ಹುಣಸೂರು: ಸೂಕ್ತ ದಾಖಲೆಗಳಿಲ್ಲದ 2 ಕೋಟಿ ರು. ಹಣ ಜಪ್ತಿ

Published : Nov 27, 2019, 09:15 AM IST
ಹುಣಸೂರು: ಸೂಕ್ತ ದಾಖಲೆಗಳಿಲ್ಲದ 2 ಕೋಟಿ ರು. ಹಣ ಜಪ್ತಿ

ಸಾರಾಂಶ

ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ವಶ ಪಡಿಸಿಕೊಂಡ ಚುನಾವಣಾಧಿಕಾರಿಗಳು| ಹುಣಸೂರು ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ನಡೆದ ಘಟನೆ| ಎಂ.ಡಿ.ಸಿ.ಸಿ.ಬ್ಯಾಂಕ್ ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿದ್ದ ಎರಡು ಕೋಟಿ ಹಣವನ್ನು ಪಿರಿಯಾಪಟ್ಟಣ ಬ್ಯಾಂಕ್ ಗೆ ಸಾಗಿಸಲಾಗುತ್ತಿದ್ದರು| 

ಮೈಸೂರು(ನ.27): ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಚುನಾವಣಾಧಿಕಾರಿಗಳು  ವಶಪಡಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಇಂದು(ಬುಧವಾರ) ನಡೆದಿದೆ. 

ಎಂ.ಡಿ.ಸಿ.ಸಿ.ಬ್ಯಾಂಕ್ ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿದ್ದ ಎರಡು ಕೋಟಿ ಹಣವನ್ನು ಪಿರಿಯಾಪಟ್ಟಣ ಬ್ಯಾಂಕ್ ಗೆ ಸಾಗಿಸಲಾಗುತ್ತಿದ್ದರು. ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಾಹನವನ್ನು ತಪಾಸಣೆ ನಡೆಸಿದ ವೇಳೆ ಸೂಕ್ತ ದಾಖಲೆಗಳಿಲ್ಲದ ಹಣ ಪತ್ತೆಯಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ವೇಳೆ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಪಿರಿಯಾಪಟ್ಟಣ ಬ್ಯಾಂಕಿಗೆ ಸಾಗಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ಹಣ ಸಾಗಿಸುವ ಮುನ್ನ ಬ್ಯಾಂಕ ಅಧಿಕಾರಿಗು ಚುನಾವಣಾಧಿಕಾರಿಗಳ ಅನುಮತಿ ಪಡೆದಿಲಿಲ್ಲ. ಇದರ ಜೊತೆಗೆ ಗನ್‌ಮ್ಯಾನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಲಾಗುತ್ತಿತ್ತು. 

ಬ್ಯಾಂಕ್ ಗೆ ಸೇರಿದ ಹಣವನ್ನು ಚೀಲದಲ್ಲಿ ಸಾಗಿಸುವ ಅವಶ್ಯಕತೆ ಏನು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಚುನಾವಣಾಧಿಕಾರಿಗು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ವಾಹನದಲ್ಲಿ ಡ್ರೈವರ್ ಸೇರಿದಂತೆ ನಾಲ್ಕು ಮಂದಿ ಹಣ ಸಾಗಿಸುತ್ತಿದ್ದರು. 

ಸೂಕ್ತ ದಾಖಲೆ ಒದಗಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ.  ಸೂಕ್ತ ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದರ ಬಗ್ಗೆ ಎಂ.ಡಿ.ಸಿ.ಸಿ. ಬ್ಯಾಂಕ್ ನ ಇಬ್ಬರು ನೌಕರರಿಗೆ ನೋಟೀಸ್ ಜಾರಿ ಮಾಡಲಾಗಿದೆ. 
ಹುಣಸೂರು ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!