ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ, ಕೂದಲೆಳೆ ಅಂತರದಲ್ಲಿ ಬೈಕ್‌ ಸವಾರ ಪಾರು..!

By Kannadaprabha News  |  First Published Apr 10, 2024, 2:12 PM IST

ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. 


ಬೆಳ್ತಂಗಡಿ(ಏ.10): ಚಾರ್ಮಾಡಿ ಘಾಟಿಯ ಒಂಭತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಕಳೆದ ಸುಮಾರು ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲಿ ಸಂಚರಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನರಿಯ ಕಾಡಿನ ಕಡೆಗೆ ತೆರಳಿದೆ.

ಬೈಕ್‌ ಸವಾರ ಪಾರು: 

Tap to resize

Latest Videos

ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರು. ಅದನ್ನು ತಿಳಿಯದ ಆತ ಸಂಚಾರ ನಡೆಸಿದ್ದಾನೆ. ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು, ಆದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ

ಬಿಸಿಲಿನ ತಾಪ, ಕುಡಿಯುವ ನೀರು ಸಿಗದೆ ಕನಕಪುರದಲ್ಲಿ 2 ಕಾಡಾನೆಗಳ ಸಾವು

ಕಲ್ಮಂಜದಿಂದ ಚಾರ್ಮಾಡಿಯತ್ತ?

ಶನಿವಾರ ರಾತ್ರಿ ಕಾಡಾನೆ ಕಲ್ಕಂಜದ ತೋಟವೊಂದರಲ್ಲಿ ದಾಂದಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗು ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಕಂಜದಲ್ಲಿ ದಾಂದಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ. ಪ್ರಸ್ತುತ ಕಾಡಿನ ಕೆರೆಗಳು ನೇತ್ರಾವತಿ ನದಿ ಸಂಪೂರ್ಣ ಒಣಗಿದ್ದು ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ, ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

click me!