ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಕೌಶಿಕ್ ಎಂಬ ವಿದ್ಯಾರ್ಥಿ| ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಕೌಶಿಕ್| ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಕೌಶಿಕ್ನಿಗೆ ಹೃದಯಪೂರ್ವ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಸುರೇಶ್ ಕುಮಾರ್|
ದಕ್ಷಿಣ ಕನ್ನಡ(ಜೂ.26): ಮಹಾಮಾರಿ ಕೊರೋನಾ ಭೀತಿಯ ಮಧ್ಯೆ ರಾಜ್ಯದಲ್ಲಿ ನಿನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಇಂದು ಕೂಡ ಪರೀಕ್ಷೆ ನಡೆಯುತ್ತಿದೆ. ಏತನ್ಮಧ್ಯೆ ವಿಶೇಷ ಚೇತನ ವಿದ್ಯಾರ್ಥಿಯೋರ್ವ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನ ಸೆಳೆದಿದ್ದಾರೆ.
ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ. pic.twitter.com/oLV8Ef0RN8
— S.Suresh Kumar, Minister - Govt of Karnataka (@nimmasuresh)ಕೇರಳದ 367 ವಿದ್ಯಾರ್ಥಿಗಳು ಮಂಗಳೂರಲ್ಲಿ SSLC ಪರೀಕ್ಷೆಗೆ ಹಾಜರ್..! ಇಲ್ಲಿವೆ ಫೋಟೋಸ್
ಕೊರೋನಾ ಆತಂಕದ ಮಧ್ಯೆ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವುದಕ್ಕೆ ವಿರೋಧ ಕೂಡ ವ್ಯಕ್ತವಾಗಿತ್ತು. ಆದರೆ ಸುರೇಶ್ ಕುಮಾರ್ ಅವರು ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳವುದುರ ಮೂಲಕ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕೂಡ ವೈರಸ್ ಭಯವಿಲ್ಲದೆ ನಿರಾತಂಕವಾಗಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.