ಸಂತಾಪ:  ಕೋವಿಡ್‌ನಿಂದ ಸಾವಿಗೀಡಾಗಿರುವ ವೈದ್ಯ ಡಾ.ಮಹೇಶ್‌ ಅವರ ನಿಧನಕ್ಕೆ ಆರೋಗ್ಯ ಸಚಿವ ಸುಧಾಕರ್‌, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ತಮ್ಮ ಅಧಿಕೃತ ಟ್ವೀಟರ್‌ ಪೇಜ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಕೋವಿಡ್‌ ವಾರಿಯರ್‌ ಆಗಿ ಕೆಲಸ ಮಾಡುತ್ತಿದ್ದ ವೈದ್ಯರ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

PREV
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ