ತುಮಕೂರಿನ 7 ಗ್ರಾಪಂಗೆ ಚುನಾವಣೆ : ಬಿಗಿ ಬಂದೋಬಸ್ತ್

Published : Jul 18, 2023, 06:04 AM IST
 ತುಮಕೂರಿನ 7 ಗ್ರಾಪಂಗೆ ಚುನಾವಣೆ : ಬಿಗಿ ಬಂದೋಬಸ್ತ್

ಸಾರಾಂಶ

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ 7 ಗ್ರಾಪಂಗಳಿಗೆ ನಡೆದ 2 ಹಂತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಐದರಲ್ಲಿ ಅವಿರೋಧ ಆಯ್ಕೆ ನಡೆದಿದ್ದು, 2 ಪಂಚಾಯಿತಿಗಳಲ್ಲಿ ಚುನಾವಣೆ ನಡೆದಿದ್ದು, 7 ಗ್ರಾಮ ಪಂಚಾಯಿತಿಗಳಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ 7 ಗ್ರಾಪಂಗಳಿಗೆ ನಡೆದ 2 ಹಂತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಐದರಲ್ಲಿ ಅವಿರೋಧ ಆಯ್ಕೆ ನಡೆದಿದ್ದು, 2 ಪಂಚಾಯಿತಿಗಳಲ್ಲಿ ಚುನಾವಣೆ ನಡೆದಿದ್ದು, 7 ಗ್ರಾಮ ಪಂಚಾಯಿತಿಗಳಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿಡುವಳಲು: ನಿಡುವಳಲು ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟಜಾತಿಗೂ, ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹನುಮಂತರಾಯಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.

ನಾಗವಲ್ಲಿ: ನಾಗವಲ್ಲಿ ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯಗೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಂಗಳ ಗೌರಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಎನ್‌.ನಾಮಪತ್ರ ಸಲ್ಲಿಸಿದ್ದರು. ಎರಡು ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಮಂಗಳಗೌರಮ್ಮ, ಉಪಾಧ್ಯಕ್ಷರಾಗಿ ಜ್ಯೋತಿ.ಎನ್‌. ಅವರು ಅವಿರೋಧವಾಗಿ ಆಯ್ಕೆಯಾದರು.

ಹೊನ್ನುಡಿಕೆ: ಹೊನ್ನುಡಿಕೆ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ಜನರಲ… ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ರಾಮಕೃಷ್ಣಯ್ಯ (ಅಪ್ಪಿ) ಅವರು ಸ್ಪರ್ಧಿಸಿದ್ದರು. ಎರಡು ಹುದ್ದೆಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ, ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷರಾಗಿ ರಾಮಕೃಷ್ಣ (ಅಪ್ಪಿ) ಅವರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಹೆಬ್ಬೂರು: ಹೆಬ್ಬೂರು ಗ್ರಾಪಂನ ಅಧ್ಯಕ್ಷ ಸ್ಥಾನ ಜನರಲ… ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಕ್ಯಾಟಗೆರಿ(ಎ)ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ದೇವಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಬಾಬು ಎಚ್‌.ಎನ್‌ ಸ್ಪರ್ಧಿಸಿದ್ದು, ಎರಡು ನಾಮಪತ್ರಗಳ ಹೊರತು ಬೇರೆಯವರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೇ ದೇವಮ್ಮ, ಉಪಾಧ್ಯಕ್ಷರಾಗಿ ಬಾಬು ಎಚ್‌.ಎನ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಳ್ಳಾವಿ: ಬೆಳ್ಳಾವಿ ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟಜಾತಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಆರ್‌.ಎಸ್‌., ಉಪಾಧ್ಯಕ್ಷರಾಗಿ ಲೋಕಮ್ಮ ಅವರು ಸ್ಪರ್ಧಿ ಮಾಡಿದ್ದು, ಇವರ ವಿರುದ್ಧ ಉಮೇದುವಾರಿಕೆ ಬಾರದ ಹಿನ್ನೆಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.

ಮೈದಾಳ: ಮೈದಾಳ ಗ್ರಾಮಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಮಾದಗೊಂಡನ ಹಳ್ಳಿಯ ಬಿ.ಜಿ.ಉಮೇಶ್‌, ಉಪಾಧ್ಯಕ್ಷರಾಗಿ ಮಂಗಳಮ್ಮ ಅವರು ಚುನಾಯಿತರಾಗಿದ್ದಾರೆ. 31 ಸದಸ್ಯರನ್ನು ಒಳಗೊಂಡಿರುವ ಮೈದಾಳ ಗ್ರಾ.ಪಂ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಬೆಂಬಲಿತ ಸದಸ್ಯ ಉಮೇಶ್‌ ಬಿ.ಜಿ 23 ಮತಗಳನ್ನು ಪಡೆದರೆ, ಇವರ ಎದುರಾಳಿ ಮೈದಾಳದ ನರಸಿಂಹಮೂರ್ತಿ 8 ಮತಗಳನ್ನು ಪಡೆದರು.

ಮಲ್ಲಸಂದ್ರ: ಮಲ್ಲಸಂದ್ರ ಗ್ರಾಮಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹಬ್ಬತ್ತನಹಳ್ಳಿ ಮಂಜುಮ್ಮ ಅಧ್ಯಕ್ಷರಾಗಿ, ಕೊತ್ತಿಹಳ್ಳಿ ಗಿರೀಶ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್‌.ಸಿ. ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹಬ್ಬತ್ತನಹಳ್ಳಿ ಮಂಜುಮ್ಮ ವಿರುದ್ಧ ಹಾಲುನೂರು ದುಶ್ಯಂತಮಣಿ ಸ್ಪರ್ಧಿಸಿದ್ದರೆ, ಉಪಾಧ್ಯಕ್ಷ ಸ್ಥಾನಕ್ಕೆ ಹಬ್ಬತ್ತನಹಳ್ಳಿಯ ಎಂ.ಆರ್‌.ಮಂಜುನಾಥ್‌ ಸ್ಪರ್ಧೆ ಮಾಡಿದ್ದರು.

ಮಲ್ಲಸಂದ್ರ ಗ್ರಾ.ಪಂನಲ್ಲಿ 22 ಸದಸ್ಯರಿದ್ದು, ಮಂಜಮ್ಮ ಪರ 13 ಮತಗಳು ಚಲಾವಣೆಯಾಗಿದ್ದು, ದುಶ್ಯಂತಮಣಿ ಪರ 08 ಮತಗಳು ಚಲಾವಣೆಯಾಗಿದ್ದು, ಒಂದು ಮತ ತಿರಸ್ಕೃತಗೊಂಡಿತ್ತು. ಉಪಾಧ್ಯಕ್ಷ ಸ್ಥಾನದಲ್ಲಿ ಗಿರೀಶ್‌ 13 ಮತ ಪಡೆದರೆ, ಎಂ.ಆರ್‌. ಮಂಜುನಾಥ್‌ 07 ಮತಗಳನ್ನು ಪಡೆದಿದ್ದರು.

ಇದುವರೆಗೂ ನಡೆದ 11 ಗ್ರಾಪಂ ಚುನಾವಣೆಯಲ್ಲಿ 10 ರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದ್ದು, ಜೆಡಿಎಸ್‌ ಸಾಧನೆ ಶೂನ್ಯವಾಗಿದೆ. ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಶಾಸಕ ಬಿ.ಸುರೇಶಗೌಡ ಶುಭ ಹಾರೈಸಿದ್ದಾರೆ.

PREV
Read more Articles on
click me!

Recommended Stories

Belagavi No-Fly Zone Declared: ಬೆಳಗಾವಿಗೆ ಆಗಮಿಸಿದ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್, ಭಾರೀ ಬಿಗಿ ಭದ್ರತೆ! ಕಾರ್ಯಕ್ರಮಕ್ಕೆ ಅನುಮತಿ ಸಿಗುತ್ತಾ?
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಬಿಜೆಪಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ