ಶಿವಮೊಗ್ಗದಲ್ಲಿ ಶಾಲಾ ಗೋಡೆ ಕುಸಿತ; ಶಿಕ್ಷಣ ಸಚಿವ ಮಧು ಬಂಗಾರಪ್ಪ ತವರಲ್ಲೇ ವಿದ್ಯಾರ್ಥಿಗಳ ಪ್ರಾಣಕ್ಕೆ ಕಂಟಕ

By Sathish Kumar KH  |  First Published Jul 23, 2024, 6:15 PM IST

ಶಿಕ್ಷಣ ಸಚಿವ  ಮಧು ಬಂಗಾರಪ್ಪ ಅವರ ತವರು ಕ್ಷೇತ್ರದಲ್ಲಿಯೇ ಶಾಲಾ ಗೋಡೆ ಕುಸಿತವಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾರೆ.


ಶಿವಮೊಗ್ಗ (ಜು.23): ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆ ಕುಸಿತವಾಗಿದೆ. ತರಗತಿ ನಡೆಯುವ ವೇಳೆಯೇ ಶಾಲಾ ಗೋಡೆ ಕುಸಿತವಾಗಿದ್ದು, ಮಕ್ಕಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯಾದ್ಯಂತ ಮಲೆನಾಡು, ಕರಾವಳಿ ಜಿಲ್ಲೆಗಳು ಸೇರಿದಂತೆ ಭಾರಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ನಿನ್ನೆಯಿಂದ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಂದಿಂತೆ ತರಗತಿಗಳು ಪುನಾರಂಭಗೊಂಡಿವೆ. ಆದರೆ, ನಿರಂತರ ಮಳೆಯಿಂದ ಬೀಳುವ ಸ್ಥಿತಿಯಲ್ಲಿದ್ದ ಶಾಲಾ ಕೋಣೆಗಳಲ್ಲಿಯೇ ಮಕ್ಕಳು ಪಾಠ ಕೇಳುವಂತಾಗಿದೆ. ಶಾಲಾ ಕೋಣೆಗಳನ್ನು ದುರಸ್ತಿ ಮಾಡುವಂತೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಯಾರೊಬ್ಬರೂ ತಲೆ ಕೆಡಿಸಿಕೊಳ್ಳದೇ ಮಕ್ಕಳ ಜೀವದೊಂದಿದೆ ಆಟವಾಡುತ್ತಿದ್ದಾರೆ.

Tap to resize

Latest Videos

undefined

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜಾಮೀನು ಪಡೆದು ಜೈಲಿನಿಂದ ಹೊರಬಂದ ಸೂರಜ್ ರೇವಣ್ಣ

ಈಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ತವರು ಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಶಾಲಾ ಗೋಡೆ ಕುಸಿತವಾಗಿದೆ. ವಿದ್ಯಾರ್ಥಿಗಳು ತರಗತಿ ಕೋಣೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿಗಳು ಕುಳಿತುಕೊಂಡಿದ್ದ ಹಿಂಬದಿ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೊರಬ ತಾಲೂಕಿನ ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಕುಸಿತವಾಗಿದೆ. ಈ ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ತರಗತಿ ಮುಗಿಸಿ ವಿದ್ಯಾರ್ಥಿಗಳಿಗೆ ವಿಶ್ರಾಂತಿ ನೀಡಲಾಗಿತ್ತು.

ಈ ತರಗತಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಆದರೆ, ವಿಶ್ರಾಂತಿ ಸಮಯವಾಗಿದ್ದರಿಂದ ಕೆಲವು ವಿದ್ಯಾರ್ಥಿಗಳು ಮಾತ್ರ ತರಗತಿ ಕೋಣೆಯಲ್ಲಿದ್ದು, ಉಳಿದ ವಿದ್ಯಾರ್ಥಿಗಳು ತರಗತಿ ಕೋಣೆಯ ಹೊರಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ವಿದ್ಯಾರ್ಥಿಗಳ ಹಿಂಬದಿಯ ಗೋಡೆ ಕುಸಿತವಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ನೀಡಿದ ವಿಶ್ರಾಂತಿ ಸಮಯದಲ್ಲಿ ಕೊಠಡಿ ಗೋಡೆ ಕುಸಿತ ಆಗಿದ್ದರಿಂದ ವಿದ್ಯಾರ್ಥಿಗಳಿಗೆ ಅನಾಹುತವಾಗಿಲ್ಲ. ಆದರೆ, ಪೋಷಕರು ಮಾತ್ರ ಸರ್ಕಾರಿ ಶಾಲೆಗಳಲ್ಲಿ ಭದ್ರತೆ ಇಲ್ಲದೇ ಜನರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ನಾವು ಬಡವರು ಅನಿವಾರ್ಯವಾಗಿ ಸರ್ಕಾರಿ ಶಾಲೆಗೆ ಕಳಿಸಿದರೆ, ಶಿಕ್ಷಣ ಇಲಾಖೆ ಮಕ್ಕಳ ಜೀವಕ್ಕೆ ಕಂಟಕ ತರುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಕ್ಕಳ ರಕ್ಷಣೆ ಮಾಡಿದ 112 ಸಿಬ್ಬಂದಿ

ಇನ್ನು ಈ ಶಾಲೆಯು ಶಿಥಿಲಾವ್ಯಸ್ಥೆಯಲ್ಲಿದ್ದು ದುರಸ್ತಿ ಮಾಡಿಸುವಂತೆ ಅಥವಾ ಶಾಲಾ ಕೊಠಡಿ ತೆರವುಗೊಳಿಸಿ ಹೊಸ ಕೋಣೆ ನಿರ್ಮಿಸಿಕೊಡುವಂತೆ ಶಿಕ್ಷಣ ಇಲಾಖೆಗೂ ಮನವಿ ಮಾಡಲಾಗಿತ್ತು. ಆದರೆ, ಸ್ಥಳೀಯ  ಕ್ಷೇತ್ರ ಶಿಕ್ಷಣಾಧಿಕಾರಿ, ಡಿಡಿಪಿಒ ಸೇರಿ ಎಲ್ಲರೂ ದೂರು ಸ್ವೀಕಾರ ಮಾಡಿದರೇ ಹೊರತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ಗಮನಕ್ಕೆ ತಂದು ವಿಶೇಷ ಅನುದಾನದಲ್ಲಿ ಶಾಲಾ ಕೊಠಡಿ ದುರಸ್ತಿ ಮಾಡಿಸಲು ಪ್ರಯತ್ನ ಮಾಡಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಪೋಷಕರ ಆಕ್ರೋಶ ಹೊರಹಾಕಿದ್ದಾರೆ.

click me!