
ದಾವಣಗೆರೆ[ನ.20] ಈದ್ ಮಿಲಾದ್ ಹಬ್ಬದ ಪ್ರಯುಕ್ತ ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಮಧ್ಯ ಪ್ರವೇಶ ಮಾಡಿದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.
ದಾವಣಗೆರೆ ನಗರದ ಕೊಂಡಜ್ಜಿ ರಸ್ತೆಯ ರಿಂಗ್ ರೋಡ್ ಬಳಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಧ್ವಜ ಕಟ್ಟುವ ವಿಚಾರ ವೇಳೆ ಎರಡು ಕೋಮುಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಕಂಬವೊಂದಕ್ಕೆ ಹಬ್ಬದ ಧ್ವಜ ಕಟ್ಟಲು ಮುಂದಾಗಿದ್ದ ಒಂದು ಸಮುದಾಯದ ಯುವಕರು ಮುಂದಾಗಿದ್ದರು. ಆದರೆ ಅದೆ ಜಾಗದಲ್ಲಿ ಮತ್ತೊಂದು ಸಮುದಾಯಕ್ಕೆ ಸೇರಿದ ಧ್ವಜ ಇತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಬಿಗಡಾಯಿಸುವ ಹಂತಕ್ಕೆ ತಲುಪಿತ್ತು.