ಹುಬ್ಬಳ್ಳಿಯಲ್ಲಿ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಎಲ್.ಆಂಡ್‌ಟಿ ಕಂಪನಿ ಸೃಷ್ಟಿಸಿರುವ ಅವಾಂತರ ಜನಪ್ರತಿಗಳು- ಹಾಗೂ ಪಾಲಿಕೆ ಅಧಿಕಾರಿಗಳು ಹೈರಾಣಾಗಿದ್ದಾರೆ.
ಹುಬ್ಬಳ್ಳಿ (ಮೇ.22): ಒಂದೆಡೆ ಬಿಸಿಲ ಧಗೆ ಜೋರಾಗುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿಗಾಗಿ ಜನರು ನಿತ್ಯ ಪರದಾಡುವಂತಾಗಿದೆ. ಕೆಲ ಬಡಾವಣೆಗಳಲ್ಲಿ ನಾಲ್ಕೈದು ದಿನಕ್ಕೊಮ್ಮೆ ನೀರು ಪೂರೈಸುತ್ತಿರುವ ಜನರು ತೀವ್ರ ಆಕ್ರೋಶಗೊಂಡಿದ್ದಾರೆ. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಎಲ್.ಆಂಡ್‌ಟಿ ಕಂಪನಿ ಸೃಷ್ಟಿಸಿರುವ ಅವಾಂತರ ಜನಪ್ರತಿಗಳು- ಹಾಗೂ ಪಾಲಿಕೆ ಅಧಿಕಾರಿಗಳು ಹೈರಾಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾಲಿಕೆ ಹಾಗು ಎಲ್. ಆಂಡ್ ಟಿ ಕಂಪನಿಯು ಜೊತೆ ಸಭೆ ನಡೆಸಿದ್ರು.
ಜಲಮಂಡಳಿಯಿಂದ ಕುಡಿಯುವ ನೀರು ಪೂರೈಕೆ ಜವಾಬ್ದಾರಿ ಕಸಿದುಕೊಂಡು ಈಗ ಎಲ್‌ಆಂಡ್ ಟಿ ನೀಡಲಾಗಿದೆ. ಆದ್ರೇ ಎಲ್.ಆಂಡ್ ಟಿ ಅವಳಿ ನಗರದ ಬಡಾವಣೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡುತ್ತಿಲ್ಲ, ಕುಡಿಯುವ ನೀರಿನ ಸರಬರಾಜು ಮಾಡುವಲ್ಲಿ ಕಂಪನಿ ಮಾಡುತ್ತಿರುವ ವಿಳಂಬದ ಕಾರಣದಿಂದಾಗಿ ಜನತೆ ತೀವ್ರ ಸಮಸ್ಯೆ ಎದುರಿಸುವಂತಾಗಿದೆ.
undefined
ಮಂಗಳೂರಲ್ಲಿ ಬಿಯರ್ ಉತ್ಪಾದನೆಗೆ ತಟ್ಟಿದ ನೀರಿನ ಕೊರತೆ!
ಇದೇ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಕುಡಿಯುವ ನೀರಿನ ಗುತ್ತಿಗೆದಾರರಾದ ಎಲ್& ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
84 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ: ಮುಂಗಾರು ಮಳೆ ಮೇಲೆ ಭಾರಿ ನಿರೀಕ್ಷೆ
ಈ ಸಂದರ್ಭದಲ್ಲಿ ಅವಳಿನಗರದಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದೇ ನಿತ್ಯ ನೂರಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಕೇಂದ್ರ ಸಚಿವರು, ಎಲ್& ಟಿ ನ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಬರುವ ಒಂದು ವಾರದೊಳಗೆ ನೀರಿನ ಸಮರ್ಪಕ ಪೂರೈಕೆ ಹಾಗೂ ನಿರ್ವಹಣೆ ಆಗದೇ ಇದ್ದಲ್ಲಿ, ಕಠಿಣವಾದ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ರು. 3 ದಿನಗಳಲ್ಲಿ ಹಳೆಯ ನೌಕರರನ್ನು ಮರುನೇಮಕಾತಿ ಮಾಡಿಕೊಳ್ಳಬೇಕು, ಪ್ರತಿಯೊಂದು ಬಡಾವಣೆಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಿ ವರದಿಒಪ್ಪಿಸುವಂತೆ ಸೂಚಿಸಿದ್ತು ಇಲದಿದ್ದಲ್ಲಿ, ಕಂಪನಿಯ ವಿರುದ್ದ ಕಠಿಣ ಕ್ರಮ ಕೈಗೊಂಡು, ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅವಳಿನಗರದ ಗುತ್ತಿಗೆಯನ್ನು ತೆಗೆದು ಹಾಕುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ನೂತನ ಶಾಸಕ ಮಹೇಶ್ ಟೆಂಗಿನಕಾಯಿ, ಮೇಯರ್ ಈರೇಶ್ ಅಂಚಟಗೇರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.