ಬಡವ, ಶ್ರೀಮಂತರ ನಡುವಿನ ಆರ್ಥಿಕ ಅಸಮತೋಲನ ವ್ಯಾಪಕವಾಗಿ ಹೆಚ್ಚಾಗಿದೆ : ಶಿವಕುಮಾರ್

Published : Apr 14, 2024, 02:22 PM IST
 ಬಡವ, ಶ್ರೀಮಂತರ ನಡುವಿನ ಆರ್ಥಿಕ ಅಸಮತೋಲನ ವ್ಯಾಪಕವಾಗಿ ಹೆಚ್ಚಾಗಿದೆ : ಶಿವಕುಮಾರ್

ಸಾರಾಂಶ

ಕಳೆದೊಂದು ದಶಕದಿಂದಲೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಬಡವ ಮತ್ತು ಶ್ರೀಮಂತರ ನಡುವಿನ ಆರ್ಥಿಕ ಅಸಮತೋಲನ ವ್ಯಾಪಕವಾಗಿ ಹೆಚ್ಚಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಹೇಳಿದರು.

ಟಿ. ನರಸೀಪುರ :  ಕಳೆದೊಂದು ದಶಕದಿಂದಲೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಬಡವ ಮತ್ತು ಶ್ರೀಮಂತರ ನಡುವಿನ ಆರ್ಥಿಕ ಅಸಮತೋಲನ ವ್ಯಾಪಕವಾಗಿ ಹೆಚ್ಚಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಹೇಳಿದರು.

ಸಂವಿಧಾನಕ್ಕೆ ಕೈಮುಗಿದು ಪ್ರಜಾತಂತ್ರ ವ್ಯವಸ್ಥೆಯನ್ನೇ ನಿರ್ಮೂಲನೆ ಮಾಡುತ್ತಿರುವುದನ್ನು ಕಣ್ಣಾರ ನೋಡುತ್ತಿದ್ದೇವೆ. ಇನ್ನಾದರೂ ಚುನಾವಣೆಯಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ ತಪ್ಪಿದ್ದಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ಅವರು ಆತಂಕ ವ್ಯಕ್ತಪಡಿಸಿದರು.

ಸರ್ವರಿಗೂ ಸಮಾನತೆಯನ್ನ ನೀಡುವ ಸಂವಿಧಾನ ಅಪಾಯದ ಸ್ಥಿತಿಯಲ್ಲಿದ್ದರೆ, ಪ್ರಜಾಪ್ರಭುತ್ವ ವ್ಯವಸ್ಥೆಯೇ ದುರ್ಬಲಗೊಳ್ಳುತ್ತಿದೆ. ಹಾಗಾಗಿ ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೋಗೆಯುವ ಜವಾಬ್ದಾರಿ ಜಾಗೃತರಾಗಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಅವರು ಹೇಳಿದರು. ದಸಂಸ ತಾಲೂಕು ಸಂಚಾಲಕ ಸೋಮಶೇಖರ್, ಮುಖಂಡರಾದ ನಾಗರಾಜಮೂರ್ತಿ ಹಾಗೂ ಬಸವರಾಜು ಇದ್ದರು.

ಸುಳ್ಳು ಆಶ್ವಾಸನೆ ನೀಡುವ ಸರ್ಕಾರ ಕಿತ್ತೆಸೆಯಬೇಕು

 

ಕಲಘಟಗಿ (ಏ.12): ಜನರಿಗೆ ಸುಳ್ಳು ಆಶ್ವಾಸನೆ ನೀಡುವ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಬಾರಿ ಜನರು ಕಿತ್ತೆಸೆಯಬೇಕು ಎಂದು ಸಚಿವ ಸಂತೋಷ್ ಲಾಡ್ ಕರೆ ನೀಡಿದರು. ಪಟ್ಟಣದಲ್ಲಿ ಹಮ್ಮಿಕೊಂಡ ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿ ವಿನೋದ ಅಸೂಟಿ ಅವರ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು. ಪ್ರಚಾರಕ್ಕೆ ಹೋದಲ್ಲಿ ಪ್ರಹ್ಲಾದ ಜೋಶಿ ಸಾಹೆಬ್ರು ನಾನು ಮೋದಿ ಹಾಗೂ ಅವರನ್ನು ಬೈಯುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನು ಕೂಡಾ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ ಎಂದು ಹೇಳಿದರು.

2014ರ ಮೊದಲು ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಸ್ವೀಸ್ ಬ್ಯಾಂಕ್‌ನಿಂದ ಹಣ ತಂದು ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ, ಪ್ರತಿ ವರ್ಷ ಯುವಕರಿಗೆ 2 ಕೋಟಿ ಉದ್ಯೋಗ ನೀಡುತ್ತೇನೆ. ರೈತರ ಸಾಲ ಮನ್ನಾ ಹಾಗೂ ರೈತರ ಆದಾಯ ದ್ವಿಗುಣಗೊಳ್ಳಿಸುತ್ತೇನೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈ ವರೆಗೂ ಈಡೇರಿಸಿಲ್ಲ. ಅಧಿಕಾರಕ್ಕೆ ಬಂದ ನಂತರ ಪ್ರತಿ ವಸ್ತುಗಳ ಬೆಲೆ ಏರಿಕೆಯಾಗಿ ಬಡವರು, ಕೂಲಿಕಾರ್ಮಿಕರು ಬದುಕುವುದು ಕಷ್ಟವಾಗಿದೆ. 2016ರಲ್ಲಿ ನರೇಂದ್ರ ಮೋದಿ ಅವರು ಕಪ್ಪು ಹಣ ವೈಟ್ ಮಾಡುತ್ತೇನೆ ಎಂದು ರಾತ್ರೋರಾತ್ರಿ ನೋಟು ಬ್ಯಾನ್ ಮಾಡಿದಾಗ ಬಡವರು, ರೈತರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತು ನೋಟು ಬದಲಾವಣೆ ಮಾಡುವಾಗ ಎಷ್ಟು ಜನರು ಪ್ರಾಣ ಕಳೆದುಕೊಂಡರು. 

ಆದರೆ, ಶ್ರೀಮಂತರು ಯಾರು ಕೂಡಾ ಬ್ಯಾಂಕ್ ಮುಂದೆ ನಿಂತು ಪ್ರಾಣ ಕಳೆದುಕೊಳ್ಳಲಿಲ್ಲ. ಈ ಕುರಿತು ಪ್ರಶ್ನಿಸಿದರೆ ನಾನು ಬೈಯುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದ ಸಾಲ ₹ 55 ಲಕ್ಷ ಕೋಟಿ ಸಾಲವಿತ್ತು. ಇದೀಗ ಅದು ₹ 183 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದ ಅವರು, ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ ಬೆಂಬಲಿಸಿ ಎಂದು ಮತದಾರರಿಗೆ ಕರೆ ನೀಡಿದರು. ಅಭ್ಯರ್ಥಿ ವಿನೋದ ಅಸೂಟಿ ಮಾತನಾಡಿ, ಬಿಜೆಪಿ ಚುನಾವಣೆ ಬಂದಾಗ ಜಾತಿ-ಧರ್ಮದ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸಿ ಒಡೆದು ಅಳುವ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

PREV
Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?