ಚುನಾವಣಾ ಅಕ್ರಮ: ಬೆಳಗಾವಿಯಲ್ಲಿ ಮೊದಲ ಕೇಸು ದಾಖಲು

By Kannadaprabha News  |  First Published Mar 18, 2023, 5:58 AM IST

ಸಮಾವೇಶದ ಹೆಸರಿನಲ್ಲಿ ಮತದಾರರಿಗೆ ಬಾಡೂಟ ಹಾಕಿಸಿರುವ ಆರೋಪದ ಮೆರೆಗೆ ಇಬ್ಬರ ಮೇಲೆ ಚುನಾವಣಾಧಿಕಾರಿಗಳು ನೀಡಿರುವ ದೂರಿನನ್ವಯ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳಗಾವಿ: ಸಮಾವೇಶದ ಹೆಸರಿನಲ್ಲಿ ಮತದಾರರಿಗೆ ಬಾಡೂಟ ಹಾಕಿಸಿರುವ ಆರೋಪದ ಮೆರೆಗೆ ಇಬ್ಬರ ಮೇಲೆ ಚುನಾವಣಾಧಿಕಾರಿಗಳು ನೀಡಿರುವ ದೂರಿನನ್ವಯ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಚುನಾವಣಾ ಅಕ್ರಮ ಎಸಗಿದ ಆರೋಪದ ಮೇರೆಗೆ ಸಂತಿಬಸ್ತವಾಡ ಗ್ರಾಮದ ನಾಗೇಂದ್ರ ಬಾಳಪ್ಪ ನಾಯಿಕ, ನಾಗೇಶ ಮನ್ನೋಳಕರ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2023ರಲ್ಲಿ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದಿಂದ ಎಲ್ಲ ರಾಜಕೀಯ ಪಕ್ಷಗಳ ಸಭೆಯನ್ನು ಜರುಗಿಸಿ, ರಾಜಕೀಯ ಪಕ್ಷಗಳು, ಸಾರ್ವಜನಿಕರು ಚುಣಾವಣೆಗೆ ಸ್ಪರ್ಧಿಸಲಿರುವ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಇತರರು ಪಾಲಿಸಬೇಕಾದ ಚುನಾವಣಾ ನೀತಿ ಸಂಹಿತೆಗಳ ಕುರಿತು ಈಗಾಗಲೇ ತಿಳಿಸಲಾಗಿದೆ.

Tap to resize

Latest Videos

ಆದರೂ ಮಾ.15 ರಂದು ರಾತ್ರಿ ಸಂತಿ ಬಸ್ತವಾಡ ಗ್ರಾಮದ ಶಾಲಾ ಮೈದಾನದಲ್ಲಿ ಎಸ್ಸಿ, ಎಸ್ಟಿಸಮಾವೇಶದ ಹೆಸರಿನಲ್ಲಿ, ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ, ಸುಮಾರು 3000 ಜನರನ್ನು ಸೇರಿಸಿದ್ದಾರೆ ಎಂಬ ದೂರು ಸ್ವೀಕೃತವಾಗಿತ್ತು. ಇದರ ಮೇರೆಗೆ ಚುನಾವಣಾ ಫ್ಲೈಯಿಂಗ್‌ ಸ್ಕಾಡ್‌ ತಂಡವು ದಾಳಿ ಮಾಡಿದ್ದು, ಬಾಡೂಟ ವ್ಯವಸ್ಥೆಯನ್ನು ಮಾಡಿರುವುದು ಕಂಡುಬಂದಿದೆ. ಹೀಗಾಗಿ ಅಡುಗೆಗೆ ಬಳಸಲಾದ ಪಾತ್ರೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಚುಣಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಿನ್ನಮತ ಸ್ಫೋಟ

ಚಿಕ್ಕಮಗಳೂರು (ಮಾ.17): ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನಡೆಯುತ್ತಿರುವ ವಿಜಯಸಂಕಲ್ಪ ಯಾತ್ರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಯೋಜನೆ ಮಾಡಲಾಗಿತ್ತು. ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಜಿ ಸಿಎಂ ಯಡಿಯ್ಯೂರಪ್ಪ ನೇತೃತ್ವದಲ್ಲಿ ಚಾಲನೆ ನೀಡಿದ ಬಳಿಕ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ನಿಗದಿಯಾಗಿತ್ತು.ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ನಿಗದಿಯಾಗಿದ್ದ ವಿಜಯಸಂಕಲ್ಪ ಯಾತ್ರೆ ಬಿ.ಜೆ.ಪಿ. ಭಿನ್ನಮತ ಸ್ಪೋಟಕ್ಕೆ ವೇದಿಕೆಯಾಗಿ ಪರಿವರ್ತನೆಯಾಯಿತು. ವಿಜಯಸಂಕಲ್ಪ ಯಾತ್ರೆಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಾರ್ಯಕರ್ತರ ನಡುವಿನ ಗೊಂದಲದಲ್ಲಿ ಸಿಲುಕಿ ತಮ್ಮ ಕಾರಿನಿಂದಲೇ ಇಳಿಯದೇ ವಾಪಾಸ್ಸು ತೆರಳಿದ ನಾಟಕೀಯ ಬೆಳೆವಣಿಗೆಗೆ ಕಾರಣವಾಯಿತು.

ಪರ ಮತ್ತು ವಿರುದ್ಧ ಬಣಗಳು ಶಕ್ತಿ ಪ್ರದರ್ಶನ: ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಯವರ ಪರ ಮತ್ತು ವಿರುದ್ಧ ಬಣಗಳು ಪಟ್ಟಣದಲ್ಲಿ ತಮ್ಮ ಶಕ್ತಿಪ್ರದರ್ಶನ ಮುಂದಾದರು. ಇದರಿಂದಾಗಿ ಪಟ್ಟಣದಲ್ಲಿ ಬೆಳಗ್ಗೆಯಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಒಂದು ಹಂತದಲ್ಲಿ ಪರಿಸ್ಥಿತಿ ಹತೋಟಿ ಮೀರುವ ಸನ್ನಿವೇಶ ಸೃಷ್ಟಿಯಾಗಿತ್ತು. ಕುಮಾರಸ್ವಾಮಿ ಪರ ಮತ್ತು ವಿರೋಧಿ ಬಣಗಳ ಕಾರ್ಯಕರ್ತರು ಪಟ್ಟಣದ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಜಮಾಯಿಸಿ ಪರಸ್ವರ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಪರಸ್ಪರ ಕೈಕೈ ಮಿಲಾಯಿಸುವ ಹಂತ ತಲುಪಿದ್ದಾಗ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಘರ್ಷಣೆಯನ್ನು ಹತೋಟಿಗೆ ತರಲಾಯಿತು.

ಮೂಡಿಗೆರೆಯಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆ: ಕಾರ್ಯಕ್ರಮದ ಮೇಲೆ ಬಂಡಾಯದ ಕಾರ್ಮೋಡ

ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡಿದಂತೆ ಸಭೆ: ಇಂದು ಬೆಳಗ್ಗೆಯಿಂದಲೇ ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸುತ್ತಿರುವ ಪಕ್ಷದ ಕಾರ್ಯಕರ್ತರು ಪಟ್ಟಣದ ಪ್ರೀತಂ ಹಾಲ್ ನಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಕ್ಷೇತ್ರದ ಪ್ರಮುಖ ಬಿ.ಜೆ.ಪಿ. ಮುಖಂಡರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಿಕ್ಕಿರಿದು ಸೇರಿದ್ದರು. ವಿವಿಧ ಹೋಬಳಿಗಳ ಮುಖಂಡರುಗಳು ಮಾತನಾಡಿ ಶಾಸಕ ಕುಮಾರಸ್ವಾಮಿಯವರ ಕಾರ್ಯವೈಖರಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. 

click me!