ಕೆಂಪೇಗೌಡರ ಆದರ್ಶ ಗುಣಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳುವಂತಾಗಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿಗಳು ಹೇಳಿದರು.
ಶಿರಾ : ಸಮಾನತವಾದಿ ಕೆಂಪೇಗೌಡರ ಜೀವನ ಚರಿತ್ರೆಯನ್ನು ಎಲ್‌ಕೆಜಿಯಿಂದ ಪದವಿ ಶಿಕ್ಷಣ ದವರೆಗೆ ಪಠ್ಯಪುಸ್ತಕಗಳಲ್ಲಿ ಅಳವಡಿಸಿ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪಾಠ ರೂಪದಲ್ಲಿ ಬೋಧಿಸಿ ಕೆಂಪೇಗೌಡರ ಆದರ್ಶ ಗುಣಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳುವಂತಾಗಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿಗಳು ಹೇಳಿದರು.
ಸೋಮವಾರ ತಾಲೂಕಿನ ಪಟ್ಟ ನಾಯಕನಹಳ್ಳಿಯ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠದಲ್ಲಿ ಹಮ್ಮಿಕೊಂಡಿದ್ದ ನಾಡ ಪ್ರಭು ಕೆಂಪೇಗೌಡರ ಸಾಮ್ರಾಜ್ಯ ಸಂಸ್ಥಾಪನ ದಿನ ಹಾಗೂ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಪಠ್ಯಪುಸ್ತಕಗಳಲ್ಲಿ ಕೆಂಪೇಗೌಡರ ಜೀವನ ಚರಿತ್ರೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಮುದ್ರಿಸುವಂತಹ ಕೆಲಸ ಮಾಡಬೇಕಿದೆ. ತನ್ನ ಸಾಮ್ರಾಜ್ಯದ ಪ್ರಜೆಗಳ ಹಿತ ಬಯಸಿ ತನ್ನ ಸೇವೆಯನ್ನು ಪ್ರಜೆಗಳಿಗೆ ಅರ್ಪಣೆ ಮಾಡಿಕೊಂಡ ನಾಡಪ್ರಭು ಕೆಂಪೇಗೌಡರ ಸಾಮ್ರಾಜ್ಯ ಸಂಸ್ಥಾಪನಾ ದಿನವನ್ನು ಬೆಂಗಳೂರು ಹಬ್ಬವಾಗಿ ಆಚರಣೆ ಮಾಡುವುದರ ಜೊತೆಗೆ, ನಮ್ಮ ಮೆಟ್ರೋಗೆ ನಾಡಪ್ರಭು ಕೆಂಪೇಗೌಡರ ಹೆಸರಿಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
undefined
ಈ ವೇಳೆ ನಾದೂರು ಗ್ರಾಪಂ ಸದಸ್ಯರಾದ ವಿಜಯಕುಮಾರ್, ಮಂಜುನಾಥ ಸ್ವಾಮಿ, ತಮ್ಮಣ್ಣ, ನಿರಂಜನ, ಆರ್. ಕೆ .ಮಾರುತಿ, ನಿವೃತ್ತ ಶಿಕ್ಷಕ ನಾಗರಾಜು, ಮಂಜುನಾಥ ಗುಪ್ತ, ಉದ್ದರಾಮನಹಳ್ಳಿ ಶಿವಣ್ಣ, ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠದಲ್ಲಿ ನಾಡ ಪ್ರಭು ಕೆಂಪೇಗೌಡರ ಸಾಮ್ರಾಜ್ಯ ಸಂಸ್ಥಾಪನ ದಿನ ಹಾಗೂ ಸಂಕ್ರಾಂತಿ ಹಬ್ಬ ಕಾರ್ಯಕ್ರಮ ಏರ್ಪಡಿಸಲಾಗಿತ್ತು.