ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ಗಡಿಪಾರು: ಸಚಿವ ಗುಂಡೂರಾವ್‌

By Kannadaprabha News  |  First Published Aug 2, 2023, 3:30 AM IST

ನೈತಿಕ ಪೊಲೀಸ್‌ಗಿರಿಯಂಥ ಕಾನೂನು ಬಾಹಿರ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದು, ಹಲ್ಲೆ, ಭಯ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ 


ಮಂಗಳೂರು(ಆ.02):  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸುವ ಕ್ರಿಮಿನಲ್‌ಗಳಿಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಇಂಥ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು, ಜಿಲ್ಲೆಯಿಂದಲೇ ಗಡಿಪಾರು ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನೈತಿಕ ಪೊಲೀಸ್‌ಗಿರಿಯಂಥ ಕಾನೂನು ಬಾಹಿರ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದು, ಹಲ್ಲೆ, ಭಯ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

Tap to resize

Latest Videos

ಮಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಉದ್ದೇಶಪೂರ್ವಕ ಕೃತ್ಯ: ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟಹೆಸರು ತರಲು ಕೋಮುವಾದಿ ಶಕ್ತಿಗಳು ಇಂಥ ಕೆಲಸ ಮಾಡುತ್ತಿವೆ. ಸಂಘ ಪರಿವಾರದವರೂ ಇದರಲ್ಲಿ ಶಾಮೀಲಾಗಿದ್ದಾರೆ. ಇಂಥ ವಾತಾವರಣದಿಂದಾಗಿ ಹೊರಗಿನ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯಪಡುತ್ತಿದ್ದಾರೆ. ಮಂಗಳೂರಿನಲ್ಲಿ ಕಾಲೇಜು ದಾಖಲಾತಿ ಆಗದಿದ್ದರೂ ಹೋಗಲು ಭಯವಾಗುತ್ತಿದೆ ಅಂತ ವಿದ್ಯಾರ್ಥಿಗಳೇನಕರು ನನಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರಕ್ಕೆ ಕೆಟ್ಟಹೆಸರು ತರುವುದಕ್ಕಾಗಿ ಉದ್ದೇಶಪೂರ್ವಕವಾಗಿ ಇಂಥ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂದು ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ಜಿಲ್ಲೆಯಲ್ಲಿ ಶಾಂತಿ ಬೇಡ್ವಾ?: 

ನೈತಿಕ ಪೊಲೀಸ್‌ಗಿರಿಯಂಥ ಕೆಲಸ ಮಾಡುವ ಕ್ರಿಮಿನಲ್‌ಗಳಿಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ್ವಾ ಎಂದು ಕಿಡಿಕಾರಿದ ಅವರು, ಜಿಲ್ಲೆಯ ಶಾಂತಿ ಸಾಮರಸ್ಯಕ್ಕೆ ಜನತೆ ಸಹಕಾರ ನೀಡಬೇಕು ಎಂದು ಹೇಳಿದರು.

click me!