ಕೋವಿಡ್ ಎರಡನೇ ಅಲೆ ಸಷ್ಟಿಸಿದ ಪರಿಸ್ಥಿತಿ ಮತ್ತೆ ರಾಜ್ಯದಲ್ಲಿ ಮರುಕಳಿಸಬಾರದು ಎನ್ನವ ನಿಟ್ಟಿನಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಶೀಘ್ರದಲ್ಲಿಯೆ ರೂಪಿಸಲಿದೆಯೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ : ಕೋವಿಡ್ ಎರಡನೇ ಅಲೆ ಸಷ್ಟಿಸಿದ ಪರಿಸ್ಥಿತಿ ಮತ್ತೆ ರಾಜ್ಯದಲ್ಲಿ ಮರುಕಳಿಸಬಾರದು ಎನ್ನವ ನಿಟ್ಟಿನಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಶೀಘ್ರದಲ್ಲಿಯೆ ರೂಪಿಸಲಿದೆಯೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಭಾನುವಾರ ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಸಿಎಸ್‌ಐ ಚಚ್‌ರ್‍ಗೆ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ, ಕ್ರೈಸ್ತ ಬಾಂಧವರಿಗೆ ಹಬ್ಬದ ಶುಭಾಶಯ ತಿಳಿಸಿ ನಂತರ ತಮ್ಮನ್ನು ಬೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ (Karnataka) ವಿಪತ್ತಿನ ನಿರ್ವಹಣೆಯ ಉಪಾಧ್ಯಕ್ಷರಾದ ಕಂದಾಯ ಸಚಿವ ಆರ್.ಅಶೋಕ್ (R Ashok) ಅವರೊಂದಿಗೆ ನಾನು ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿ ಪರಾಮರ್ಶೆ ನಡೆಸಿದ್ದೇವೆ. ಈಗಲೇ ಎಲ್ಲಾ ವಿಶೇಷ ಮಾರ್ಗಸೂಚಿಗಳನ್ನು ನಾಳೆಯಿಂದಲೇ ಅನುಷ್ಠಾನಕ್ಕೆ ತರುತ್ತೇವೆಂದು ನಾವು ಹೇಳುವುದಿಲ್ಲ. ಆದರೆ ವರ್ಷಾಂತ್ಯದಲ್ಲಿ ಹಲವು ಚಟುವಟಿಕೆಗಳು ದೊಡ್ಡ ಮಟ್ಟದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ವಿಶೇಷವಾಗಿ ಕ್ರಿಸ್‌ಮಸ್, ಹೊಸ ವರ್ಷದ ಆಚರಣೆ ಬರುವ ಕಾರಣ, ಚಟುವಟಿಕೆಗಳ ಮೇಲೆ ಯಾವ ರೀತಿ ನಾವು ನಿಗಾ ವಹಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತಾರವಾಗಿ ಚರ್ಚೆ ನಡೆಸಿದ್ದೇವೆಂದರು. ರಾಜ್ಯದಲ್ಲಿ ಮೊದಲ ಹಾಗೂ ಎರಡನೇ ಅಲೆ ಸೃಷ್ಠಿಸಿದ ಸ್ಥಿತಿ ಮತ್ತೆ ರಾಜ್ಯದಲ್ಲಿ ಮರುಕಳಿಸಬಾರದು ಎನ್ನುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ ಎಂದರು.
ಜನತೆ ಕೂಡ ಸಾಕಷ್ಟುಜನಜಂಗುಳಿ ಇರುವ ಕಡೆ ಕಡ್ಡಾಯವಾಗಿ ಮಾಸ್‌್ಕ ಧರಿಸುವುದು ಕೋವಿಡ್ ನಿಯಂತ್ರಣಕ್ಕೆ ಇರುವ ಸರಳ ಉಪಾಯ. ಅಲ್ಲದೇ ಮೂರನೇ ಲಸಿಕೆ ಬೂಸ್ಟರ್ ಡೋಸ್‌ನ್ನು ಕಡ್ಡಾಯವಾಗಿ ಪಡೆಯಬೇಕೆಂದರು. ಎಷ್ಟೋ ಸಾಧ್ಯವೋ ಅಷ್ಟುಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದರು. ಕಳೆದ ಮೂರು ವರ್ಷಗಳ ಅನುಭವದ ಪಾಠ ನಮಗೆ ಆಗಬೇಕಿದೆ. ಮೊದಲ ಅಲೆ ಸಂದರ್ಭದಲ್ಲಿ ನಮಗೆ ಏನು ಗೊತ್ತಿರಲಿಲ್ಲ. ಮೊದಲು ಲಸಿಕೆ ಇರಲಿಲ್ಲ. ಈಗ ಲಸಿಕೆ ಕೂಡ ಸಿದ್ದವಾಗಿದೆ. ಕೋವಿಡ್ ಸದ್ಯಕ್ಕೆ ಹೋಗುವ ಪರಿಸ್ಥಿತಿ ಇಲ್ಲ. ಆದ್ದರಿಂದ ಕೋವಿಡ್‌ನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ನಾವು ಮೂರು ವರ್ಷಗಳ ಅನುಭವವನ್ನು ಅರಿತು ಕೋವಿಡ್ ವಿರುದ್ದ ಪ್ರತಿಯೊಬ್ಬರು ಅನುಸರಿಸಬೇಕೆಂದರು.
ವಿಪಕ್ಷದ ವಿರುದ್ಧ ಕಿಡಿ
ಕೋವಿಡ್ ಅಲೆ ಬಗ್ಗೆ ಕಾಂಗ್ರೆಸ್ ನಾಯಕರು ಉಡಾಫೆ ಮಾತುಗಳನ್ನಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಇತಂಹ ಉಡಾಫೆ ಮಾತುಗಳಿಂದಲೇ ಕಾಂಗ್ರೆಸ್ ದೇಶದಲ್ಲಿ ನೆಲ ಕಚ್ಚುತ್ತಿದೆ. 70, 80 ಸೀಟು ಪಡೆಯುವ ಕಡೆ ಆರೇಳು ಸೀಟು ಪಡೆಯುತ್ತಿದೆ. ಜನರ ಆರೋಗ್ಯದ ವಿಚಾರದಲ್ಲಿ ಉಡಾಪೆ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಜನರೇ ತಕ್ಕಪಾಠ ಕಲಿಸುತ್ತಾರೆಂದರು.
ಕೋವಿಡ್ ನೆಪದಲ್ಲಿ ಯಾತ್ರೆ ನಿಲ್ಲಿಸಲ್ಲ
ಬೆಂಗಳೂರು(ಡಿ.26): ‘ಕೊರೋನಾ ನೆಪದಲ್ಲಿ ಜನರನ್ನು ವಿನಾಕಾರಣ ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಈ ನೆಪದಲ್ಲಿ ಬಸ್ ಯಾತ್ರೆ ನಿಲ್ಲಿಸುವುದು ಸಾಧ್ಯವಿಲ್ಲ. ಕಾಂಗ್ರೆಸ್ ಬಸ್ ಯಾತ್ರೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಯಾತ್ರೆ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕೊರೋನಾ ನಿರ್ಬಂಧಗಳ ಹೆಸರಿನಲ್ಲಿ ದೇಶದ ಆರ್ಥಿಕತೆ ಹಾಳು ಮಾಡಿ, ನಿರುದ್ಯೋಗ ಹೆಚ್ಚಿಸುತ್ತಿದ್ದಾರೆ. ಜನರನ್ನು ಸುಮ್ಮನೆ ಹೆದರಿಸುತ್ತಿದ್ದಾರೆ. ಈ ಹಿಂದೆ ಮೇಕೆದಾಟು ಪಾದಯಾತ್ರೆ ಕೈಗೊಂಡಾಗ ನಮ್ಮ ವಿರುದ್ಧ ಕೊರೋನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ಪಾದಯಾತ್ರೆ ನಿಲ್ಲಿಸಿದ್ದರು. ಈಗ ರಾಹುಲ… ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡುತ್ತಿದ್ದು, ಅವರಿಗೆ ಸಿಗುತ್ತಿರುವ ಜನ ಬೆಂಬಲವನ್ನು ಸಹಿಸಲು ಬಿಜೆಪಿ ಅವರಿಗೆ ಸಾಧ್ಯವಾಗುತ್ತಿಲ್ಲ’ ಎಂದರು.
ಡಿಕೆಶಿ ಕುಕ್ಕರ್ ಬಾಂಬ್ ಹೇಳಿಕೆ ಬಗ್ಗೆ ರವಿ ಪ್ರಸ್ತಾಪದಿಂದ ಗದ್ದಲ
‘ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಬಸ್‌ಯಾತ್ರೆ ಹಮ್ಮಿಕೊಂಡಿದೆ. ಈ ಎಲ್ಲ ಕಾರಣಗಳಿಗಾಗಿ ಕೊರೋನಾ ನೆಪದಲ್ಲಿ ಯಾತ್ರೆಗಳನ್ನು ನಿಲ್ಲಿಸುವ ಹುನ್ನಾರ ನಡೆದಿದೆ. ಆದರೆ, ಯಾವುದೇ ಕಾರಣಕ್ಕೂ ಯಾತ್ರೆಯಿಂದ ಹಿಂದೆ ಸರಿಯುವುದಿಲ್ಲ’ ಎಂದರು.
‘ಡಿ. 30ರಂದು ಕೃಷ್ಣಾ ನದಿ ನೀರು ವಿಚಾರವಾಗಿ ವಿಜಯಪುರದಲ್ಲಿ ಪ್ರತಿಭಟನೆ ಇದೆ. ಜ.2ರಂದು ಮಹದಾಯಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಹೋರಾಟ ಮಾಡಲಾಗುವುದು. ಜ.8 ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟಜಾತಿ ಹಾಗೂ ಪಂಗಡದ ಸಮಾವೇಶ ನಡೆಯಲಿದೆ. ನಂತರ ನಾವು ಬೆಳಗಾವಿಯಿಂದ ಬಸ್ ಯಾತ್ರೆ ಮಾಡುತ್ತೇವೆ. ಜನರ ಮುಂದೆ ಬಿಜೆಪಿ ಸರ್ಕಾರ ಮಾಡಿರುವ ಅಕ್ರಮ, ಅನ್ಯಾಯ, ಲೂಟಿಯನ್ನು ಇಡುತ್ತೇವೆ. ಈ ಯಾತ್ರೆ ಪಾಂಚಜನ್ಯ 2.0 ಆಗಲಿದೆ’ ಎಂದು ಹೇಳಿದರು.