ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ತಿಪಟೂರು ತಾಲೂಕಿನ ಸುಕ್ಷೇತ್ರ ಕೆರೆಗೋಡಿ-ರಂಗಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ’ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನರ್‌ಜ್ಜೀವನ ನಡೆಸಿದ ಸುಕ್ಷೇತ್ರದ ಕೆರೆಯನ್ನು ಶನಿವಾರ ಶ್ರೀಮಠಕ್ಕೆ ಹಸ್ತಾಂತರ ಮಾಡಿದರು.
ತಿಪಟೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ತಿಪಟೂರು ತಾಲೂಕಿನ ಸುಕ್ಷೇತ್ರ ಕೆರೆಗೋಡಿ-ರಂಗಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ’ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನರ್‌ಜ್ಜೀವನ ನಡೆಸಿದ ಸುಕ್ಷೇತ್ರದ ಕೆರೆಯನ್ನು ಶನಿವಾರ ಶ್ರೀಮಠಕ್ಕೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ಹಾಗೂ ವೀರೇಂದ್ರ ಹೆಗ್ಗಡೆ ಅವರು ಕೆರೆಗೆ ಬಾಗಿನ ಸಮರ್ಪಿಸಿದರು. ನಂತರ ಪೂಜ್ಯರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ರಂಗನಾಥ ಸ್ವಾಮಿ, ಶ್ರೀ ಶಂಕರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಕ್ಷೇತ್ರಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರು ಶ್ರೀಮಠದ ಹಾಗೂ ಭಕ್ತರ ಪರವಾಗಿ ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಲಾಯಿತು. ಜಿಲ್ಲಾ ಹಾಗೂ ತಾಲೂಕು ಯೋಜನಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಮತ್ತಿತರರಿದ್ದರು.
undefined
ಧರ್ಮಸ್ಥಳ ಪ್ಲಾಸ್ಟಿಕ್ ಮುಕ್ತ ಗ್ರಾಮ
ಬೆಳ್ತಂಗಡಿ (ಫೆ.07): ಸುಂದರ, ಪ್ರಶಾಂತ ಪ್ರಾಕೃತಿಕ ಪರಿಸರದಲ್ಲಿ ಕಣ್ಮನ ಸೆಳೆಯುತ್ತಿರುವ ನಾಡಿನ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳಕ್ಕೆ ನಿತ್ಯವೂ ಸಾವಿರಾರು ಮಂದಿ ಭಕ್ತಾದಿಗಳು ಶ್ರದ್ಧಾ-ಭಕ್ತಿಯೊಂದಿಗೆ ಬಂದು ಸೇವೆ ಮಾಡುತ್ತಾರೆ. ಪಶ್ಚಿಮಘಟ್ಟ ಪರ್ವತ ಶ್ರೇಣಿಯು ಅನೇಕ ನದಿಗಳ ಉಗಮಸ್ಥಾನವಾಗಿದೆ. ಪರಿಸರ ನಾಶದಿಂದಾಗಿ ಭೂಕಂಪ, ಬರ, ನೆರೆ, ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತವೆ ಎಂದು ಅರಣ್ಯ ಮತ್ತು ಪರಿರಸ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಅವರು ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮವನ್ನು ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮವಾಗಿ ಘೋಷಣೆ ಮಾಡಿ ಮಾತನಾಡಿದರು.
ಪ್ಲಾಸ್ಟಿಕ್ ಬಳಕೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಮ್ಮ ಆರೋಗ್ಯ ಮತ್ತು ಪರಿಸರಕ್ಕೆ ಅತ್ಯಂತ ಹಾನಿಕಾರಕವಾಗಿದ್ದು ಇಂತಹ ಪವಿತ್ರ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿ ಧರ್ಮಸ್ಥಳ ರಾಜ್ಯಕ್ಕೆ ಸ್ವಚ್ಛ, ಸುಂದರ ಗ್ರಾಮವಾಗಿ ರಾಜ್ಯಕ್ಕೆ ಮಾದರಿಯಾಗಿ ಬೆಳೆಯಲಿ. ತನ್ಮೂಲಕ ಇಡೀ ರಾಜ್ಯವೇ ಪ್ಲಾಸ್ಟಿಕ್ ಬಳಕೆ ಮುಕ್ತ ರಾಜ್ಯವಾಗಬೇಕು. ಪ್ಲಾಸ್ಟಿಕ್ ಮಾರಾಟ ಮತ್ತು ಖರೀದಿ ಮತ್ತು ಬಳಕೆ ಸಂಪೂರ್ಣ ನಿಷೇಧಿಬೇಕು. ಯಾತ್ರಿಕರು ನೇತ್ರಾವತಿ ನದಿಯಲ್ಲಿ ಕೂಡಾ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಬಿಸಾಡುವುದನ್ನು ಅವರು ಖಂಡಿಸಿದರು.
ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
ಧರ್ಮಸ್ಥಳದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಗ್ಗಡೆಯವರು ನೀಡಿದ ಸಹಕಾರವನ್ನು ಅವರು ಕೃತಜ್ಞತೆಯೊಂದಿಗೆ ಸ್ಮರಿಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆಗಾಗಿ ಒಂದು ವಾರದೊಳಗೆ ಎರಡು ಹೊಸ ಯಂತ್ರಗಳನ್ನು ಖರೀದಿಸಿ ತ್ಯಾಜ್ಯ ಸಂಗ್ರಹ ಮಾಡಲಾಗುವುದು. ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ದುರಸ್ತಿಗೆ ಮರುಬಳಕೆ ಮಾಡಲಾಗುವುದು ಎಂದರು.
ವಿದೇಶಗಳಲ್ಲಿ ಎಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡುವಂತೆ ನಮ್ಮಲ್ಲಿಯೂ ಸ್ವಚ್ಛತೆ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕಾಗಿದೆ. ಪ್ರತಿಯೊಬ್ಬರೂ ವಾರದಲ್ಲಿ ಎರಡು ದಿನ ಶನಿವಾರ-ಭಾನುವಾರ ತಮ್ಮ ಮನೆ ಮತ್ತು ಪರಿಸರ ಸ್ವಚ್ಛತೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‍ಶಿವರಾಂ, ಮಂಗಳೂರು ವೃತ್ತ ಸಿ.ಎಫ್.ಒ. ವಿ. ಕರಿಜಳನ್, ಕೆ.ಎಸ್.ಡಿ.ಸಿ. ಕಮಲಾ ಕರಿಕಳನ್, ಡಿ.ಎಫ್.ಒ. ಅಂಥೋನಿ, ಎಸ್. ಮರಿಯಪ್ಪ, ಎ.ಸಿ.ಎಫ್ ಶ್ರೀಧರ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ, ಜಯಪ್ರಕಾಶ್ ಕೆ.ಕೆ. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಸಿಬ್ಬಂದಿ ಕೊರತೆ ನಿವಾರಿಸಲು ಸೂಕ್ತ ಕ್ರಮ: ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಸಚಿವರು, ಬೆಳ್ತಂಗಡಿ ತಾಲ್ಲೂಕಿನಲ್ಲಿ ಡೀಮ್ಡ್ ಅರಣ್ಯ1 ಮತ್ತು ಡೀಮ್ಡ್ ಅರಣ್ಯ 2 ಎಂಬ ವಿಭಾಗಗಳಿವೆ. ಡೀಮ್ಡ್ ಅರಣ್ಯ 1ನ್ನು ಬಿಡಲು ಸಾಧ್ಯವಿಲ್ಲ. ಡೀಮ್ಡ್ ಅರಣ್ಯ 2 ವಿಭಾಗದಲ್ಲಿ ಮೂರು ಲಕ್ಷದ ಮೂವತ್ತು ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದ್ದು ಇದರಲ್ಲಿ ಜನವಸತಿ, ಶಾಲೆ ಇದ್ದಲ್ಲಿ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ಬಳಿಕ, ಗಡಿ ಗುರುತಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಳೆಂಜದಲ್ಲಿ ಅರಣ್ಯ ಪ್ರದೇಶದಲ್ಲಿ ಕಟ್ಟಿದ ಮನೆ ತೆರವು ಪ್ರಕರಣದ ಬಗ್ಗೆ ತನಿಖಾ ವರದಿ ಬಂದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.