ಎಣ್ಣೆ ನೆಶೆಯಲ್ಲಿ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟುವ ಯತ್ನ ಮಾಡಿದ್ದಾನೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಸಾವು
ಬೆಂಗಳೂರು(ಜ.01): ಹೊಸ ವರ್ಷದ ಪಾರ್ಟಿ ವೇಳೆ ಕುಡಿದು ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನ ಒರಿಸ್ಸಾ ಮೂಲದ ಬಾಪಿ (30) ಅಂತ ಗುರುತಿಸಲಾಗಿದೆ. ಹೊಸ ವರ್ಷದ ಪಾರ್ಟಿ ವೇಳೆ ಕುಡಿದು ಮೂರನೇ ಪ್ಲೋರ್‌ನಿಂದ ಕೆಳಗೆ ಬಿದ್ದು ಬಾಪಿ ಸಾವನ್ನಪ್ಪಿದ್ದಾನೆ. ಎಣ್ಣೆ ನಶೆಯಲ್ಲಿ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟುವ ಯತ್ನ ಮಾಡಿದ್ದಾನೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಅಂತ ತಿಳಿದು ಬಂದಿದೆ. ಮೃತ ಬಾಪಿ ನಗರದ ಕಾಟನ್ ಬಾಕ್ಸ್ ತಯಾರಿ ಮಾಡುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸ ವರ್ಷದಂದು ಜವರಾಯನ ಅಟ್ಟಹಾಸಕ್ಕೆ ಇಬ್ಬರು ಯುವಕರು ಬಲಿ..!