Protest: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ

By Sathish Kumar KHFirst Published Dec 5, 2022, 2:15 PM IST
Highlights

ಮೀಟರ್ ಬೋರ್ಡ್, ಎಲೆಕ್ಟ್ರಿಕಲ್ ವೈರ್, ವಿದ್ಯುತ್ ಉಪಕರಣಗಳನ್ನ ಹಿಡಿದು ವಿಭಿನ್ನ ರೀತಿಯಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ವರದಿ- ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು ( ಡಿ.5): ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಟರ್ ಬೋರ್ಡ್, ಎಲೆಕ್ಟ್ರಿಕಲ್ ವೈರ್, ವಿದ್ಯುತ್ ಉಪಕರಣಗಳನ್ನ ಹಿಡಿದು ವಿಭಿನ್ನ ರೀತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಗುತ್ತಿಗೆದಾರರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರ ಕೈಗೊಂಡಿರುವ ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಮಾತಿಗೂ ಕ್ಯಾರೆ ಎನ್ನದ ಬೆಸ್ಕಾಂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಬೆಸ್ಕಾಂ ಅಧಿಕಾರಿಗಳ ಬೇಜಾವ್ದಾರಿ ನಡೆಯಿಂದ ಬೆಸ್ಕಾಂ ಗ್ರಾಹಕರು, ಗುತ್ತಿಗೆದಾರರು ಹಾಗೂ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಿರ್ಲಕ್ಷ್ಯವಹಿಸುತ್ತಿರುವ ಎಲ್ಲಾ ಬೆಸ್ಕಾಂ ಅಧಿಕಾರಿಗಳನ್ನ ಅಮಾನತು ಮಾಡಬೇಕು. ಜೊತೆಗೆ ಎಲ್ಲ ಸಮಸ್ಯೆಗಳು ಬಗೆಹರಿಯಬೇಕು. ಸ್ಥಳಕ್ಕೆ ಇಂಧನ ಸಚಿವರು ಬರಬೇಕು ಎಂದು ರಾಜ್ಯಾಧ್ಯಕ್ಷ ರಮೇಶ್‌ ಒತ್ತಾಯಿಸಿದ್ದಾರೆ.

3 ತಿಂಗಳು ವಿದ್ಯುತ್ ಬಿಲ್ ಕಟ್ಟದಿದ್ದರೆ ನಿಮ್ಮ ಮನೆಯ ‌ವಿದ್ಯುತ್ ಸಂಪರ್ಕ ಲೈಸೆನ್ಸ್ ರದ್ದು

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಬೇಡಿಕೆಗಳೇನು?

  • ಸರ್ವರ್‌ ಮತ್ತು ಮೀಟರ್‌ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು.
  • ರಾಜ್ಯದಲ್ಲಿ 1 ಲಕ್ಷ ರೂ.ಗಳಿಂದ 5 ಲಕ್ಷ ರೂ. ಒಳಗಿನ ಮೊತ್ತದ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು.
  • ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ತತ್ಕಾಲ್‌ ಯೋಜನೆ ಅಡಿಯಲ್ಲಿ ನೀಡುತ್ತಿದ್ದ ಅನುದಾನ ಸ್ಥಗಿತಗೊಳಿಸಲಾಗಿದ್ದು, ಇದಕ್ಕೆ ಚಾಲನೆ ನೀಡಲು ಕೂಡಲೇ ಅನುದಾನ ನೀಡಬೇಕು.
  • ಬೆಳಕು ಯೋಜನೆಗೆ ಬೆಸ್ಕಾಂ ನೀಡುತ್ತಿರುವ ದರವನ್ನು ಎಲ್ಲಾ ಎಸ್ಕಾಂಗಳಲ್ಲಿ ಜಾರಿಗೊಳಿಸಿ, ಈ ಯೋಜನೆಯ ಕಾಮಗಾರಿ ನಿರ್ವಹಿಸಿರುವ ಬಿಲ್‌ಗಳಿಗೆ ಹಣ ಬಿಡುಗಡೆ ಮಾಡಬೇಕು.
  • ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಕೆಇಆರ್‌ಸಿ ನಿಯಮ ಜಾರಿಗೊಳಿಸಬೇಕು.
  • ಲೋಕೋಪಯೋಗಿ ಇಲಾಖೆ, ನೀರಾವರಿ ನಿಗಮ, ಮಹಾನಗರ ಪಾಲಿಕೆ, ಪಂಚಾಯತ್‌ ರಾಜ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿವಿಲ್‌ ಕಾಮಗಾರಿಗಳ ಜೊತೆಗೆ ವಿದ್ಯುತ್‌ ಕಾಮಗಾರಿಗಳನ್ನು ಸೇರಿ ಟೆಂಡರ್ ಕರೆಯುತ್ತಿರುವುದನ್ನು ರದ್ದುಗೊಳಿಸಿ, ಪ್ರತ್ಯೇಕ ಟೆಂಡರ್‌ ಕರೆಯಬೇಕು.
click me!