ತುಮಕೂರು ಜಿಲ್ಲೆಯಲ್ಲಿ 2618 ಮತಗಟ್ಟೆಗ ಸ್ಥಾಪನೆ

By Kannadaprabha News  |  First Published Mar 27, 2024, 10:34 AM IST

ತುಮಕೂರು ಲೋಕಸಭಾ ಕ್ಷೇತ್ರದ 1846 ಮತಗಟ್ಟೆಗಳು ಹಾಗೂ ಶಿರಾ, ಪಾವಗಡ, ಕುಣಿಗಲ್ ಕ್ಷೇತ್ರಗಳ ಮತಗಟ್ಟೆಗಳು ಒಳಗೊಂಡಂತೆ ಜಿಲ್ಲೆಯಲ್ಲಿ ಒಟ್ಟು 2618 ಮತಗಟ್ಟೆ ಸ್ಥಾಪಿಸಲಾಗಿದ್ದು, ಈ ಪೈಕಿ 546 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗ ಳೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.


 ತುಮಕೂರು :  ತುಮಕೂರು ಲೋಕಸಭಾ ಕ್ಷೇತ್ರದ 1846 ಮತಗಟ್ಟೆಗಳು ಹಾಗೂ ಶಿರಾ, ಪಾವಗಡ, ಕುಣಿಗಲ್ ಕ್ಷೇತ್ರಗಳ ಮತಗಟ್ಟೆಗಳು ಒಳಗೊಂಡಂತೆ ಜಿಲ್ಲೆಯಲ್ಲಿ ಒಟ್ಟು 2618 ಮತಗಟ್ಟೆ ಸ್ಥಾಪಿಸಲಾಗಿದ್ದು, ಈ ಪೈಕಿ 546 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗ ಳೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಸಂಬಂಧ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20932 ವಿಕಲಚೇತನ ಮತದಾರರು, 85 ವರ್ಷ ಮೇಲ್ಪಟ್ಟ 21,856 ಸೇರಿದಂತೆ ಒಟ್ಟು 42,788 ಮತದಾರರಿದ್ದು, ಜಿಲ್ಲೆಯಲ್ಲಿ ಒಟ್ಟು 60,435 ಮತದಾರರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು. ಉಪಸ್ಥಿತರಿದ್ದ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ಮತಗಟ್ಟೆಗಳ ಪಟ್ಟಿಗಳನ್ನು ನೀಡಲಾಯಿತು.

Tap to resize

Latest Videos

undefined

ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಅಧಿಸೂಚನೆಯಲ್ಲಿ ಹೊರಡಿಸಿದ ಸ್ಥಳದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ 29 ರ ಗುಡ್ ಫ್ರೈಡೇ ಹಾಗೂ ಮಾ.31 ರ ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಹೆಸರು ಯಾವುದೇ ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು. ಅಭ್ಯರ್ಥಿಯು 25 ವರ್ಷ ವಯೋಮಿತಿಯವರಾಗಿದ್ದು, ಭಾರತೀಯ ನಾಗರೀಕರಾಗಿರಬೇಕು. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಓರ್ವ ಸೂಚಕರನ್ನು ಹೊಂದಲು ಅವಕಾಶವಿದ್ದು, ಈ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು. ನೋಂದಾಯಿತ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳಿಗೆ 10 ಜನ ಸೂಚಕರು ಕಡ್ಡಾಯವಾಗಿ ಇರಬೇಕು. ಎಲ್ಲಾ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು ಎಂದು ತಿಳಿಸಿದರು.

ಓರ್ವ ಅಭ್ಯರ್ಥಿಯು ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಒಂದು ನಾಮಪತ್ರದ ಜೊತೆ ಪೂರ್ಣ ಪ್ರಮಾಣದ ದಾಖಲಾತಿ ನೀಡಿದಲ್ಲಿ ಉಳಿಕೆ ನಾಮಪತ್ರಗಳಿಗೆ ಕೇವಲ ನಾಮಪತ್ರ ಮಾತ್ರ ಸಲ್ಲಿಸಿದರೆ ಸಾಕು ಎಂದು ತಿಳಿಸಿದರು.

click me!