ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಒಳಗಾಗದೆ ಸಂಸ್ಕಾರವಂತರಾಗಿ ಜೀವನದ ಕೌಶಲ್ಯಗಳನ್ನು ಮೈಗೂಡಿಕೊಂಡು ಸ್ಪಷ್ಟಹಾಗೂ ನಿರ್ದಿಷ್ಟಗುರಿಯನ್ನು ಹೊಂದುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಿದಾಗ ಮಾತ್ರ ಜೀವನಕ್ಕೊಂದು ಅರ್ಥ ಸಿಗಲಿದೆ ಎಂದು ಬದುಕು ಸಾಂತ್ವನ ಕೇಂದ್ರ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶಕ ಬಿ.ಎಸ್. ನಂದಕುಮಾರ್ ತಿಳಿಸಿದರು.
ತಿಪಟೂರು : ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಒಳಗಾಗದೆ ಸಂಸ್ಕಾರವಂತರಾಗಿ ಜೀವನದ ಕೌಶಲ್ಯಗಳನ್ನು ಮೈಗೂಡಿಕೊಂಡು ಸ್ಪಷ್ಟಹಾಗೂ ನಿರ್ದಿಷ್ಟಗುರಿಯನ್ನು ಹೊಂದುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಿದಾಗ ಮಾತ್ರ ಜೀವನಕ್ಕೊಂದು ಅರ್ಥ ಸಿಗಲಿದೆ ಎಂದು ಬದುಕು ಸಾಂತ್ವನ ಕೇಂದ್ರ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶಕ ಬಿ.ಎಸ್. ನಂದಕುಮಾರ್ ತಿಳಿಸಿದರು.
ನಗರದ ಕಲ್ಪತರು ಪದವಿ ಕಾಲೇಜಿನಲ್ಲಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾಂತ್ವನ ಕೇಂದ್ರ, ಬದುಕು ಸಂಸ್ಥೆ ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಡೆದ ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ಕಾನೂನು ಅರಿವು, ಮಹಿಳಾ ಸಬಲೀಕರಣ ಮತ್ತು ಸರ್ಕಾರದ ಸೌಲಭ್ಯಗಳ ಕುರಿತು ವಿಚಾರ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಹುಚ್ಚು ಖೋಡಿ ಮನಸ್ಸು ಅದು ಹದಿನಾರರ ವಯಸ್ಸು ಎಂಬಂತೆ ಗಳು ತಮ್ಮ ಮನಸ್ಸನ್ನು ಮಂಗನಂತೆ ಹರಿಯ ಬಿಟ್ಟು ಜೀವನವನ್ನು ನರಕ ಮಾಡಿಕೊಳ್ಳದೆ, ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಜೀವನವೆಂಬ ಪರೀಕ್ಷೆಯಲ್ಲಿ ಸಂಸ್ಕಾರ ಸಾಮರ್ಥ್ಯವನ್ನು ಗಳಿಸಬೇಕು. ಮಾನಸಿಕ, ಬೌದ್ಧಿಕವಾಗಿ ಎಷ್ಟೇ ಪ್ರಬುದ್ಧರಾದರೂ ಮೌಲ್ಯಯುತ ಕೌಶಲ್ಯಗಳಿಲ್ಲದೆ ಹೋದಲ್ಲಿ ಅಂತಹ ವ್ಯಕ್ತಿತ್ವಕ್ಕೆ ಪೂರ್ಣ ಮಾನ್ಯತೆ ಸಿಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿ ದಿಸೆಯಲ್ಲಿಯೇ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದ ಅವರು, ಮಹಿಳಾ ಸಾಂತ್ವನ ಕೇಂದ್ರದ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು.
undefined
ತುಮಕೂರು ಸ್ವಾಧಾರ ಗೃಹ ಅಧೀಕ್ಷಕರಾದ ಸಿದ್ದಗಂಗಾ ಮಾತನಾಡಿ, ಮಹಿಳೆಯರು ಸಬಲೀಕರಣರಾದಾಗ ಮಾತ್ರ ಸಮಾಜದಲ್ಲಿ ಧೈರ್ಯವಾಗಿ ನಿಲ್ಲಲು ಸಾಧ್ಯ. ಮಹಿಳೆ ಸಂಕೋಚ, ಭಯ ಬಿಟ್ಟು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿ ಜೀವನವನ್ನೇ ನರಕ ಮಾಡಿಕೊಳ್ಳುತ್ತಿದ್ದಾರೆ ಎಂದ ಅವರು ಸಖಿ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಧನಂಜಯ, ನಿಂಗೇಗೌಡ, ಬದುಕು ಸಾಂತ್ವನ ಕೇಂದ್ರದ ಸಿಬ್ಬಂದಿ ಮೋಹನ್‌ಕುಮಾರ್ ಸೇರಿದಂತೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಕ್ಕಳು ಚಂಚಲ ಮನಸ್ಸು, ಆಕರ್ಷಣೆ, ಚಟಗಳಿಗೆ ಬಲಿಯಾಗಿ ಕೆಟ್ಟಮನಸ್ಸಿನಿಂದ ಹಾದಿ ತಪ್ಪುತ್ತಿರುವುದು ಬಹಳ ಅಪಾಯಕಾರಿ. ತಂದೆ-ತಾಯಿಗಳ, ಗುರು-ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಗುರಿಯೊಂದಿಗೆ ಮುನ್ನಡೆದು, ಮೌಲ್ಯಾಧಾರಿತ ಶಿಕ್ಷಣದಿಂದ ಸದ್ಗುಣಿಗಳಾಗಬೇಕು. ಓದುವ ವಯಸ್ಸಿನಲ್ಲಿ ಮೊಬೈಲ್, ವಾಟ್ಸಾಪ್ ಬಳಸದೆ ಓದಿನತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀವೆ ಸಂಕಟ ಅನುಭವಿಸುವಂತಾಗುತ್ತದೆ.
ಡಾ.ವಿ.ಮಾಲತಿ ಪ್ರಾಂಶುಪಾಲರು