ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು(ಮೇ 27): ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
1)ವೈದ್ಯರು/ತಜ್ಞರು - 3 ಹುದ್ದೆ, ವಿದ್ಯಾರ್ಹತೆ-ಎಮ್.ಬಿ.ಬಿ.ಎಸ್/ ಯಾವುದೇ ತಜ್ಞತೆ( ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಆಗಿರಬೇಕು) 2) ಶುಶ್ರೂಷಕರು 9 ಹುದ್ದೆ, ವಿದ್ಯಾರ್ಹತೆ- ಕರ್ನಾಟಕ ಸರ್ಕಾರದಿಂದ ನೋಂದಾಯಿತ ಸಂಸ್ಥೆಗಳಿಂದ ಜಿಎನ್.ಎಂ/ ಬಿ.ಎಸ್.ಸಿ. ನರ್ಸಿಂಗ್ ಪದವಿ ಪಡೆದಿರಬೇಕು. 3) ಪ್ರಯೋಗ ಶಾಲಾ ತಜ್ಞರು 4 ಹುದ್ದೆ, ವಿದ್ಯಾರ್ಹತೆ- ಕರ್ನಾಟಕ ಅರೆವೈದ್ಯಕೀಯ ಮಂಡಳಿಯಿಂದ 2 ಅಥವಾ 3 ವರ್ಷಗಳ ಕಿ.ವೈ.ಪ್ರ.ಶಾ ತಂತ್ರಜ್ಞಾನ ತರಬೇತಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಪಡೆದಿರಬೇಕು. 4) ಗ್ರೂಪ್ ಡಿ - 6 ಹುದ್ದೆ, ವಿದ್ಯಾರ್ಹತೆ, ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ವಿದ್ಯಾರ್ಥಿನಿಯ ಕವನ ಪುಸ್ತಕಕ್ಕೆ ಅಭಿನಂದನಾ ಪತ್ರ ಬರೆದ ಶಿಕ್ಷಣ ಸಚಿವ
ಈ ಮೇಲಿನ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ 6 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಮೇ 30ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2423672 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.