ವಕೀಲ ಸಂರಕ್ಷಣಾ ಕಾಯಿದೆಗೆ ಒತ್ತಾಯಿಸಿ ಪಟ್ಟಣದಲ್ಲಿ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಗುಬ್ಬಿ ವೀರಣ್ಣ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಗುಬ್ಬಿ : ವಕೀಲ ಸಂರಕ್ಷಣಾ ಕಾಯಿದೆಗೆ ಒತ್ತಾಯಿಸಿ ಪಟ್ಟಣದಲ್ಲಿ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಗುಬ್ಬಿ ವೀರಣ್ಣ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಕೆ.ಟಿ.ಪ್ರಕಾಶ್ ವಕೀಲರಿಗೆ ರಕ್ಷಣೆ ಇಲ್ಲವಾದಲ್ಲಿ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ. ಸರ್ಕಾರವು ವಕೀಲರ ಸಂಕಷ್ಟಗಳನ್ನು ಅರ್ಥೈಸಿಕೊಂಡು ಅವರ ರಕ್ಷಣೆಗೆ ಕಾಯ್ದೆಯನ್ನು ಪ್ರಸ್ತುತ ಅಧಿವೇಶನದಲ್ಲಿಯೇ ಪಾಸು ಮಾಡುವಂತೆ ಒತ್ತಾಯಿಸಿದರು.
undefined
ಸಂಘದ ಕಾರ್ಯದರ್ಶಿ ರವೀಶ್ ಮಾತನಾಡಿ, ಸಂವಿಧಾನದ ರಕ್ಷಕರಂತೆ ಕೆಲಸ ಮಾಡುತ್ತಿರುವ ವಕೀಲರಿಗೆ ರಕ್ಷಣೆಯ ಅಗತ್ಯವಿದೆ. ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕವಾಗಿದ್ದು, ಕಾಯ್ದೆ ಅನುಮೋದನೆ ಗೊಳ್ಳದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.ವಕೀಲ ಕೆ.ಜಿ.ನಾರಾಯಣ್, ಹಿರಿಯ ವಕೀಲರಾದ ಸದಾಶಿವಯ್ಯ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿದ್ದರು.
ಜಡ್ಜ್ಗಳ ನಿಂದಿಸಿದವಗೆ ನ್ಯಾಯಾಂಗ ಬಂಧನ
ಬೆಂಗಳೂರು (ಫೆಬ್ರವರಿ 9, 2023): ನ್ಯಾಯಾಂಗ ಹಾಗೂ ನ್ಯಾಯಮೂರ್ತಿಗಳ ವಿರುದ್ಧ ವೃಥಾ ಆರೋಪ ಮಾಡಿದ ಹಿನ್ನೆಲೆಯಲ್ಲಿ ವಕೀಲ ಕೆ.ಎಸ್. ಅನಿಲ್ ಅವರನ್ನು ಹೈಕೋರ್ಟ್ ಫೆಬ್ರವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಕೀಲ ಕೆ.ಎಸ್. ಅನಿಲ್ ವಿರುದ್ಧ ದಾಖಲಿಸಿಕೊಳ್ಳಲಾಗಿದ್ದ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಫೆಬ್ರವರಿ 2ರಂದು ಈ ಆದೇಶ ಹೊರಡಿಸಿದೆ.
ಇದನ್ನು ಓದಿ: ಅಕ್ರಮವಾಗಿ ವಾಸ: ಬಾಂಗ್ಲಾ ಪ್ರಜೆಗೆ ಜಾಮೀನು ನೀಡಲು ಒಪ್ಪದ ಹೈಕೋರ್ಟ್
ಆರೋಪಿ ವಕೀಲ ನ್ಯಾಯಾಂಗ ನಿಂದನೆ ಎಸಗಿರುವುದು ಸಾಬೀತಾಗಿದೆ. ಇದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶ ಹೊರಡಿಸದೆ ಅನ್ಯ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು, ಫೆಬ್ರವರಿ 10ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಲ್ಲಿರಿಸಿ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಪೊಲೀಸರಿಗೆ ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹಾಲಿ ನ್ಯಾಯಮೂರ್ತಿಯೊಬ್ಬರ ವಿರುದ್ಧ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ದೂರು ನೀಡಲಾಗಿದೆ. ಆ ನ್ಯಾಯಪೀಠಗಳನ್ನು ಹೊರತುಪಡಿಸಿ ಬೇರೆ ಪೀಠಕ್ಕೆ ತಮ್ಮ ಅರ್ಜಿಯನ್ನು ವರ್ಗಾಯಿಸಬೇಕು ಎಂದು ತಿಳಿಸಿ ವಿಚಾರಣೆ ವೇಳೆ ಆರೋಪಿ ಮೆಮೊ ಸಲ್ಲಿಸಿದ್ದರು. ಮೆಮೋದಲ್ಲಿ ಕೆಲ ಅವಹೇಳನಕಾರಿ ಹೇಳಿಕೆ ಉಲ್ಲೇಖಿಸಿದ್ದರಲ್ಲದೆ, ನ್ಯಾಯಾಲಯದ ಮುಂದೆ ಉಡಾಫೆಯ ವರ್ತನೆ ತೋರಿದ್ದಾರೆ.
ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಸ್ನೆಹಿತನ ಇರಿದು ಕೊಂದ ಗೆಳೆಯ: ಒಟ್ಟಿಗೇ ಮದ್ಯ ಸೇವನೆ ವೇಳೆ ಜಗಳ
ನ್ಯಾಯಮೂರ್ತಿಗಳ ವಿರುದ್ಧವೇ ಆರೋಪ ಮಾಡಿರುವ ಆರೋಪಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವವಿಲ್ಲ ಎಂದೆನಿಸುತ್ತದೆ. ಖುದ್ದು ವಕೀಲರಾಗಿರುವ ಆರೋಪಿ ನಿರಂತರವಾಗಿ ವೃಥಾ ಆರೋಪ ಮಾಡುವ ಮೂಲಕ ನ್ಯಾಯಾಂಗದ ಘನತೆಗೆ ಕುಂದುಂಟಾಗುವಂತೆ ನಡೆದುಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ ಹೈಕೋರ್ಟ್, ಆರೋಪಿಯನ್ನು ಫೆಬ್ರವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
ವಕೀಲ ಅನಿಲ್ ಅವರಿಗೆ ಸಂಬಂಧಿಸಿದ ತಕರಾರು ಅರ್ಜಿಯೊಂದನ್ನು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. 2019ರ ಜೂನ್ 18ರಂದು ಮೆಮೊ ಸಲ್ಲಿಸಿದ್ದ ವಕೀಲ, ಏಕ ಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿಗಳು ಭ್ರಷ್ಟರು ಎಂದು ಆರೋಪ ಮಾಡಿದ್ದರು. ಅಲ್ಲದೆ, ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳು ಭ್ರಷ್ಟನ್ಯಾಯಮೂರ್ತಿಗಳು ಎಂದು ಹೇಳಿಕೆ ನೀಡಿದ್ದರು. ಅದನ್ನು ಗಂಭಿರವಾಗಿ ಪರಿಗಣಿಸಿದ್ದ ವಿಭಾಗೀಯ ಪೀಠ, ವಕೀಲ ಅನಿಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾತಿಗೆ ಆದೇಶಿಸಿತ್ತು.