ನಸುಕಿನ 1.47ರ ಸುಮಾರಿಗೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.
ವಿಜಯಪುರ(ಫೆ.04): ವಿಜಯಪುರ ಜಿಲ್ಲೆಯ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಶುಕ್ರವಾರ ರಾತ್ರಿ ಎರಡು ಬಾರಿ ಲಘು ಭೂಕಂಪನವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ವಿವಿಧೆಡೆ ಭೂಕಂಪನ ಅನುಭವವಾಗಿದೆ. ಇದೀಗ ಮತ್ತೆ ಶುಕ್ರವಾರ ರಾತ್ರಿ ತಿಕೋಟಾ ತಾಲೂಕಿನ ಮಹಾರಾಷ್ಟ್ರದ ಗಡಿ ಭಾಗದ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ.
undefined
Vijayapura: ಚುನಾವಣೆಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್ ಅಧಿಕಾರಿ!
ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರ ಹಟ್ಟಿ, ಸಿದ್ದಾಪುರ.ಕೆ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ರಾತ್ರಿ 10.05 ಹಾಗೂ 1.47ರ ಸುಮಾರಿಗೆ ಭೂಮಿ ಕಂಪಿಸಿದೆ. ನಸುಕಿನ 1.47ರ ಸುಮಾರಿಗೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತಲು ಭೂಮಿ ಕಂಪಿಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿ ಗ್ರಾಮದಲ್ಲಿ ಭೂಕಂಪನ ಕೇಂದ್ರ ದಾಖಲಾಗಿದೆ.