ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು, ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 55 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಟಿ ನರಸೀಪುರ(ನ.14): ಅಭಿವೃದ್ಧಿಗೆ ಹಣದ ಕೊರತೆ ಇಲ್ಲ. ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ರು. 470.84 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು, ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 55 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದರು.
undefined
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಣೆಯನ್ನು ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ನಾವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಕರ್ನಾಟಕದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಅದರಲ್ಲಿ 1 ಲಕ್ಷದ 21 ಸಾವಿರ ಕೋಟಿಯನ್ನು ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 58 ಸಾವಿರ ಕೋಟಿಗಳನ್ನು ಖರ್ಚು ಮಾಡಲಾಗುತ್ತಿದೆ. ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ನಾನು 1984 ರಲ್ಲಿ ಮೊದಲ ಬಾರಿ ಮಂತ್ರಿಯಾಗಿ ಆಯ್ಕೆಯಾದೆ. ಮಂತ್ರಿಯಾಗಿ 40 ವರ್ಷಗಳಾಗಿವೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು 2013 ರಲ್ಲಿ ನಾನು 165 ಭರವಸೆಗಳನ್ನು ನೀಡಿದ್ದೆವು ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ 325 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ.1.22 ಕೋಟಿ ಕುಟುಂಬದ ಮಹಿಳೆಯರು ಮಾಸಿಕ 2 ಸಾವಿರ ಗೃಹ ಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿದ್ದಾರೆ. 1.61 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಬಳಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಉಚಿತವಾಗಿ 5 ಕೆ ಜಿ ಅಕ್ಕಿ ಹಾಗೂ 5 ಕೆ ಜಿ ಗೆ ಹಣ ನೀಡಲಾಗುತ್ತಿದೆ. ಯುವ ನಿಧಿ ಯೋಜನೆಯಡಿ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ ಹಣ ನೀಡಲಾಗುತ್ತಿದೆ. ಒಟ್ಟಾರೆ ಒಂದು ಕುಟುಂಬಕ್ಕೆ ವಾರ್ಷಿಕ 50 ರಿಂದ 60 ಸಾವಿರ ಸೌಲಭ್ಯವನ್ನು ನೀಡಲಾಗುತ್ತಿದೆ ಮಾಹಿತಿ ನೀಡಿದರು.
ಸಿದ್ದರಾಮಯ್ಯರೊಂದಿಗೆ ಕೆಲಸ ಮಾಡುವುದು ಸೌಭಾಗ್ಯ: ಡಾ.ಎಚ್‌ಸಿಎಂ
1985 ರಿಂದ ನನ್ನ ರಾಜಕೀಯ ಜೀವನ ಯಾತ್ರೆ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭವಾಯಿತು. ಸಿದ್ದರಾಮಯ್ಯರಂತಹ ಮಹಾ ನಾಯಕರ ಜೊತೆ ಕೆಲಸ ಮಾಡುವ ಸೌಭಾಗ್ಯವನ್ನು ಕ್ಷೇತ್ರದ ಜನ ನನಗೆ ಕಲ್ಪಿಸಿ ಕೊಟ್ಟಿದ್ದೀರಿ. ಇದಕ್ಕೆ ನಾನು ಋಣಿಯಾಗಿದ್ದು, ಇದನ್ನು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಕ್ಷೇತ್ರದೂ ಶಾಸಕರೂ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಕಳೆದ 40 ವರ್ಷಗಳಿಂದ ಟಿ. ನರಸೀಪುರ ಕ್ಷೇತ್ರಕ್ಕೆ ಸಾವಿರಾರು ಕೋಟಿಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇವೆ. ವಸತಿ ಯೋಜನೆಯಡಿ 13 ಸಾವಿರ ಮನೆಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ ಅವರು ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ. ರಾಜ್ಯದಲ್ಲಿ 15 ಬಜೆಟ್ ನ್ನು ಮಂಡಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿದ್ದಾರೆ ಎಂದು ತಿಳಿಸಿದರು. ನನ್ನ ಹಾಗೂ ಸಿದ್ದರಾಮಯ್ಯ ಅವರ ನಡುವೆ ಕೆಲವರು ವಿರಸ ಮೂಡಿಸಲು ಯತ್ನಿಸಿದರು. ಆದರೆ ಅದು ಸಫಲವಾಗಲಿಲ್ಲ ಎಂದು ಅವರು ಹೇಳಿದರು.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಡಿ ವಿಚಾರಣೆ ಸನ್ನಿಹಿತ?
ಹಲವು ಅಭಿವೃದ್ಧಿ : ಸಚಿವ ಕೆ.ವೆಂಕಟೇಶ್
ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆಯ ಸಚಿವ ಕೆ. ವೆಂಕಟೇಶ್ ಮಾತನಾಡಿ, ನಮ್ಮ ಸರ್ಕಾರ ಬಂದು ಒಂದು ವರ್ಷ 5 ತಿಂಗಳು ಆಗಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ಇದಕ್ಕೆ ಸಾಕ್ಷಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು. ಸಿದ್ದರಾಮಯ್ಯ ಅವರು ಹಿಂದುಳಿದ, ಬಡವರ, ರೈತರ ಪರ ಕೆಲಸ ಮಾಡುತ್ತಿರುವ ನಾಯಕರು. ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ. ಯತಿಂದ್ರ ಸಿದ್ದರಾಮಯ್ಯ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಡಿ. ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ದಕ್ಷಿಣ ವಲಯದ ಡಿಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಇದ್ದರು.