ಬೆಂಗಳೂರು: ಕಿದ್ವಾಯಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ವಿ.ಲೋಕೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ವಿ.ಲೋಕೇಶ್ ಅವರು ರೇಡಿಯೇಷನ್ ಅಂಕಾಲಜಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾಗಿದ್ದು, ನಿನ್ನೆ ಸೋಮವಾರ ದಿನಾಂಕ 17-10-2022 ರಂದು ಅವರು ನಿರ್ದೇಶಕ ಹುದ್ದೆಗೆ ವರದಿ ಮಾಡಿಕೊಂಡಿದ್ದಾರೆ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಸುಮಾರು 28 ವರ್ಷಗಳಿಂದ ರೇಡಿಯೇಷನ್ ಅಂಕಾಲಜಿ ವಿಭಾಗದಲ್ಲಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಿಸಿದ ವಿ.ಲೋಕೇಶ್ ಅವರ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಅಮೋಘ ಸಾಧನೆಯನ್ನು ಪರಿಗಣಿಸಿ ಡಾ.ವಿ.ಲೋಕೇಶ್ ಅವರನ್ನು ರಾಜ್ಯ ಸರ್ಕಾರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದೆ.