ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಳೆಕೆರೆ ಗ್ರಾಮದಲ್ಲಿ ಎಸ್ಟೇಟ್‌ನಲ್ಲಿ ನಡೆದ ಘಟನೆ
ಚಿಕ್ಕಮಗಳೂರು(ಅ.05): ತೋಟದಲ್ಲಿ ತೋಡಿದ್ದ ಹೊಂಡಕ್ಕೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಳೆಕೆರೆ ಗ್ರಾಮದಲ್ಲಿ ಎಸ್ಟೇಟ್‌ನಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. 10 ವರ್ಷದ ಹೆಣ್ಣಾನೆ ಮೃತಪಟ್ಟಿದೆ.
ಗೀತಾಂಜಲಿ ಎಸ್ಟೇಟ್‌ನಲ್ಲಿ ಕಾಲು ಜಾರಿ ಬಿದ್ದು ಆನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾಡಾನೆಗಳು ಕಾಫಿ ತೋಟಕ್ಕೆ ಬಾರದಂತೆ 10×10 ಅಳತೆಯ ಕಂದಕವನ್ನ ತೋಟದ ಮಾಲೀಕರು ತೋಡಿದ್ದರು.
ಕಾಶ್ಮೀರದ ದೇವಾಲಯಕ್ಕೆ ಶೃಂಗೇರಿಯಿಂದ ಪಂಚಲೋಹ ಮೂರ್ತಿ ಹಸ್ತಾಂತರ
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ವೈದ್ಯರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಸಾವಿನ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ, ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಅಂತ ತಿಳಿದು ಬಂದಿದೆ.