ವಿಶ್ವದಾದ್ಯಂತ ಕೊರೋನಾ ಭೀತಿ ಎದುರಾಗಿದ್ದು ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲಾ ಪ್ರೀ ಸ್ಕೂಲ್‌ಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು [ಮಾ.09]: ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರದಿಂದ ಬೆಂಗಳೂರಿನ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ನರ್ಸರಿ, ಎಲ್ಕೆಜಿ, ಯುಕೆಜಿ (ಪೂರ್ವ ಪ್ರಾಥಮಿಕ) ತರಗತಿ ಮಕ್ಕಳಿಗೆ ಮುಂದಿನ ಆದೇಶದವರೆಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಕೊರೋನಾ ಎಫೆಕ್ಟ್: ಮಾರ್ಚ್ 31ರ ವರೆಗೆ ಶಾಲೆಗಳಿಗೆ ರಜಾ...
undefined
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್, ಆರೋಗ್ಯ ಇಲಾಖೆ ಆಯುಕ್ತರ ಸಲಹೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಸೋಮವಾರದಿಂದ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಮಾದರಿಯ ಶಾಲೆಗಳು ಮುಂದಿನ ಆದೇಶದವರೆಗೆ ತಮ್ಮ ಶಾಲೆಯ ನರ್ಸರಿ, ಎಲ್ ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ರಜೆ ನೀಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.