ಧಾರವಾಡ-ಮೈಸೂರು ಎಕ್ಸ್‌ಪ್ರೆಸ್‌ ರೈಲು ಬೆಳಗಾವಿಗೂ ವಿಸ್ತರಣೆ

By Kannadaprabha News  |  First Published Sep 8, 2023, 3:30 AM IST

ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. 


ಬೆಳಗಾವಿ(ಸೆ.08): ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್‌ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. 

ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್‌ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು. 

Tap to resize

Latest Videos

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೆದರಿಕೆ ಶುರುವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್‌ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

click me!