ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜಿಟಿಜಿಟಿ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಜಿಲ್ಲೆಯಾದ್ಯಂತ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಆದೇಶ ಹೊರಡಿಸಿದ್ದಾರೆ.
ರಾಯಚೂರು (ಜು.27) : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮಕೈಗೊಂಡಿರುವ ಜಿಲ್ಲಾಡಳಿತ ಜು.27ರಂದು ಶಾಲೆಗಳಿಗೆ ರಜೆ ಘೋಷಿಸಿದೆ.
ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಮಳೆಯಲ್ಲೇ ಮಕ್ಕಳು ಶಾಲೆಗೆ ಹೋಗುವಂತಾಗಿತ್ತು. ಅದರಲ್ಲೂ ಗ್ರಾಮೀಣ ಭಾಗದಿಂದ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಮಳೆಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ರಜೆ ಘೋಷಿಸಿದ್ದು, ಹವಾಮಾನ ವರದಿ ಆಧರಿಸಿ ರಜೆ ಮುಂದುವರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ.
undefined
ರಾಯಚೂರು: ಕೃಷ್ಣ ನದಿ ದಡದಲ್ಲಿ ಮೊಸಳೆಗಳ ಹಿಂಡು, ಆತಂಕದಲ್ಲಿ ಗ್ರಾಮಸ್ಥರು!
ತುಂಗಭದ್ರಾ ಡ್ಯಾಂನಿಂದ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯ
ಸಿಂಧನೂರು: ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಕೂಡಲೆ ಕಾಲುವೆಗಳಿಗೆ ನೀರು ಹರಿಸಿ ರೈತರು ಭತ್ತದ ಬೆಳೆ ಬೆಳೆಯಲು ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಒತ್ತಾಯಿಸಿದರು.
ಗಂಗಾವತಿ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ; ಆತಂಕದಲ್ಲಿ ಜನರು!
ನಗರದ ಸುಕಾಲಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವುದರಿಂದ ಜು.25ರ ಬೆಳಗಿನವರೆಗೆ 31 ಟಿಎಂಸಿ ನೀರು ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿದೆ. 75 ಸಾವಿರ ಕ್ಯುಸೆಕ್ ನೀರು ಒಳಹರಿವು ಇದೆ. ಬೆಳಗಾಗೊದ್ರೊಳಗೆ 40 ಟಿಎಂಸಿ ನೀರು ಸಂಗ್ರಹವಾಗಲಿದೆ. ಆದ್ದರಿಂದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಿ, ಕಾಲುವೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಬೇಕು. ಈ ಕುರಿತು ಮೂರು ಜಿಲ್ಲೆಗಳ ಶಾಸಕರು ಸರ್ಕಾರದ ಗಮನ ಸೆಳೆಯಬೇಕು ಎಂದು ಆಗ್ರಹಿಸಿದರು.